ETV Bharat / bharat

'ವಾರಣಾಸಿಯಲ್ಲಿ ನನ್ನ ಸಹೋದರಿ ಪ್ರಿಯಾಂಕಾ ಸ್ಪರ್ಧಿಸುತ್ತಿದ್ದರೆ...': ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ? - Rahul Gandhi - RAHUL GANDHI

ಪ್ರಿಯಾಂಕಾ ಗಾಂಧಿ ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ ಎರಡ್ಮೂರು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಹುಲ್ ಗಾಂಧಿ
ರಾಹುಲ್ ಗಾಂಧಿ (ETV Bharat)
author img

By PTI

Published : Jun 11, 2024, 9:47 PM IST

ರಾಯ್‌ಬರೇಲಿ(ಉತ್ತರ ಪ್ರದೇಶ): ನನ್ನ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ವಾರಣಾಸಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ 2-3 ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಇಂದು ರಾಯ್‌ಬರೇಲಿಯಲ್ಲಿ ಕೃತಜ್ಞತಾ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟದ ಬಲ ಕಡಿಮೆ ಮಾಡಲು 'ಇಂಡಿಯಾ' ಮೈತ್ರಿಕೂಟವು ರಾಯ್​ಬರೇಲಿ, ಅಮೇಥಿ ಸೇರಿದಂತೆ ದೇಶದ ಇತರ ಭಾಗಗಳಲ್ಲಿ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಹೋರಾಡಿದವು. ಚುನಾವಣಾ ಫಲಿತಾಂಶದ ಬಗ್ಗೆ ನಾನಾಗಲೀ ಮತ್ತು ಪಕ್ಷದ ಇತರ ಸಂಸದರಾಗಲೀ ಅಹಂಕಾರ ಪಡುವುದಿಲ್ಲ. ನಾವು ಜನಸಾಮಾನ್ಯರಿಗಾಗಿ ಕೆಲಸ ಮಾಡುತ್ತೇವೆ ಎಂದರು.

ರಾಮ ಮಂದಿರದಲ್ಲಿ ನಡೆದ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮೋದಿ ಅವರು ಸಾಮಾನ್ಯ ಜನರನ್ನು ನಿರ್ಲಕ್ಷಿಸಿ, ಕೈಗಾರಿಕೋದ್ಯಮಿಗಳು ಮತ್ತು ಇತರ ವ್ಯಕ್ತಿಗಳಿಗೆ ಪ್ರಾಮುಖ್ಯತೆ ನೀಡಿದ್ದರು ಎಂದು ದೂರಿದ ಅವರು, ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಸುವ ಮೂಲಕ ಜನಸಾಮಾನ್ಯರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಸಂಕ್ಷಿಪ್ತ ಭಾಷಣದಲ್ಲಿ, ಅಮೇಥಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳಲ್ಲಿ ಪಕ್ಷವನ್ನು ಗೆಲ್ಲಿಸಿದ ಜನರಿಗೆ ಧನ್ಯವಾದ ಸಲ್ಲಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಹೊಸ ಸಂಪುಟದ 28 ಸಚಿವರ ಮೇಲಿದೆ ಕ್ರಿಮಿನಲ್ ಪ್ರಕರಣ - Criminal Cases

ETV Bharat Logo

Copyright © 2024 Ushodaya Enterprises Pvt. Ltd., All Rights Reserved.