ETV Bharat / bharat

ಈ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ ರವಾನೆ - HEAVY RAIN FORECAST

ತಮಿಳುನಾಡಿನಲ್ಲಿ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Heavy rain forecast for four delta districts of Tamil Nadu
ಈ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (IANS)
author img

By ETV Bharat Karnataka Team

Published : Dec 17, 2024, 9:30 AM IST

ಚೆನ್ನೈ, ತಮಿಳುನಾಡು: ಇಲ್ಲಿನ ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ ಮತ್ತು ತಿರುವರೂರ್‌ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಮುನ್ಸೂಚನೆ ನೀಡಿದೆ.

ಈ ಅವಧಿಯಲ್ಲಿ ಕಾರೈಕಲ್‌ನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದ್ದು, ಮಳೆ ತಂದಿದೆ. ಹವಾಮಾನ ಇಲಾಖೆಯ ಪ್ರಕಾರ, ಈ ಕಡಿಮೆ ಒತ್ತಡ ವ್ಯವಸ್ಥೆಯಿಂದಾಗಿ ಚಂಡ ಮಾರುತದ ಸ್ವರೂಪ ಪಡೆದುಕೊಂಡಿದ್ದು, ಇದು ಬಂಗಾಳ ಕೊಲ್ಲಿಯ ಕಡೆಗೆ ಚಲಿಸುವ ಮೊದಲು ದಕ್ಷಿಣ ಅಂಡಮಾನ್ ಸಮುದ್ರ ಮತ್ತು ಪಕ್ಕದ ಪ್ರದೇಶಗಳಲ್ಲಿ ನೆಲೆಗೊಂಡಿದೆ. ಇದು ಪಶ್ಚಿಮ-ವಾಯುವ್ಯ ಅಂದರೆ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ನಿರೀಕ್ಷೆಯಿದೆ.

ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಕುರಿಚಿ, ಅರಿಯಲೂರು, ಪೆರಂಬಲೂರು, ತಿರುಚ್ಚಿ, ತಂಜಾವೂರು, ಪುದುಕೊಟ್ಟೈ ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬುಧವಾರ ಕಡಲೂರು, ವಿಲ್ಲುಪುರಂ ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ.

ತಿರುವಳ್ಳೂರು, ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ರಾಣಿಪೇಟ್, ತಿರುವಣ್ಣಾಮಲೈ, ಕಲ್ಲಕುರಿಚಿ, ಮೈಲಾಡುತುರೈ, ನಾಗಪಟ್ಟಿಣಂ ಮತ್ತು ತಿರುವರೂರ್ ಜಿಲ್ಲೆಗಳು ಮತ್ತು ಕಾರೈಕಾಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

ಹೆಚ್ಚುವರಿಯಾಗಿ ಆಂಧ್ರಪ್ರದೇಶದ ದಕ್ಷಿಣ-ಕರಾವಳಿ ಅಥವಾ ತಮಿಳುನಾಡಿನ ಉತ್ತರ- ಕರಾವಳಿಯಲ್ಲಿ ಪಶ್ಚಿಮ ಮತ್ತು ಪೂರ್ವದ ಗಾಳಿ ಸಂವಹನಗಳ ಸಂಭಾವ್ಯತೆ ಹೆಚ್ಚುತ್ತಿದೆ. ಇದು ಮರಕ್ಕನಂ ಮತ್ತು ಶ್ರೀಹರಿಕೋಟಾ ನಡುವೆ ವಿಪರೀತ ಮಳೆಗೆ ಕಾರಣವಾಗಬಹುದು. ಈ ಅವಧಿಯಲ್ಲಿ ಪಾಂಡಿಚೇರಿ ಮತ್ತು ನೆಲ್ಲೂರು ವ್ಯಾಪ್ತಿಯಲ್ಲಿ ಕೂಡ ಭಾರಿ ಮಳೆಯಿಂದ ಕೂಡಿದ ಅತಿ ಭಾರಿ ಮಳೆಗೆ ಸಾಕ್ಷಿಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ:ತೀವ್ರ ಚಳಿಗೆ ನಡುಗುತ್ತಿದೆ ಉತ್ತರ ಭಾರತ: ಬಡವರಿಗೆ, ನಿರ್ಗತಿಕರ ನೆರವಿಗೆ ಇವೆ ಆಶ್ರಯಧಾಮಗಳು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.