ETV Bharat / bharat

ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಗೂಡ್ಸ್​ ರೈಲು: ಸಾವಿನ ಸಂಖ್ಯೆ 15ಕ್ಕೆ ಏರಿಕೆ, 60ಕ್ಕೂ ಹೆಚ್ಚು ಜನರಿಗೆ ಗಾಯ - Kanchenjunga Express train accident

ಡಾರ್ಜಿಲಿಂಗ್​ ಜಿಲ್ಲೆಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. 15 ಪ್ರಯಾಣಿಕರು ಮೃತಪಟ್ಟಿದ್ದು, NDRF ಮತ್ತು ಪೊಲೀಸರ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಘಟನೆಯಲ್ಲಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

Goods train collides with Kanchenjunga Express
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಗೂಡ್ಸ್​ ರೈಲು (ANI)
author img

By ETV Bharat Karnataka Team

Published : Jun 17, 2024, 11:58 AM IST

Updated : Jun 17, 2024, 5:46 PM IST

ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಡಿಕ್ಕಿ ಹೊಡೆದ ಗೂಡ್ಸ್​ ರೈಲು (ETV Bharat)

ಡಾರ್ಜಿಲಿಂಗ್​: ಪಶ್ಚಿಮ ಬಂಗಾಳದ ಡಾರ್ಜಿಲಿಂಗ್​ ಜಿಲ್ಲೆಯ ಅಸ್ಸಾಂನ ಸಿಲ್ಚಾರ್​ನಿಂದ ಕಲ್ಕತ್ತಾಗೆ ತೆರಳುತ್ತಿದ್ದ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ, ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಹಾಗೂ 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ನ್ಯೂ ಜಲ್ಪೈಗುರಿಗೆ ಸಮೀಪವಿರುವ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್​ ರೈಲು, ಪ್ಯಾಸೆಂಜರ್​ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಪ್ಯಾಸೆಂಜರ್​ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, 15ಕ್ಕೂ ಹೆಚ್ಚು ಆಂಬ್ಯಲೆನ್ಸ್​ಗಳು ಸ್ಥಳದಲ್ಲಿವೆ.

ಕಾಂಚನಜುಂಗಾ ಎಕ್ಸ್​ಪ್ರೆಸ್​ ಅಸ್ಸಾಂನ ಸಿಲ್ಚಾರ್​ನಿಂದ ಕಲ್ಕತ್ತಾದ ಸೀಲ್ದಾ ಮಧ್ಯೆ ಚಲಿಸುತ್ತದೆ. ಸೀಲ್ದಾ​ಗೆ ಬರುತ್ತಿದ್ದ ವೇಳೆ ಇಂದು ಬೆಳಗ್ಗೆ 8.45ರ ಸುಮಾರಿಗೆ ನ್ಯೂ ಜಲ್ಪೈಗುರಿ ಜಂಕ್ಷನ್​ ಮುಂದೆ ಕತಿಹಾರ್​ ರೈಲ್ವೆ ವಿಭಾಗದ ರಂಗಪಾಣಿ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಈಶಾನ್ಯ ಫ್ರಾಂಟಿಯರ್​ ರೈಲ್ವೆಯ(NFR) ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸಬ್ಯಸಾಚಿ ಡಿ. ತಿಳಿಸಿದ್ದಾರೆ.

"ಎನ್​ಎಫ್​ಆರ್​ ವಲಯದಲ್ಲಿ ದುರದೃಷ್ಟಕರ ಅಪಘಾತ ಸಂಭವಿಸಿದೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ರೈಲ್ವೆ, ಎನ್​ಡಿಆರ್​ಎಫ್​ ಮತ್ತು ಎಸ್​ಡಿಆರ್​ಎಫ್​ ನಿಕಟ ಸಮನ್ವಯದಲ್ಲಿ ರಕ್ಷಣಾ ಕಾರ್ಯವನ್ನು ಮಾಡುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ" ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್​ ಖಾತೆಯಲ್ಲಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, "ಡಾರ್ಜಿಲಿಂಗ್​ ಜಿಲ್ಲೆಯ ಫನ್ಸಿದೇವ ಪ್ರದೇಶದಲ್ಲಿ ನಡೆದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ವಿವರಗಳಿಗಾಗಿ ಕಾಯುತ್ತಿರುವಾಗ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದಿರುವುದಾಗಿ ತಿಳಿಯಿತು. ಭೀಕರ ರೈಲು ಅಪಘಾತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳಕ್ಕೆ ಡಿಎಂ, ಎಸ್​ಪಿ, ವೈದ್ಯರು ಹಾಗೂ ಆಂಬ್ಯುಲೆನ್ಸ್​ ಮತ್ತು ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ." ಎಂದು ಸಾಮಾಜಿಕ ಜಾಲತಾಣ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅವರು ಘಟನಾ ಸ್ಥಳಕ್ಕೆ ಧಾವಿಸುತ್ತಿದ್ದು, ಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.

ಸೀಲ್ದಾ ಪೂರ್ವ ರೈಲ್ವೆಯು ರಂಗಪಾಣಿ ನಿಲ್ದಾಣದಲ್ಲಿ ಕಂಟ್ರೋಲ್ ಡೆಸ್ಕ್​ ಅನ್ನು ಸ್ಥಾಪಿಸಿದೆ. ರೈಲಿನಲ್ಲಿ ಎರಡು ಪಾರ್ಸೆಲ್​ ಹಾಗೂ ಒಂದು ಗಾರ್ಡ್​ಗಾಗಿ ಕೋಚ್​ಗಳನ್ನು ಇದೆ. ಗೂಡ್ಸ್​ ಕಂಟೈನರ್​ ರೈಲು ಸಿಗ್ನಲ್​ ಮೀರಿ, ಕಾಂಚನಜುಂಗಾ ಎಕ್ಸ್​ಪ್ರೆಸ್​ನ ಹಿಂಭಾಗದ ಪಾರ್ಸೆಲ್​ ಕೋಚ್​ಗೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈಲು ಅಪಘಾತ: ಸಮಯ ಪ್ರಜ್ಞೆ ಮೆರೆದು ಹಲವು ಜನರ ಪ್ರಾಣ ಉಳಿಸಿದ ಚಹಾ ಮಾರುವ ವ್ಯಕ್ತಿ - Jharkhand Train Accident

Last Updated : Jun 17, 2024, 5:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.