ಹತ್ರಾಸ್ (ಯು.ಪಿ): ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಮಂಗಳವಾರ ಆಯೋಜಿಸಿದ್ದ ಧಾರ್ಮಿಕ ಸತ್ಸಂಗದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಈ ಪೈಕಿ ಹೆಚ್ಚಿನವರ ಗುರುತು ಪತ್ತೆ ಹಚ್ಚಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಈ ಧಾರ್ಮಿಕ ಸತ್ಸಂಗಕ್ಕೆ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳು ಹಾಗೂ ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸಿದ್ದರು ಎಂದು ತಿಳಿದುಬಂದಿದೆ.
#WATCH | Uttar Pradesh: Visuals from the incident spot where a stampede took place yesterday, claiming the lives of 116 people in Hathras.
— ANI (@ANI) July 3, 2024
The incident happened during a Satsang conducted by 'Bhole Baba'. pic.twitter.com/7wfXYFRHIO
ಈ ಕುರಿತು ಅಲಿಘರ್ ವಲಯ ಐಜಿ ಶಲಭ್ ಮಾಥುರ್ ಪ್ರತಿಕ್ರಿಯಿಸಿ, "ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇಟಾಹ್ ಮತ್ತು ಹತ್ರಾಸ್ ಪಕ್ಕದ ಜಿಲ್ಲೆಗಳಿಂದ ಹೆಚ್ಚಿನ ಜನರು ಸತ್ಸಂಗದಲ್ಲಿ ಪಾಲ್ಗೊಂಡಿದ್ದರು. ಈ ಪೈಕಿ ಹೆಚ್ಚಿನವರ ಗುರುತು ಪತ್ತೆ ಹಚ್ಚಲಾಗಿದ್ದು, ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ" ಎಂದು ತಿಳಿಸಿದರು.
ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಮಹಿಳೆಯರು: ಇದಕ್ಕೂ ಮೊದಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಪತ್ರಕರ್ತರಿಗೆ ಸಾವನ್ನಪ್ಪಿದವರ ಬಗ್ಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಮೃತಪಟ್ಟವರ ಪೈಕಿ ಏಳು ಮಕ್ಕಳು, ಒಬ್ಬ ಪುರುಷ ಇದ್ದು ಉಳಿದವರು ಮಹಿಳೆಯರು ಎಂದು ಹೇಳಿದರು.
#WATCH | Uttar Pradesh: On Hathras stampede incident, CMO Agra Dr. Arun Kumar Srivastava says, " 21 bodies have been brought to agra for postmortem, 17 people have been identified and four are still unidentified. one person is admitted to the district hospital and is undergoing… pic.twitter.com/7ckT3EjAZq
— ANI (@ANI) July 3, 2024
ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ: ಇನ್ನು ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಇಂದು ಸಿಎಂ ಯೋಗಿ ಭೇಟಿ: ಘಟನಾ ಸ್ಥಳಕ್ಕೆ ಇಂದು ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ.
#WATCH | Uttar Pradesh: Forensic experts along with dog squad collect evidence at the incident site in Hathras, where a stampede took place yesterday, claiming the lives of 116 people pic.twitter.com/a9u9t1bXDi
— ANI (@ANI) July 3, 2024
ಮೃತರ ಕುಟುಂಬಕ್ಕೆ ಗಣ್ಯರ ಸಂತಾಪ: ಕಾಲ್ತುಳಿತದಲ್ಲಿ ಸಾವನ್ನಪ್ಪಿರುವವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಜರ್ಮನಿ, ಫ್ರಾನ್ಸ್ ಮತ್ತು ಚೀನಾ ಸೇರಿದಂತೆ ಹಲವು ದೇಶಗಳ ರಾಯಭಾರಿಗಳು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ತಮ್ಮ 'ಎಕ್ಸ್' ಖಾತೆಯಲ್ಲಿ, ಹತ್ರಾಸ್‌ನಲ್ಲಿ ಸಂಭವಿಸಿದ ದುರಂತದ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಯುಪಿ ಸರ್ಕಾರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವ ಕಾರ್ಯದಲ್ಲಿ ತೊಡಗಿದೆ. ಮೃತರ ಕುಟುಂಬಸ್ಥರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಬರೆದಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ 'ಎಕ್ಸ್' ಪೋಸ್ಟ್ ಮೂಲಕ ಸಂತಾಪ ಸೂಚಿಸಿ, ಈ ದುರಂತದಿಂದ ತೀವ್ರ ನೋವುಂಟಾಗಿದೆ ಎಂದು ಹೇಳಿದ್ದಾರೆ. ಕಾಲ್ತುಳಿತದಿಂದ ಸಂಭವಿಸಿದ ದುರಂತದ ಸಾವುಗಳಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಬರೆದಿದ್ದಾರೆ.
ಜರ್ಮನ್ ರಾಯಭಾರಿ ಫಿಲಿಪ್ ಆಕರ್ಮನ್, ನಿನ್ನೆ ಸಂಜೆ 'ಎಕ್ಸ್'ನಲ್ಲಿ, ಕಾಲ್ತುಳಿತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಚೀನಾ ರಾಯಭಾರಿ ಕ್ಸು ಫೀಹಾಂಗ್ ಶೋಕ ವ್ಯಕ್ತಪಡಿಸಿ, ಘಟನೆಯಿಂದ ದುಃಖವಾಗಿದೆ. ಕಳೆದುಹೋದ ಜೀವಗಳು ಮತ್ತು ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಬರೆದಿದ್ದಾರೆ.
ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರು 'ಎಕ್ಸ್'ನಲ್ಲಿ ಘಟನೆಗೆ ಸಂತಾಪ ಸೂಚಿಸಿ, ಕಾಲ್ತುಳಿತದಲ್ಲಿ ಜನರು ಜೀವ ಕಳೆದುಕೊಂಡಿದ್ದು ದುಃಖವಾಗಿದೆ. ಸಂತ್ರಸ್ತ ಕುಟುಂಬಗಳಿಗೆ ಆಳವಾದ ಸಂತಾಪ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಎಕ್ಸ್ನಲ್ಲಿ ಬರೆದಿದ್ದಾರೆ.
ಏನಿದು ಘಟನೆ?: ಯುಪಿಯ ರತಿಭಾನಪುರದ ಫುಲ್ರೈ ಗ್ರಾಮದಲ್ಲಿ ಮಂಗಳವಾರ ಭೋಲೆ ಬಾಬಾ ಎಂಬವರ ಧಾರ್ಮಿಕ ಸತ್ಸಂಗ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಕಾಲ್ತುಳಿತದಿಂದ 116 ಜನ ಸಾವು: ಸತ್ಸಂಗ ನಡೆಸಿದ ಬಾಬಾ ಯಾರು, ಈತನ ಹಿನ್ನೆಲೆ ಏನು? - Who is Saint Bhole Baba