ETV Bharat / bharat

ಕಾನ್ಪುರದಲ್ಲಿ ಹಿಟ್​ ಅಂಡ್​​​ ರನ್​ ಕೇಸ್​: ಸರ್ಕಾರಿ ನೌಕರ ಸಾವು, ಆರೋಪಿಗಾಗಿ ಬಲೆ ಬೀಸಿದ ಪೊಲೀಸರು - Hit and run case

ಉತ್ತರಪ್ರದೇಶದ ಕಾನ್ಪುರದಲ್ಲಿ ಹಿಟ್​ ಅಂಡ್​​​ ರನ್​ ಕೇಸ್​ ದಾಖಲಾಗಿದೆ. ಈ ಘಟನೆಯಲ್ಲಿ ಸರ್ಕಾರಿ ನೌಕರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

author img

By ETV Bharat Karnataka Team

Published : Jun 24, 2024, 10:24 AM IST

ಕಾನಾಪಪುರದಲ್ಲಿ ಹಿಟ್​ ಆ್ಯಂಡ್​ ರನ್​ ಕೇಸ್
ಕಾನಾಪಪುರದಲ್ಲಿ ಹಿಟ್​ ಆ್ಯಂಡ್​ ರನ್​ ಕೇಸ್ (ETV Bharat)

ಕಾನ್ಫುರ : ದೇಶದಲ್ಲಿ ಹಿಟ್​ ಅಂಡ್​ ರನ್​ ಕೇಸ್​ಗಳು ಹೆಚ್ಚಾಗುತ್ತಿವೆ. ಮಹಾರಾಷ್ಟ್ರದಲ್ಲಿ ನಡೆದ ಹಿಟ್​ ಅಂಡ್​ ರನ್​ ಕೇಸ್​ ದೇಶಾದ್ಯಂತ ಸದ್ದು ಮಾಡಿತ್ತು. ಆ ಬಳಿಕ ತಮಿಳುನಾಡಿನಿಂದ ಇಂತಹದ್ದೇ ಸುದ್ದಿ ವರದಿಯಾಗಿತ್ತು. ಇದೀಗ ಉತ್ತರಪ್ರದೇಶದ ಕಾನ್ಪುರದಲ್ಲಿ ಹಿಟ್ ಅಂಡ್ ರನ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪಾನಮತ್ತ ಕಾರು ಚಾಲಕನೊಬ್ಬ ಸರ್ಕಾರಿ ನೌಕರನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಇದನ್ನು ಪ್ರಶ್ನಿಸಿದ್ದಕ್ಕೆ ಆತನಿಗೆ ಡಿಕ್ಕಿ ಹೊಡೆದು ಸುಮಾರು 100 ಮೀಟರ್​ ವರೆಗೆ ಎಳೆದೊಯ್ದು ಕಾರು ಹರಿಸಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ನೀರಾವರಿ ಇಲಾಖೆಯಲ್ಲಿ ನಿಯೋಜನೆಗೊಂಡ ನೌಕರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭೋಲಾ ತಿವಾರಿ ಮೃತ ಯುವಕ. ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮತ್ತೊಂದೆಡೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನ ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

ಘಟನೆಯ ವಿವರ: ಕಾನ್ಪುರದ ಕೊಹಣ ಪೊಲೀಸ್ ಠಾಣಾ ವ್ಯಾಪ್ತಿಯ ವಿಐಪಿ ರಸ್ತೆಯಲ್ಲಿ ನೀರಾವರಿ ಇಲಾಖೆಯ ನೌಕರ ಭೋಲಾ ತಿವಾರಿ ಅವರ ಕಾರಿಗೆ ಅಪಘಾತ ಎಸಗಿ ಪರಾರಿಯಾಗಲು ಯತ್ನಿಸಿದ ಕಾರೊಂದನ್ನು ಅಡ್ಡಗಟ್ಟಿ ತಡೆದಿದ್ದಾರೆ. ಈ ವೇಳೆ ಚಾಲಕನನ್ನು ಹೊರ ಬರುವಂತೆ ಆಗ್ರಹಿಸಿದ್ದಾರೆ. ಕಾರಿನಲ್ಲಿ ಪಾನಮತ್ತನಾಗಿದ್ದ ಚಾಲಕ ಕೋಪಗೊಂಡು, ಕಾರು ತಡೆದಿದ್ದ ಭೋಲಾ ತಿವಾರಿ ಮೇಲೆ ಕಾರನ್ನು ಹರಿಸಿ ಸುಮಾರು 100 ಮೀಟರ್ ವರೆಗೆ ಎಳೆದೊಯ್ದಿದ್ದಾನೆ.

ಬಳಿಕ ಕೆಳಗೆ ಬಿದ್ದ ಭೋಲಾ ತಿವಾರಿ ಮೇಲೆ ಕಾರು ಹರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಪರಿಣಾಮ ಭೋಲಾ ತಿವಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಈ ಘಟನೆ ಭಾನುವಾರ ರಾತ್ರಿ 9 ಗಂಟೆಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆಯ ಬಗ್ಗೆ ಎಸಿಪಿ ಕರ್ನಲ್‌ಗಂಜ್ ಮಹೇಶ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಗಾಯಗೊಂಡ ಯುವಕನನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲೆ ಮೃತಪಟ್ಟಿದ್ದಾರೆ. ಮೃತ ರವೀಂದ್ರ ಅಲಿಯಾಸ್ ಭೋಲಾ ತಿವಾರಿ ನೀರಾವರಿ ಇಲಾಖೆಯಲ್ಲಿ ಉದ್ಯೋಗಿಯಾಗಿದ್ದರು. ಅವರು ಕಾನ್ಪುರದ ಎಫ್‌ಎಂ ಕಾಲೋನಿ 8 ಬ್ಲಾಕ್‌ನ ನಿವಾಸಿಯಾಗಿದ್ದರು. ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ಕೈಗೊಂಡಿದ್ದಾರೆ. ಆರೋಪಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

ಇದನ್ನೂ ಓದಿ: ಯುಜಿಸಿ ನೆಟ್ ಪ್ರಶ್ನೆ ಪತ್ರಿಕೆ ಸೋರಿಕೆ: ತನಿಖೆಗೆ ತೆರಳಿದ್ದ ಸಿಬಿಐ ತಂಡದ ಮೇಲೆಯೇ ಜನರ ದಾಳಿ - CBI team attacked in Bihar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.