ನವದೆಹಲಿ: ನೀಟ್ ಪರೀಕ್ಷೆ ವಿವಾದದ ಬಗ್ಗೆ ರಾಜ್ಯಸಭೆಯಲ್ಲಿ ಗದ್ದಲದ ನಡುವೆಯೇ ಸದನ ಸುಗಮವಾಗಿ ನಡೆಯಲು ಅವಕಾಶ ನೀಡುವಂತೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶುಕ್ರವಾರ ಪ್ರತಿಪಕ್ಷಗಳಿಗೆ ಮನವಿ ಮಾಡಿದರು. ಇದೇ ವೇಳೆ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಸರ್ಕಾರ ಹೊಣೆಗಾರಿಕೆ ಹೊರಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿದರು. ಅಲ್ಲದೇ, ಎಲ್ಲ ಸದಸ್ಯರು ಸದನದ ಬಾವಿಗಿಳಿದಿದ್ದರಿಂದ ಗೊಂದಲದ ಗೂಡಾಯಿತು. ಚರ್ಚೆಯ ವೇಳೆ ಮಧ್ಯಪ್ರವೇಶಿಸಿದ ಗೌಡರು, ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದಾರೆ. ಸಿಬಿಐ ತನಿಖೆಗೆ ಆದೇಶಿಸಿ ಸರ್ಕಾರ ಸರಿಯಾದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿಸಿದರು.
Respected former Prime Minister, JDS National President, and Member of the Rajya Sabha, Hon'ble Shri @H_D_Devegowda avaru, has expressed his clear views in the House regarding the NEET examination and the obstruction by opposition parties.
— Janata Dal Secular (@JanataDal_S) June 28, 2024
" the incidents surrounding the neet… pic.twitter.com/pTjvp1K2KI
ತನಿಖೆ ಇನ್ನೂ ಪೂರ್ಣಗೊಂಡಿಲ್ಲ ಮತ್ತು ಅದು ಪೂರ್ಣಗೊಳ್ಳುವವರೆಗೆ ಸರ್ಕಾರ ಹೊಣೆಗಾರಿಕೆಯನ್ನು ನಿಗದಿಪಡಿಸಲು ಸಾಧ್ಯವಿಲ್ಲ. ಸದನ ಸುಗಮವಾಗಿ ನಡೆಯಲಿ ಎಂದು ಪ್ರತಿಪಕ್ಷದ ಸದಸ್ಯರಿಗೆ ಅವರು ಮಾಡಿದರು. ಆದರೂ ಪ್ರತಿಭಟನಾನಿರತ ಸದಸ್ಯರು ಪಟ್ಟು ಬಿಡಲಿಲ್ಲ. ಈ ವೇಳೆ, ಬಿಜೆಪಿ ಸದಸ್ಯ ಸುಧಾಂಶು ತ್ರಿವೇದಿ, ಗೌಡರಂತಹ ಹಿರಿಯ ಸದಸ್ಯರು ಮನವಿ ಮಾಡಿದರೂ ಪ್ರತಿಪಕ್ಷಗಳು ಪ್ರತಿಭಟನೆ ಮತ್ತು ಘೋಷಣೆಗಳನ್ನು ಮುಂದುವರಿಸುತ್ತಿರುವುದು ದುರದೃಷ್ಟಕರ ಎಂದರು.
ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲು: ಸಂತ್ರಸ್ತೆಯ ಆರೋಪವೇನು?