ETV Bharat / bharat

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತ ಸೇರಿ ಮೂವರ ಬಂಧನ

author img

By ETV Bharat Karnataka Team

Published : Mar 18, 2024, 2:18 PM IST

ಆಗ್ರಾದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಪ್ರಕರಣ ಸಂಬಂಧ ಆಕೆಯ ಸ್ನೇಹಿತ ಸೇರಿ ಮೂವರನ್ನು ಬಂಧಿಸಲಾಗಿದೆ.

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಆಗ್ರಾ: ಮೂವರು ಯುವಕರು ಸೇರಿಕೊಂಡು ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಆಗ್ರಾದಲ್ಲಿ ಶನಿವಾರ ಸಂಜೆ ನಡೆದಿದೆ. ದುರುಳರು ಸಿಕಂದರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಶ್ ದೇವಸ್ಥಾನದ ಬಳಿ ಇರುವ ಕಾಡಿನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಮೂವರಲ್ಲಿ ಒಬ್ಬ ಸಂತ್ರಸ್ತೆಯ ಸ್ನೇಹಿತನೆಂದು ತಿಳಿದು ಬಂದಿದೆ. ಮಾತನಾಡಬೇಕೆಂದು ಯುವತಿಯನ್ನು ಕಾಡಿಗೆ ಕರೊದೊಯ್ದ ಪ್ರಿಯತಮ ಬಳಿಕ ಆಕೆಯನ್ನು ತನ್ನ ಇತರ ಸ್ನೇಹಿತರಿಗೆ ಒಪ್ಪಿಸಿದ್ದಾನೆ. ಈ ವೇಳೆ ಪ್ರತಿಭಟಿಸಿದರೂ ಬಿಡದ ಕಾಮುಕರು, ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಹೇಳಿಕೆ ನೀಡಿದ್ದಾಳೆ. ಮನೆಗೆ ಬಂದ ಬಳಿಕ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ. ಪೋಷಕರು ತಕ್ಷಣ ಸಮೀಪದ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು, 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಠಾಣೆಯ ಪ್ರಭಾರಿ ಇನ್ಸ್‌ಪೆಕ್ಟರ್ ನೀರಜ್ ಶರ್ಮಾ ತಿಳಿಸಿದ್ದಾರೆ.

ಶನಿವಾರ ಸಂಜೆ ಯುವತಿಗೆ ಫೋನ್​ ಮಾಡಿದ ಆಕೆಯ ಸ್ನೇಹಿತ, ಬೈಕಿನಲ್ಲಿ ಕಾಡಿಗೆ ಕರೆದೊಯ್ದಿದ್ದಾನೆ. ಬಳಿಕ ಅಲ್ಲಿ ತನ್ನ ಇತರ ಇಬ್ಬರು ಸ್ನೇಹಿತರ ಜೊತೆ ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರತಿರೋಧ ಒಡ್ಡಿದರೂ ಬಿಡದ ಆರೋಪಿಗಳು, ಬೆದರಿಕೆ ಹಾಕಿ ತನ್ನ ಮೇಲೆ ಅತ್ಯಾಚಾರ ಮಾಡಿರುವುದಾಗಿ ಯುವತಿ ದೂರು ನೀಡಿದ್ದಾಳೆ. ಸ್ಥಳೀಯರ ಸಹಾಯದಿಂದ ಮನೆ ಸೇರಿದ್ದು ಮನೆಗೆ ಬಂದು ತನ್ನ ಪ್ರಿಯಕರ ಮತ್ತು ಅವನ ಸ್ನೇಹಿತರು ನಡೆಸಿದ ಕೃತ್ಯಗಳ ಬಗ್ಗೆ ತನ್ನ ತಾಯಿಗೆ ತಿಳಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ಸಂತ್ರಸ್ತೆಯನ್ನು ಸಿಕಂದರಾ ಪೊಲೀಸ್ ಠಾಣೆಗೆ ಕರೆತಂದು ದೂರು ನೀಡಿದ್ದಾರೆ. ದೂರಿನ ಮೇರೆಗೆ ಆಕೆಯ ಸ್ನೇಹಿತ ಸೇರಿ ಮೂವರನ್ನು ಪತ್ತೆ ಹಚ್ಚಿ ಬಂಧಿಸಿದ್ದೇವೆ. ಸದ್ಯ ಬಾಲಕಿಯು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ನೀರಜ್ ಶರ್ಮಾ ತಿಳಿಸಿದ್ದಾರೆ.

ಇದನ್ನೂ ಓದಿ: ತುಮಕೂರು: ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ - ಮೂವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.