ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ''ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಅರಗಾಂ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಈ ಹಿನ್ನೆಲೆ ಆ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ಆರಂಭಿಸಿವೆ'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಭದ್ರತಾ ಪಡೆಗಳು ಘಟನಾ ಸ್ಥಳದಲ್ಲಿ ತೀವ್ರ ಹುಡುಕಾಟ ಪ್ರಾರಂಭಿಸಿವೆ. ಸ್ವಲ್ಪ ಸಮಯದ ನಂತರ ಗುಂಡಿನ ಸದ್ದು ನಿಂತವು, ಆದರೆ ಇನ್ನೂ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭದ್ರತಾ ಪಡೆಗಳಿಗೆ ಅಮಿತ್ ಶಾ ಸಲಹೆ: ಕಣಿವೆ ಪ್ರದೇಶಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ದಾಳಿಗಳು ನಡೆದಿರುವುದು ಕಂಡುಬಂದಿದೆ. ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವವನ್ನು ಹತ್ತಿಕ್ಕಲು ಮತ್ತು ಸುಗಮ, ಸುರಕ್ಷಿತ ಮತ್ತು ಘಟನೆ-ಮುಕ್ತ ಅಮರನಾಥ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಭದ್ರತಾ ಪಡೆಗಳಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಅವರು ನಿನ್ನೆ ಮಹತ್ವದ ಸಭೆ ನಡೆಸಿದರು.
ಕೇಂದ್ರದ ದೃಢವಾದ ಆದೇಶದ ಹಿನ್ನೆಲೆ ಭದ್ರತಾ ಪಡೆಗಳು ಮುಂಬರುವ ದಿನಗಳಲ್ಲಿ J&K ನಲ್ಲಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಲು ಕೆಲವು ಬೃಹತ್ ಉಗ್ರರ ವಿರೋಧಿ ಕಾರ್ಯಾಚರಣೆಗಳನ್ನು ನಡೆಸುವ ನಿರೀಕ್ಷೆಯಿದೆ. ಉಗ್ರರ ನಿಗ್ರಹ ಕಾರ್ಯಾಚರಣೆಗಳಲ್ಲಿ ಕಾಶ್ಮೀರದಲ್ಲಿ ಮಾಡಿದಂತೆ ಜಮ್ಮು ವಿಭಾಗದಲ್ಲಿ ಪ್ರದೇಶವನ್ನು ಹಿಡಿತಕ್ಕೆ ತೆಗೆದುಕೊಳ್ಳುವುದು ಹಾಗೂ ಶೂನ್ಯ ಭಯೋತ್ಪಾದನೆಯ ಯೋಜನೆಗಳನ್ನು ಜಾರಿಗೆ ತರಲು ಶಾ ಭದ್ರತಾ ಸಂಸ್ಥೆಗಳಿಗೆ ನಿರ್ದೇಶನ ನೀಡಿದ್ದಾರೆ.
ಕೇಂದ್ರಾಡಳಿತ ಪ್ರದೇಶವು ಒಂದು ವಾರದೊಳಗೆ ನಾಲ್ಕು ಭಯೋತ್ಪಾದಕ ದಾಳಿಗಳು ನಡೆದಿವೆ. ಒಂಬತ್ತು ಯಾತ್ರಿಕರು ಮತ್ತು ಒಬ್ಬ ಸಿಆರ್‌ಪಿಎಫ್ ಜವಾನ್ ಪ್ರಾಣ ಕಳೆದುಕೊಂಡಿದ್ದಾರೆ. ಈಗಾಗಲೇ ಅಲರ್ಟ್ ಆಗಿರುವ ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿವೆ.
ಸಭೆಯಲ್ಲಿ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯನ್ನು ಅಮಿತ್ ಶಾ ಅವರಿಗೆ ವಿವರಿಸಿದರು. ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಬಿಗಿ ಕ್ರಮಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಎದುರು ನೋಡುತ್ತಿದ್ದಾರೆ.
"ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ಪ್ರಧಾನಿಯವರ ನಿರ್ದೇಶನದಂತೆ ನಡೆಸಲಾಗುವುದು" ಎಂದು ಭದ್ರತಾ ಅಧಿಕಾರಿಯೊಬ್ಬರು ಸುದ್ದಿ ಮಾಧ್ಯಮಕ್ಕೆ ತಿಳಿಸಿದ್ದಾರೆ.