ETV Bharat / bharat

ಮಂದಿರ ಉದ್ಘಾಟನೆ: ಪ್ರಧಾನಿ ಮೋದಿಗೆ ದೇವರೇ ನೀಡಿದ ಅವಕಾಶ - ದೇವೇಗೌಡ - ರಾಮಮಂದಿರ ಉದ್ಘಾಟನೆ

ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡರು ಭಾಗಹಿವಹಿಸಿದ್ದರು.

ದೇವೇಗೌಡ
ದೇವೇಗೌಡ
author img

By ANI

Published : Jan 22, 2024, 7:37 PM IST

ಅಯೋಧ್ಯೆ (ಉತ್ತರ ಪ್ರದೇಶ) : ಪ್ರಧಾನಿ ನರೇಂದ್ರ ಮೋದಿ ಅವರು ಶತಮಾನಗಳ ನಿರೀಕ್ಷೆಯ ಭವ್ಯ ರಾಮಮಂದಿರ ಉದ್ಘಾಟಿಸಿದ್ದು, ದೇವರು ನೀಡಿದ ಅವಕಾಶಗಳಲ್ಲಿ ಒಂದಾಗಿದೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್​​.ಡಿ. ದೇವೇಗೌಡ ಅವರು ಹೇಳಿದರು.

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಅಯೋಧ್ಯೆಯಲ್ಲಿ ಇಂದು ಭವ್ಯ ರಾಮಮಂದಿರ ಲೋಕಾರ್ಪಣೆಯಾಗಿದೆ. ಇಂತಹ ದಿವ್ಯ ಕಾರ್ಯಕ್ರಮದ ಯಜಮಾನತ್ವ ವಹಿಸಿದ ಮೋದಿ ಅವರು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಇದು ಅವರಿಗೆ ಸಿಕ್ಕ ಅದ್ಭುತ ಅವಕಾಶ ಎಂದು ಬಣ್ಣಿಸಿದರು.

ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದೆ. ಪ್ರಧಾನಿ ಮೋದಿ ಅವರು ಪೂಜೆ ಸಲ್ಲಿಸಿರುವುದು ನನಗೆ ಅತ್ಯಂತ ಸಂತಸ ತಂದಿದೆ. ಅವರು ಅಮೂಲ್ಯ ವ್ಯಕ್ತಿ. ಇಂತಹ ಅವಕಾಶ ಎಲ್ಲರಿಗೂ ಸಿಗದು. ಮೋದಿ ವಿಷ್ಣು ಮತ್ತು ಶಿವನ ಆಶೀರ್ವಾದವನ್ನು ಪಡೆದ ವ್ಯಕ್ತಿಯಾಗಿದ್ದಾರೆ ಎಂದು ಅವರು ಹೇಳಿದರು.

ವಿಪಕ್ಷಗಳ ನಿರ್ಧಾರ ಸರಿಯಲ್ಲ: ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ವಿಪಕ್ಷಗಳು ಗೈರಾದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡರು, ಇಂತಹ ದಿವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವುದೇ ಪುಣ್ಯದ ಕೆಲಸ. ವಿರೋಧ ಪಕ್ಷಗಳು ತೆಗೆದುಕೊಂಡ ನಿಲುವು ಸರಿಯಲ್ಲವೇನೋ ಎಂಬುದು ನನ್ನ ಭಾವನೆ. ಆಕ್ಷೇಪಗಳೇನಿದ್ದರೂ, ಅದು ಮಂದಿರದ ವಿಚಾರದಲ್ಲಿ ಬೇಡವಾಗಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಇದೇ ವೇಳೆ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಟ್ರಸ್ಟ್​ಗೆ ಧನ್ಯವಾದ ಅರ್ಪಿಸಿದರು.

ವಿರಾಜಮಾನನಾದ ರಾಮ: ಮಧ್ಯಾಹ್ನ 12.29 ನಿಮಿಷದ ಅಭಿಜಿತ್​ ಲಗ್ನದ ಶುಭ ಮುಹೂರ್ತದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನೆರವೇರಿತು. ಪ್ರಧಾನಿ ನರೇಂದ್ರ ಮೋದಿ ಅವರು ಪುರುಷೋತ್ತಮನಿಗೆ ಪ್ರಥಮ ಪೂಜೆ ಸಲ್ಲಿಸುವ ಮೂಲಕ ಕಮಲಾರೂಢ ರಾಮನನ್ನು ಅನಾವರಣಗೊಳಿಸಲಾಯಿತು.

ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಮೊದಲು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ವೇದ ಮಂತ್ರ, ಮಂಗಳವಾದ್ಯಗಳೊಂದಿಗೆ ಕಾರ್ಯಕ್ರಮ ನಡೆಯಿತು. ಪ್ರಧಾನಿ ಮೋದಿಯವರ ಜೊತೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೂಜೆಯಲ್ಲಿ ಪಾಲ್ಗೊಂಡರು.

ಬಳಿಕ ಗರ್ಭಗುಡಿಯಲ್ಲಿರುವ ರಾಮಲಲ್ಲಾ ಪ್ರತಿಮೆಗೆ ಪ್ರಧಾನಿ ಮೋದಿ ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳನ್ನು ನೆರವೇರಿಸಿದರು. ವೇದಘೋಷಗಳ ನಡುವೆ ಪೂಜಾದಿಗಳನ್ನು ನೆರವೇರಿಸಲಾಯಿತು. ಮಧ್ಯಾಹ್ನ 12.20 ರಿಂದ 1ರ ನಡುವಿನ ಅಭಿಜಿತ್ ಲಗ್ನದಲ್ಲಿ ಪ್ರಾಣಪ್ರತಿಷ್ಠಾಪನೆ ಸಮಾರಂಭ ಜರುಗಿತು. ವಿದ್ವಾಂಸರ ಸಮ್ಮುಖದಲ್ಲಿ 51 ಇಂಚು ಎತ್ತರದ ರಾಮಲಲ್ಲಾ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಇದನ್ನೂ ಓದಿ: ಕೋಟ್ಯಂತರ ಜನರ ಕನಸು ಸಾಕಾರ; ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾದ ಶ್ರೀರಾಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.