ETV Bharat / bharat

ಸಕಲ ಸರ್ಕಾರಿ ಗೌರವ, ಸಿಖ್​ ಸಂಪ್ರದಾಯದಂತೆ ಡಾ. ಮನಮೋಹನ ಸಿಂಗ್​​​ಗೆ ಅಂತಿಮ ವಿದಾಯ - MANMOHAN SINGH FUNERAL

ಆರ್ಥಿಕ ಸುಧಾರಣೆಗಳ ಹರಿಕಾರ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್​ ಅವರ ​ಅಂತ್ಯಕ್ರಿಯೆ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮಬೋಧ್ ಘಾಟ್‌ನಲ್ಲಿ ನೆರವೇರಿತು.

DR MANMOHAN SINGH  FORMER PM MANMOHAN SINGH  ಡಾ ಮನಮೋಹನ್ ಸಿಂಗ್ ಅಂತ್ಯಕ್ರಿಯೆ
ಮರೆಯಾದ ಮಾಜಿ ಪ್ರಧಾನಿ: ನೆರವೇರಿದ ಡಾ. ಮನಮೋಹನ್ ಸಿಂಗ್​ ಅಂತ್ಯಕ್ರಿಯೆ (ANI VIDEO)
author img

By ETV Bharat Karnataka Team

Published : 15 hours ago

ನವದೆಹಲಿ: ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ ಭಾರತದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅಂತ್ಯಕ್ರಿಯೆ ದೆಹಲಿಯ ನಿಗಮಬೋಧ್ ಘಾಟ್‌ನಲ್ಲಿ ಸಿಖ್​ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ಭುತಾನ್​ ರಾಜ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ಚುಕ್, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್​ ಓಂ ಬಿರ್ಲಾ, ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್​ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​​ರಿಂದ ಹಿಡಿದು ಪ್ರಮುಖ ಗಣ್ಯರು, ಕೈ ನಾಯಕರು, ವಿದೇಶಿ ರಾಜತಾಂತ್ರಿಕರು ಪಾಲ್ಗೊಂಡರು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.

ಡಾ. ಮನಮೋಹನ್ ಸಿಂಗ್​ ಅಂತಿಮ ನಮನದಲ್ಲಿ ಗಣ್ಯರು ಭಾಗಿ (ANI)

ಅಮೆರಿಕ ಅಧ್ಯಕ್ಷ ಜೋ ಬೈಡನ್ ಸಂತಾಪ: ಶ್ವೇತಭವನ ಹೇಳಿಕೆ ಬಿಡುಗಡೆ: ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್​ ಅವರ ನಿಧನದ ಕುರಿತು ಅಧ್ಯಕ್ಷ ಜೋ ಬೈಡನ್ ಸಂತಾಪ ಸೂಚಿಸಿದ್ದು ಅವರ ಹೇಳಿಕೆಯನ್ನು ಶ್ವೇತಭವನ ಬಿಡುಗಡೆ ಮಾಡಿದೆ. "ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಕಳೆದುಕೊಂಡ ದುಃಖದಲ್ಲಿ ಜಿಲ್(ಬೈಡನ್​ ಪತ್ನಿ) ಮತ್ತು ನಾನು ಭಾರತದ ಜನರೊಂದಿಗೆ ನಾವು ಸೇರಿದ್ದೇವೆ. ಜಿಲ್ ಮತ್ತು ನಾನು ಮಾಜಿ ಪ್ರಥಮ ಮಹಿಳೆ ಗುರುಶರಣ್ ಕೌರ್, ಅವರ ಮೂವರು ಮಕ್ಕಳು ಮತ್ತು ಭಾರತದ ಎಲ್ಲಾ ಜನರಿಗೆ ನಮ್ಮ ಆಳವಾದ ಸಂತಾಪವನ್ನು ಸೂಚಿಸುತ್ತೇವೆ" ಎಂದಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಆರ್ಥಿಕ ಹರಿಕಾರನಿಗೆ ಅಂತಿಮ ನಮನ: ಇನ್ನು ಮನಮೋಹನ್ ಸಿಂಗ್ ಅವರ ಪಾರ್ಥಿವ ಶರೀರವನ್ನು ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಅಲ್ಲಿಂದ ಎಐಸಿಸಿ ಕೇಂದ್ರ ಕಚೇರಿಗೆ ಕರೆದೊಯ್ಯಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಬೆಳಗ್ಗೆ 9.30ರವರೆಗೆ ಅಲ್ಲಿಯೇ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ತದನಂತರ ಅಲ್ಲಿಂದ ಮಾಜಿ ಪ್ರಧಾನಿಯ ಅಂತಿಮ ಯಾತ್ರೆ ಆರಂಭವಾಯಿತು. ಯಾತ್ರೆಯಲ್ಲಿ ರಸ್ತೆ ಉದ್ದಕ್ಕೂ ಅಭಿಮಾನಿಗಳು ಪಾಲ್ಗೊಂಡಿದ್ದು, ಲಕ್ಷಾಂತರ ಜನರು ಭಾಗಿಯಾದರು.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಿಸೆಂಬರ್​ 26 ರ ರಾತ್ರಿ ನಿಧನರಾಗಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ದೇಶವನ್ನು ಅಪಾಯದಿಂದ ಪಾರು ಮಾಡಿದ ಮಹಾನ್ ಚೇತನದ ಅಗಲಿಕೆ ಹಿನ್ನೆಲೆ ಕೇಂದ್ರ ಸರ್ಕಾರ 7 ದಿನಗಳ ಶೋಕಾಚರಣೆ ಘೋಷಿಸಿದೆ.

ಇದನ್ನೂ ಓದಿ: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಕೇಂದ್ರ ಜಾಗ ಮಂಜೂರು ಮಾಡಲಿದೆ: ಗೃಹ ಸಚಿವಾಲಯದ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.