ETV Bharat / bharat

ಹರಿಯಾಣ: ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್​ - ಮನೋಹರ್ ಲಾಲ್ ಖಟ್ಟರ್

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿದೆ.

Haryana Assembly takes up Congress' no-confidence motion against Khattar govt
ಹರಿಯಾಣ: ಖಟ್ಟರ್ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಕಾಂಗ್ರೆಸ್​
author img

By PTI

Published : Feb 22, 2024, 4:00 PM IST

ಚಂಡೀಗಢ (ಹರಿಯಾಣ): ಹರಿಯಾಣ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ನಿರ್ಣಯವನ್ನು ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅಂಗೀಕರಿಸಿದ್ದು, ಇಂದು ಸದನದಲ್ಲಿ ಚರ್ಚೆ ಕೈಗೆತ್ತಿಕೊಳ್ಳಲಾಗಿದೆ.

ಖಟ್ಟರ್ ನೇತೃತ್ವದ ಸಚಿವ ಸಂಪುಟದ ವಿರುದ್ಧ ಅವಿಶ್ವಾಸ ನಿರ್ಣಯದ ಬಗ್ಗೆ ಕಾಂಗ್ರೆಸ್​ ನೀಡಿದ ನೋಟಿಸ್​ಅನ್ನು ಸ್ಪೀಕರ್ ಒಪ್ಪಿಕೊಂಡಿದ್ದಾರೆ. ಇದರ ಮೇಲೆ ಚರ್ಚೆಗೆ ಎರಡು ಗಂಟೆಗಳ ಕಾಲ ಸಮಯ ಮೀಸಲಿಟ್ಟಿದ್ದಾರೆ. ಪ್ರತಿಪಕ್ಷದ ನಾಯಕರಾದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ ಇತ್ತೀಚೆಗೆ ಖಟ್ಟರ್ ಸರ್ಕಾರವು ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ, ಬಜೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ಅವಿಶ್ವಾಸ ನಿರ್ಣಯವನ್ನು ಮಂಡಿಸಲಿದೆ ಎಂದು ಅವರು ಹೇಳಿದ್ದರು.

ಮೂರು ವರ್ಷಗಳ ಹಿಂದೆಯೂ ಬಿಜೆಪಿ-ಜೆಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಗೊತ್ತುವಳಿ ಮಂಡಿಸಿತ್ತು. ಆದರೆ, ಅದು ಫಲಕೊಟ್ಟಿರಲಿಲ್ಲ. ಪ್ರಸ್ತುತ 90 ಸದಸ್ಯರ ಬಲದ ಸದನದಲ್ಲಿ ಬಿಜೆಪಿ 41 ಶಾಸಕರನ್ನು ಹೊಂದಿದ್ದರೆ, ಮೈತ್ರಿ ಪಕ್ಷವಾದ ಜನನಾಯಕ ಜನತಾ ಪಾರ್ಟಿ (ಜೆಜೆಪಿ) 10 ಶಾಸಕರನ್ನು ಹೊಂದಿದೆ. ಅಲ್ಲದೇ, ಏಳು ಜನ ಪಕ್ಷೇತರ ಶಾಸಕರಲ್ಲಿ ಆರು ಮಂದಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ಸೂಚಿಸಿದದ್ದಾರೆ.

ಇಷ್ಟೇ ಅಲ್ಲ, ಹರಿಯಾಣದ ಲೋಖಿತ್ ಪಕ್ಷದ ಏಕೈಕ ಶಾಸಕರಾದ ಗೋಪಾಲ್ ಕಾಂಡ ಅವರ ಬೆಂಬಲವನ್ನೂ ಸರ್ಕಾರ ಹೊಂದಿದೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ. ಮತ್ತೊಂದು ಪ್ರತಿಪಕ್ಷವಾದ ಭಾರತೀಯ ರಾಷ್ಟ್ರೀಯ ಲೋಕದಳ (ಐಎನ್‌ಎಲ್‌ಡಿ) ಕೇವಲ ಒಬ್ಬ ಶಾಸಕರನ್ನು ಹೊಂದಿದೆ.

ಹಿಂದಿನ ಅವಿಶ್ವಾಸ ನಿರ್ಣಯದ ಬಗ್ಗೆ ಇತ್ತೀಚೆಗೆ ಉಲ್ಲೇಖಿಸಿ ಮಾತನಾಡಿ ಸಿಎಂ ಖಟ್ಟರ್, ಪ್ರತಿ ಅಧಿವೇಶನದಲ್ಲಿ ತಮ್ಮ ಸರ್ಕಾರ ಮಾಡಿದ ಕೆಲಸದ ಬಗ್ಗೆ ಕೇಳಲು ಅವರು (ಕಾಂಗ್ರೆಸ್​ನವರು) ಅಂತಹ ಪ್ರಸ್ತಾಪವನ್ನು ಮಂಡಿಸಬೇಕು. ಇಲ್ಲವಾದರೆ ಸುಮ್ಮನೆ ಮಾತನಾಡುತ್ತಾರೆ ಎಂದು ಗೇಲಿ ಮಾಡಿದ್ದರು.

ಇದನ್ನೂ ಓದಿ: ಅಬಕಾರಿ ನೀತಿ ಹಗರಣ: ದಿಲ್ಲಿ ಸಿಎಂ ಕೇಜ್ರಿವಾಲ್​ಗೆ 7ನೇ ಸಮನ್ಸ್​, 26 ರಂದು ವಿಚಾರಣೆಗೆ ಬರಲು ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.