ETV Bharat / bharat

ಪ್ರಧಾನಿ ಮೋದಿಗೆ ದೊರೆತ ವಿವಿಧ ದೇಶಗಳ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಿವು - PM MODI AWARDS

ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶ್ವದ ಹಲವು ದೇಶಗಳು ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ವಿತರಿಸಿ ಗೌರವಿಸಿವೆ. ಆ ದೇಶಗಳು ಮತ್ತು ಅಲ್ಲಿನ ಪ್ರಶಸ್ತಿಗಳ ಮಾಹಿತಿ ಇಲ್ಲಿದೆ..

Honoured by the world: PM Modi's record number of highest civilian awards
ಪ್ರಧಾನಿ ಮೋದಿಗೆ ದೊರೆತ ಪ್ರಪಂಚದ ವಿವಿಧ ದೇಶಗಳ ಅತ್ಯುನ್ನತ ನಾಗರಿಕ ಪ್ರಶಸ್ತಿಗಳ ಪಟ್ಟಿ (IANS)
author img

By ETV Bharat Karnataka Team

Published : Nov 14, 2024, 6:16 PM IST

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಗುಣ, ದೂರದೃಷ್ಟಿ ಮತ್ತು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಗುರುತಿಸಿ ಪ್ರಪಂಚದ ಹಲವು ದೇಶಗಳು ಅವರಿಗೆ ಆಯಾ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.

ಇಂದಿನ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಸೇರಿ ವಿವಿಧ ದೇಶಗಳಿಂದ ದಾಖಲೆಯ 14 ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಪ್ರಧಾನಿ ಮೋದಿ ಮುಡಿಗೇರಿಸಿಕೊಂಡಿದ್ದಾರೆ. ಇದು ಅವರ ನಾಯಕತ್ವ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಬೆಳವಣಿಗೆಯನ್ನು ಎತ್ತಿ ತೋರಿಸುವುದಷ್ಟೇ ಅಲ್ಲದೇ ಉಭಯ ದೇಶಗಳ ರಾಜತಾಂತ್ರಿಕ ಸಂಬಂಧ ಹಾಗೂ ವಿಶ್ವದಾದ್ಯಂತ ವಿಸ್ತರಿಸುತ್ತಿರುವ ಭಾರತದ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ವಿಶ್ಲೇಷಣೆ ಮಾಡಲಾಗುತ್ತದೆ.

  • ಏಪ್ರಿಲ್ 2016 ರಲ್ಲಿ, ಸೌದಿ ಅರೇಬಿಯಾಕ್ಕೆ ಭೇಟಿ ನೀಡಿದಾಗ, ಪ್ರಧಾನಿ ನರೇಂದ್ರ ಮೋದಿಯವರಿಗೆ ಸೌದಿ ಅರೇಬಿಯಾದಿಂದ 'ಕಿಂಗ್ ಅಬ್ದುಲ್ ಅಜೀಜ್ ಸಾಶ್' (ವಿಶೇಷ ವರ್ಗ) ಎಂಬ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಸೌದಿ ಅರೇಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಲ್ಲಿನ ರಾಜ ಸಲ್ಮಾನ್ ಬಿನ್ ಅಬ್ದುಲಜೀಜ್ ಅವರು ಪ್ರದಾನ ಮಾಡಿದ್ದರು.
  • 2016 ರಲ್ಲಿ, ಮೋದಿಯವರಿಗೆ ಅಫ್ಘಾನಿಸ್ತಾನದಿಂದ 'ಸ್ಟೇಟ್ ಆರ್ಡರ್ ಆಫ್ ಘಾಜಿ ಅಮೀರ್ ಅಮಾನುಲ್ಲಾ ಖಾನ್' ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದು ಆಫ್ಘಾನಿಸ್ತಾನದ ಪರಮೋಚ್ಛ ನಾಗರಿಕ ಗೌರವ ಪ್ರಶಸ್ತಿಯಾಗಿದೆ. ಅಲ್ಲಿನ ಆಗಿನ ಅಧ್ಯಕ್ಷ ಅಶ್ರಫ್ ಘನಿ ಅವರು ಪ್ರಧಾನಿಯವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದರು.
  • 2018 ರಲ್ಲಿ, ಪ್ಯಾಲೆಸ್ಟೈನ್‌ಗೆ ಐತಿಹಾಸಿಕ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರಿಗೆ 'ಗ್ರ್ಯಾಂಡ್ ಕಾಲರ್ ಆಫ್ ದಿ ಸ್ಟೇಟ್ ಆಫ್ ಪ್ಯಾಲೆಸ್ಟೈನ್' ಎಂಬ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದು ವಿದೇಶಿ ಗಣ್ಯರಿಗೆ ಪ್ಯಾಲೆಸ್ಟೈನ್‌ ದೇಶ ನೀಡುವ ಅತ್ಯುನ್ನತ ಪ್ರಶಸ್ತಿಯಾಗಿದೆ. ಭಾರತ ಮತ್ತು ಪ್ಯಾಲೆಸ್ಟೈನ್ ನಡುವಿನ ಸಂಬಂಧವನ್ನು ಉತ್ತೇಜಿಸಲು ಮೋದಿ ಅವರಿಗೆ ಆಗಿನ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರು ಪ್ರದಾನ ಮಾಡಿದರು.
  • 2019 ರಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್‌ ಆಫ್‌ ಜಯೀದ್‌' ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ದ್ವಿಪಕ್ಷೀಯ ಸಹಕಾರ ಸಂಬಂಧ ವೃದ್ಧಿಸಲು ಹಾಗೂ ಅಸಾಧಾರಣ ಕ್ರಮಗಳನ್ನು ಕೈಗೊಂಡಿರುವ ಮೋದಿಯವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಿತ್ತು.
  • ಭಾರತ-ರಷ್ಯಾ ಸಂಬಂಧಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಷ್ಯಾ ದೇಶವು 2019ರಲ್ಲಿ ಪ್ರಧಾನಿ ಮೋದಿಯವರಿಗೆ ತನ್ನ ಅತ್ಯುನ್ನತ ನಾಗರಿಕ ಗೌರವವಾದ 'ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್' ಎಂಬ ಪ್ರಶಸ್ತಿ ನೀಡಿ ಗೌರವಿಸಿತ್ತು. ಜುಲೈ 2024ರಲ್ಲಿ ಮಾಸ್ಕೋಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.
  • 2019 ರಲ್ಲಿ, ಮಾಲ್ಡೀವ್ಸ್ ಪ್ರಧಾನಿ ಮೋದಿಯವರಿಗೆ ವಿದೇಶಿ ಗಣ್ಯರಿಗೆ ಕೊಡಮಾಡುವ ದೇಶದ ಅತ್ಯುನ್ನತ ಗೌರವವಾದ 'ದಿ ಮೋಸ್ಟ್ ಹಾನರಬಲ್ ಆರ್ಡರ್ ಆಫ್ ದಿ ಡಿಸ್ಟಿಂಗ್ವಿಶ್ಡ್ ರೂಲ್ ಆಫ್ ನಿಶಾನ್ ಇಝುದ್ದೀನ್' ಎಂಬ ಪ್ರಶಸ್ತಿ ನೀಡಿ ಗೌರವಿಸಿತು. ಅಲ್ಲಿಯ ಅಂದಿನ ಅಧ್ಯಕ್ಷ ಇಬು ಸೋಲಿಹ್ ಅವರು ಈ ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು.
  • ಅದೇ ವರ್ಷ ಪ್ರಧಾನಿ ಮೋದಿ ಅವರಿಗೆ ಬಹ್ರೇನ್ ದೇಶದಿಂದ 'ಬಹ್ರೇನ್‌ನ ಕಿಂಗ್ ಅಹಮದ್ ಆರ್ಡರ್ ಆಫ್ ರಿನೈಸಾನ್ಸ್' ಗೌರವವನ್ನು ನೀಡಿ ಗೌರವಿಸಲಾಯಿತು. ಬಹ್ರೇನ್ ರಾಜ ಹಮದ್ ಬಿನ್ ಇಸಾ ಅಲ್ ಖಲೀಫಾ ಅವರು ಬೆಳೆಯುತ್ತಿರುವ ಭಾರತ-ಬಹ್ರೇನ್ ಬಾಂಧವ್ಯ ಗುರುತಿಸಿ ಪ್ರಧಾನಿ ಮೋದಿಗೆ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿದ್ದರು.
Honoured by the world: PM Modi's record number of highest civilian awards
ಪ್ರಧಾನಿ ಮೋದಿ ಮುಡಿಗೇರಿದ ವಿವಿಧ ದೇಶಗಳ ಅತ್ಯುನ್ನತ ನಾಗರಿಕ ಪ್ರಶಸ್ತಿಗಳ ಪಟ್ಟಿ (IANS)
  • ಯುನೈಟೆಡ್ ಸ್ಟೇಟ್ಸ್ 2020ರಲ್ಲಿ ಪ್ರಧಾನಿ ಮೋದಿಯವರಿಗೆ 'ಲೀಜನ್ ಆಫ್ ಮೆರಿಟ್' ಎಂಬ ಪ್ರತಿಷ್ಠಿತ ಪ್ರಶಸ್ತಿ ನೀಡಿ ಸನ್ಮಾನಿಸಿತ್ತು. ಗಣನೀಯ ಸೇವೆ ಮತ್ತು ಸಾಧನೆಗಳಿಗಾಗಿ ಅಮೆರಿಕ ಸಶಸ್ತ್ರ ಪಡೆಗಳು ನೀಡುವ ಬಹುದೊಡ್ಡ ಗೌರವ ಪ್ರಶಸ್ತಿ ಇದಾಗಿದೆ. ಪ್ರಧಾನಿ ಪರವಾಗಿ ಭಾರತದ ಅಂದಿನ ರಾಯಭಾರಿ ಟಿ.ಎಸ್.ಸಂಧು ಈ ಪ್ರಶಸ್ತಿ ಸ್ವೀಕರಿಸಿದ್ದರು.
  • 2021ರ ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭೂತಾನ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಆರ್ಡರ್ ಆಫ್ ದಿ ಡ್ರುಕ್ ಗ್ಯಾಲ್ಪೋ' ನೀಡಿ ಗೌರವಿಸಲಾಗಿತ್ತು. ಮಾರ್ಚ್ 2024ರಲ್ಲಿ ಭೂತಾನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಪ್ರಧಾನಿ ಮೋದಿ ಅವರು ಈ ಗೌರವವನ್ನು ಸ್ವೀಕರಿಸಿದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.
  • 2023 ರಲ್ಲಿ, ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರಧಾನಿ ಮೋದಿಯವರಿಗೆ ಪಲಾವ್ ಗಣರಾಜ್ಯದ ಅಧ್ಯಕ್ಷ ಸುರಾಂಜೆಲ್ ವಿಪ್ಸ್ ಜೂನಿಯರ್ ಅವರು 'ಎಬಾಕಲ್' ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದರು. ಮೂರನೇ ಭಾರತ-ಪೆಸಿಫಿಕ್ ದ್ವೀಪಗಳ ಸಹಕಾರ (ಎಫ್‌ಐಪಿಐಸಿ) ಶೃಂಗಸಭೆಯ ಸಂದರ್ಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
  • ಪ್ರಧಾನಿ ಮೋದಿಯವರ ಜಾಗತಿಕ ನಾಯಕತ್ವವನ್ನು ಗುರುತಿಸಿ ಫಿಜಿ ದೇಶದ ಅತ್ಯುನ್ನತ ಗೌರವವಾದ 'ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ'ಯನ್ನು ನೀಡಿ ಗೌರವಿಸಲಾಗಿದೆ. ಈ ಪ್ರಶಸ್ತಿಯನ್ನು ಫಿಜಿಯ ಪ್ರಧಾನಿ ಸಿತಿವೇನಿ ರಬುಕಾ ಅವರು ಮೋದಿ ಅವರಿಗೆ ಪ್ರದಾನ ಮಾಡಿದ್ದರು. ಇತ್ತೀಚೆಗೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೂಡ ನೀಡಲಾಯಿತು.
  • ಪಪುವಾ ನ್ಯೂಗಿನಿಯಾದ 'ಗ್ರ್ಯಾಂಡ್ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಲೋಗೊಹು' ಎಂಬ ಪ್ರಶಸ್ತಿ ನೀಡಲಾಗಿತ್ತು. ಪಪುವಾ ನ್ಯೂಗಿನಿಯಾ ರಾಷ್ಟ್ರದ ಗವರ್ನರ್ ಜನರಲ್ ಸರ್ ಬಾಬ್ ದಾಡೆ ಅವರು ಮೋದಿಯವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿದರು.
  • ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಜೂನ್ 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರದ ಅತ್ಯುನ್ನತ ರಾಜ್ಯ ಗೌರವವಾದ 'ಆರ್ಡರ್ ಆಫ್ ದಿ ನೈಲ್' ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಈಜಿಪ್ಟ್‌ನ ಪ್ರತಿಷ್ಠಿತ ಪ್ರಶಸ್ತಿ ಇದಾಗಿದೆ. ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯ ವೃದ್ಧಿ ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.
  • ಜುಲೈ 13, 2023 ರಂದು ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿಯಾದ 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೋದಿ ಅವರು ಈ ಪ್ರತಿಷ್ಠಿತ ಮನ್ನಣೆ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. 2023 ರಂದು ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ನೇತೃತ್ವದ ಸಮಾರಂಭದಲ್ಲಿ ಫ್ರಾನ್ಸ್‌ನ ಈ ಅತ್ಯುನ್ನತ ಪ್ರಶಸ್ತಿ ನೀಡಲಾಯಿತು.
  • ಆಗಸ್ಟ್ 25, 2023 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗ್ರೀಕ್ ಅಧ್ಯಕ್ಷ ಕಟೆರಿನಾ ಎನ್. ಸಕೆಲ್ಲರೊಪೌಲೌ ಅವರು 'ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್' ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಧಾನಿ ಮೋದಿ ಈ ಪ್ರಶಸ್ತಿ ಪಡೆದ ಮೊದಲ ವಿದೇಶಿ ಸರ್ಕಾರದ ಮುಖ್ಯಸ್ಥರಾಗಿದ್ದಾರೆ.
  • ಪ್ರಧಾನಿ ನರೇಂದ್ರ ಮೋದಿ ಕೆರಿಬಿಯನ್ ರಾಷ್ಟ್ರಗಳಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ 'ಡೊಮಿನಿಕಾ' ಗೌರವವನ್ನು ಘೋಷಿಸಿದೆ. ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ಅವರು ನೀಡಿದ ಕೊಡುಗೆ ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದು ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾಗಿದೆ.
  • ಈ ಅತ್ಯುನ್ನತ ನಾಗರಿಕ ಗೌರವಗಳ ಜೊತೆಗೆ, ಪ್ರಧಾನಿ ಮೋದಿ ಅವರು ಹೆಸರಾಂತ ಜಾಗತಿಕ ಸಂಸ್ಥೆಗಳಿಂದ ಹತ್ತು ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದಾರೆ.
  • 2018 ರಲ್ಲಿ, ಜಾಗತಿಕ ಸಾಮರಸ್ಯ ಮತ್ತು ವಿಶ್ವ ಶಾಂತಿಗೆ ಅವರ ಕೊಡುಗೆಗಳನ್ನು ಗುರುತಿಸಿ ಸಿಯೋಲ್ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಅವರಿಗೆ 'ಸಿಯೋಲ್' ಶಾಂತಿ ಪ್ರಶಸ್ತಿಯನ್ನು ನೀಡಲಾಯಿತು.
  • ಅದೇ ವರ್ಷದಲ್ಲಿ, ವಿಶ್ವಸಂಸ್ಥೆಯು ಪ್ರಧಾನಿ ಮೋದಿಯವರಿಗೆ ಅವರ ದಿಟ್ಟ ಪರಿಸರ ನಾಯಕತ್ವಕ್ಕಾಗಿ ತನ್ನ ಅತ್ಯುನ್ನತ ಪರಿಸರ ಪ್ರಶಸ್ತಿಯಾದ 'ಚಾಂಪಿಯನ್ಸ್ ಆಫ್ ದಿ ಅರ್ಥ್' ಪ್ರಶಸ್ತಿಯನ್ನು ನೀಡಿ ಗೌರವಿಸಿತು.
  • 2019 ರಲ್ಲಿ, ವಿಶ್ವ ಮಾರುಕಟ್ಟೆ ಶೃಂಗಸಭೆಯಿಂದ ಕೊಡಮಾಡುವ 'ಫಿಲಿಪ್ ಕೋಟ್ಲರ್ ಅಧ್ಯಕ್ಷೀಯ' ಪ್ರಶಸ್ತಿಗೂ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ. ವರ್ಲ್ಡ್ ಮಾರ್ಕೆಟಿಂಗ್ ಸಮ್ಮಿಟ್ (ಡಬ್ಲ್ಯುಎಂಎಸ್) ಗ್ರೂಪ್ ಸಂಸ್ಥಾಪಕ, ಮಾರ್ಕೆಟಿಂಗ್ ಮತ್ತು ಮ್ಯಾನೇಜ್‍ಮೆಂಟ್ ಗುರು ಫಿಲಿಪ್ ಕೋಟ್ಲರ್ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಮೋದಿ ಅವರು ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ಪಡೆದರು.
  • ಭಾರತದ ಸ್ವಚ್ಛ ಭಾರತ ಅಭಿಯಾನವನ್ನು ಸ್ವಚ್ಛತೆಯ ಸಾಮೂಹಿಕ ಆಂದೋಲನವನ್ನಾಗಿ ಪರಿವರ್ತಿಸುವ ಅವರ ಪ್ರಯತ್ನಗಳನ್ನು ಗುರುತಿಸಿ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 2019 ರಲ್ಲಿ ಪ್ರಧಾನಿ ಮೋದಿಯವರಿಗೆ ಗ್ಲೋಬಲ್ 'ಗೋಲ್‌ಕೀಪರ್' ಪ್ರಶಸ್ತಿಯನ್ನು ನೀಡಿತು.
  • 2021 ರಲ್ಲಿ, ಪ್ರಧಾನಿ ಮೋದಿ ಅವರು ಜಾಗತಿಕ ಇಂಧನ ಮತ್ತು ಪರಿಸರ ಸುಸ್ಥಿರತೆಯ ಬಗ್ಗೆ ಅವರ ನಾಯಕತ್ವವನ್ನು ಗುರುತಿಸಿ ಕೇಂಬ್ರಿಡ್ಜ್ ಎನರ್ಜಿ ರಿಸರ್ಚ್ ಅಸೋಸಿಯೇಟ್ಸ್ (ಸಿಇಆರ್‌ಎ) ನಿಂದ 'ಗ್ಲೋಬಲ್ ಎನರ್ಜಿ ಮತ್ತು ಎನ್ವಿರಾನ್‌ಮೆಂಟ್ ಲೀಡರ್‌ಶಿಪ್' ಪ್ರಶಸ್ತಿಯನ್ನು ಪಡೆದರು.

ಇದನ್ನೂ ಓದಿ: ಪ್ರಧಾನಿ ಮೋದಿ ದೇಶದ ಅತಿ ಪ್ರಭಾವಿ ವ್ಯಕ್ತಿ: ರಾಹುಲ್​ ಗಾಂಧಿಗೆ 4ನೇ ಸ್ಥಾನ, ನಾಯ್ಡು ಪವರ್​ಫುಲ್​ ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.