ETV Bharat / bharat

ಗುಜರಾತ್​ನಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ - Gujarat Building Collapse - GUJARAT BUILDING COLLAPSE

Gujarat Building Collapse: ಗುಜರಾತ್‌ನ ಸೂರತ್‌ನಲ್ಲಿ ಬಹುಮಹಡಿ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

Gujarat  Gujarat Building Collapse  Rescue Operation Underway
ಗುಜರಾತ್​ನಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ ಏಳಕ್ಕೆ ಏರಿಕೆ (ETV Bharat)
author img

By ETV Bharat Karnataka Team

Published : Jul 7, 2024, 8:23 AM IST

Updated : Jul 7, 2024, 11:28 AM IST

ಸೂರತ್ (ಗುಜರಾತ್): ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಶನಿವಾರ ಸೂರತ್‌ನ ಸಚಿನ್ ಪ್ರದೇಶದಲ್ಲಿ ಬಹುಮಹಡಿ ಕಟ್ಟಡ ಕುಸಿದಿದೆ. ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಏಳು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಕಟ್ಟಡ ಕುಸಿದ ತಕ್ಷಣ ಮಹಿಳೆಯನ್ನು ರಕ್ಷಿಸಲಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಿಗ್ನೇಶ್ ಚೌಧರಿ ಮಾಹಿತಿ ನೀಡಿದ್ದಾರೆ.

ಇದು ಆರು ಅಂತಸ್ತಿನ ಕಟ್ಟಡವಾಗಿದೆ. ಪಾಲ್ ಪ್ರದೇಶದಲ್ಲಿರುವ ವಸತಿ ಕಟ್ಟಡವು ಶನಿವಾರ ಮಧ್ಯಾಹ್ನ 2.45 ರ ಸುಮಾರಿಗೆ ಕುಸಿದಿದೆ. ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಏಳು ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಓರ್ವ ಮಹಿಳೆ ಗಾಯಗೊಂಡಿದ್ದು, ಅವರನ್ನು ರಕ್ಷಿಸಲಾಗಿದೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗೆಹ್ಲೋಟ್ ತಿಳಿಸಿದ್ದಾರೆ.

''ಗುಜರಾತ್‌ನ ಸಚಿನ್ ಪ್ರದೇಶದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ. ಕಟ್ಟಡದ ಸುಮಾರು ಐದು ಫ್ಲಾಟ್‌ಗಳಲ್ಲಿ ಹೆಚ್ಚಾಗಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ವಾಸವಿದ್ದಾರೆ. ಕೆಲವು ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ. ಕೆಲವರು ಕೆಲಸಕ್ಕೆ ಹೋಗಿದ್ದಾರೆ. ಇನ್ನೂ ಕೆಲವರು ರಾತ್ರಿ ಪಾಳಿ ಮುಗಿಸಿ ಮಲಗಿದ್ದವರು ಸಿಕ್ಕಿಬಿದ್ದಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ತಲುಪಿತು. NDRF ಮತ್ತು SDRF ಎಲ್ಲವೂ ಕಾರ್ಯನಿರ್ವಹಿಸುತ್ತಿವೆ'' ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋಟ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ 2 ಕಡೆ ಗುಂಡಿನ ಚಕಮಕಿ: ಯೋಧ ಹುತಾತ್ಮ, ನಾಲ್ವರು ಉಗ್ರರ ಬೇಟೆ - Kulgam encounter

Last Updated : Jul 7, 2024, 11:28 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.