ETV Bharat / bharat

ಮತ್ತೆ ಭಾರಿ ಮಳೆ: ಈ ಮಹಾನಗರಿ ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ, ಯೆಲ್ಲೋ - ಆರೆಂಜ್​ Alert ರವಾನೆ - HOLIDAY DECLARED FOR SCHOOLS

ತಮಿಳುನಾಡಿನಲ್ಲಿ ಮತ್ತೆ ಭಾರಿ ಮಳೆ ಸುರಿಯುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​​ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Holiday declared for schools in Chennai, adjoining districts today due to heavy rains
ಮತ್ತೆ ಭಾರಿ ಮಳೆ: ಈ ಮಹಾನಗರಿ ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ, ಯೆಲ್ಲೋ - ಆರೆಂಜ್​ Alert ರವಾನೆ (IANS)
author img

By ETV Bharat Karnataka Team

Published : Dec 12, 2024, 10:14 AM IST

ಚೆನ್ನೈ, ತಮಿಳುನಾಡು: ಬುಧವಾರ ರಾತ್ರಿಯಿಂದ ಆರಂಭವಾದ ಭಾರೀ ಮಳೆಯಿಂದಾಗಿ ತಮಿಳುನಾಡು ಸರ್ಕಾರ ಚೆನ್ನೈ ಮತ್ತು ಸಮೀಪದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಿದೆ. ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ರಾಮನಾಥಪುರಂ, ದಿಂಡಿಗಲ್, ಕಡಲೂರು ಮತ್ತು ಪುದುಕ್ಕೊಟ್ಟೈ ಜಿಲ್ಲಾಧಿಕಾರಿಗಳು ಅಲ್ಲಿನ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.

ಇನ್ನು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಗುರುವಾರ ಮಳೆ ಪೀಡಿತ ಪ್ರದೇಶದ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಪ್ರಸ್ತುತ ಕಡಿಮೆ ಒತ್ತಡದ ಪ್ರದೇಶ ಉಂಟಾಗಿದೆ ಎಂದು ಗುರುತಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯದ ಕಡೆಗೆ ಶ್ರೀಲಂಕಾ-ತಮಿಳುನಾಡು ಕರಾವಳಿಯ ಕಡೆಗೆ ಚಂಡಮಾರುತವು ಚಲಿಸುವ ನಿರೀಕ್ಷೆಯಿದೆ.

ಭಾರಿಯಿಂದ ಭಾರಿ ಮಳೆ ಸಾಧ್ಯತೆ: ಇದರಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್‌ಪಟ್ಟು, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರ್, ತಿರುಚ್ಚಿ, ಶಿವಗಂಗಾ, ರಾಮನಾಥಪುರಂ, ಮೈಲಾಡುತುರೈ, ನಾಗಪಟ್ಟಿಣಂ, ಕೊಯಮತ್ತೂರು, ತಿರುಪುರ್, ಕರೂರ್, ಥೇಣಿ, ದಿಂಡಿಗಲ್, ಮಧುರೈ, ವಿರುದುಕುಡಿನಗರ, ಟಿ.ವಿರುದುಕುಡಿನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​​ ಘೋಷಣೆ ಮಾಡಲಾಗಿದೆ.

ಇದನ್ನು ಓದಿ: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕೆಲ ಜಿಲ್ಲೆಗಳಿಗೆ ಯೆಲ್ಲೋ- ಆರೇಂಜ್​ ಅಲರ್ಟ್​​ ಘೋಷಣೆ: ಪ್ರಾದೇಶಿಕ ಹವಾಮಾನ ಕೇಂದ್ರ (RMC) ಗುರುವಾರ ತಮಿಳುನಾಡಿನ ಹಲವಾರು ಜಿಲ್ಲೆಗಳಿಗೆ ಆರೆಂಜ್​ ಹಾಗೂ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ. ಬುಧವಾರ, ಚೆನ್ನೈ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಇದು ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತನ್ನ ಪ್ರಕಟಣೆಯಲ್ಲಿ ಮಾಹಿತಿ ಒದಗಿಸಿದೆ.

ಈಶಾನ್ಯ ಮಾನ್ಸೂನ್ ಋತುವಿನಲ್ಲಿ ಅಂದರೆ ಅಕ್ಟೋಬರ್ 1 ರಿಂದ ಡಿಸೆಂಬರ್ 10 ರವರೆಗೆ ತಮಿಳುನಾಡಿನಲ್ಲಿ ಶೇಕಡಾ 14 ರಷ್ಟು ಅಧಿಕ ಮಳೆ ಬಿದ್ದಿದೆ. ಚೆನ್ನೈನಲ್ಲಿ ಸುಮಾರು 845 ಮಿಮೀ ಮಳೆ ಸುರಿದಿದೆ. ಇದು ಸರಾಸರಿಗಿಂತ 16 ಪ್ರತಿಶತದಷ್ಟು ಹೆಚ್ಚು. .

ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ: ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಈಗಾಗಲೇ ಸಮುದ್ರದಲ್ಲಿರುವವರು ಕೂಡಲೇ ದಡಕ್ಕೆ ಮರಳುವಂತೆ ಮನವಿ ಮಾಡಲಾಗಿದೆ.

ಇದನ್ನು ಓದಿ:ಕುರ್ಲಾ ಸಾರಿಗೆ ಬಸ್​ ಅಪಘಾತ: ಬ್ರೇಕ್​ ಬದಲು ಕ್ಲಚ್​ ಒತ್ತಿದ್ದರಿಂದ ಸಂಭವಿಸಿತಾ ದೊಡ್ಡ ಅನಾಹುತ?

ಆಂಧ್ರ, ಕೇರಳಗಳಿಗೂ ಮುನ್ನೆಚ್ಚರಿಕೆ ನೀಡಿದ ಭಾರತೀಯ ಹವಾಮಾನ ಇಲಾಖೆ: ತಮಿಳುನಾಡು ಅಷ್ಟೇ ಅಲ್ಲ ಕೇರಳ ಮತ್ತು ಮಾಹೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಮುಂದಿನ ಎರಡು ದಿನಗಳಲ್ಲಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ. ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.