ನವದೆಹಲಿ: Gas Cylinder Price Today:- ವಾಣಿಜ್ಯ ಉದ್ದೇಶಕ್ಕೆ ಬಳಸುವ ಅಡುಗೆ ಅನಿಲದ ಬೆಲೆ ಕೊಂಚ ಇಳಿಕೆಯಾಗಿದೆ. ಕೇಂದ್ರ ತೈಲ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 7 ರೂ. ಕಡಿತಗೊಳಿಸುವುದಾಗಿ ಘೋಷಿಸಿವೆ. ಇದರಿಂದಾಗಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ರೂ.1,797ಕ್ಕೆ ಇಳಿದಿದೆ. ಇಳಿಕೆಯಾದ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ತೈಲ ಕಂಪನಿಗಳು ಹೇಳಿವೆ. ಆದರೆ, 14.2 ಕೆಜಿ ಗೃಹೋಪಯೋಗಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಕಳೆದ ಐದು ತಿಂಗಳಿನಿಂದ ಹೆಚ್ಚುತ್ತಿರುವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಜನವರಿಯಲ್ಲಿ ಸ್ವಲ್ಪ ಕಡಿಮೆಯಾಗಿತ್ತು. ಜನವರಿ 1, 2025 ರಂದು, 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 14.5ರೂ. ಕಡಿಮೆ ಮಾಡಲಾಗಿತ್ತು.
ಗಮನಿಸಿ: ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ (ಎಚ್‌ಪಿಸಿಎಲ್) - ಬೆಂಚ್‌ಮಾರ್ಕ್ ಇಂಟರ್ನ್ಯಾಷನಲ್ ಇಂಧನ, ವಿದೇಶಿ ವಿನಿಮಯ ದರದ ಆಧಾರದ ಮೇಲೆ ಪ್ರತಿ ತಿಂಗಳು ಅಡುಗೆ ಅನಿಲ ಬೆಲೆಗಳು ಮತ್ತು ಎಟಿಎಫ್ ಬೆಲೆಗಳನ್ನು ಪ್ರತಿ ತಿಂಗಳು ಪರಿಷ್ಕರಿಸಲಾಗುತ್ತದೆ.
ಗ್ಯಾಸ್ ಸಿಲಿಂಡರ್ ಬೆಲೆಗಳನ್ನು ತಿಳಿದುಕೊಳ್ಳುವುದು ಹೇಗೆ?: LPG ಸಿಲಿಂಡರ್‌ಗಳ ನಿಜವಾದ ಬೆಲೆಗಳನ್ನು ನೀವು ತಿಳಿದುಕೊಳ್ಳಲು ಬಯಸಿದರೆ, ನೀವು https://iocl.com/prices-of-petroleum-products ಮೂಲಕ ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಎಲ್‌ಪಿಜಿ ಬೆಲೆಯ ಹೊರತಾಗಿ ಜೆಟ್ ಇಂಧನ, ಆಟೋ ಗ್ಯಾಸ್, ಸೀಮೆಎಣ್ಣೆ ಇತ್ಯಾದಿಗಳ ಬೆಲೆಗಳನ್ನು ಸಹ ಈ ವೆಬ್‌ಸೈಟ್‌ನಲ್ಲಿ ತಿಳಿದುಕೊಳ್ಳಬಹುದು.
ಇದನ್ನು ಓದಿ:10 ವರ್ಷಗಳಲ್ಲಿ ಆರು ಪಟ್ಟು ಬೆಳವಣಿಗೆ ಕಂಡ ಮ್ಯೂಚುವಲ್ ಫಂಡ್ ಉದ್ಯಮ: ಕಾರಣ ಏನು ಗೊತ್ತಾ?