ಸಿಕಾರ್(ರಾಜಸ್ಥಾನ): ರಾಜಸ್ಥಾನದ ಸಿಕಾರ್ ಜಿಲ್ಲೆಯ ಲಕ್ಷ್ಮಣಗಢದಲ್ಲಿ ಮಂಗಳವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿ ವೇಗದಲ್ಲಿದ್ದ ಬಸ್ ಸೇತುವೆಯ ತಡೆಗೋಡೆಗೆ ರಭಸವಾಗಿ ಡಿಕ್ಕಿಯಾದ್ದರಿಂದ 12 ಮಂದಿ ಪ್ರಯಾಣಿಕರು ಸಾವನ್ನಪ್ಪಿ, 33 ಜನರು ಗಾಯಗೊಂಡಿದ್ದಾರೆ. ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಲಾಸರ್‌ನಿಂದ ನವಲ್‌ಗಢಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್, ಲಕ್ಷ್ಮಣಗಢದಲ್ಲಿ ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ನಿಯಂತ್ರಣ ತಪ್ಪಿ ದೊಡ್ಡ ಸೇತುವೆಯ ತಡೆಗೋಡೆಗೆ ಗುದ್ದಿದೆ. ರಭಸಕ್ಕೆ ಬಸ್ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮಾಹಿತಿ ತಿಳಿದ ಪೊಲೀಸರು, ತಕ್ಷಣವೇ ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು.
सीकर जिले के लक्ष्मणगढ़ क्षेत्र में बस दुर्घटना के कारण हुई जनहानि दुःखद खबर है,ईश्वर दिवगंत जनों की आत्मा को शांति प्रदान करें व घायलों को शीघ्र स्वास्थ्य लाभ प्रदान करने !
— HANUMAN BENIWAL (@hanumanbeniwal) October 29, 2024
ದುರಂತದಲ್ಲಿ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮತ್ತೆ ಮೂವರು ಅಸುನೀಗಿದ್ದಾರೆ. ಹಲವರಿಗೆ ತೀವ್ರ ಗಾಯಗಳಾಗಿವೆ. ಬಸ್ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಲಕ್ಷ್ಮಣಗಢ ಪೊಲೀಸ್ ಠಾಣೆಯ ಎಎಸ್‌ಐ ರಾಮ್‌ದೇವ್ ಸಿಂಗ್ ತಿಳಿಸಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ. ಮೃತರ ಶವಗಳನ್ನು ಶವಾಗಾರದಲ್ಲಿ ಇರಿಸಲಾಗಿದೆ. ಘಟನೆಗೆ ನಾಗೌರ್ ಕ್ಷೇತ್ರದ ಸಂಸದ ಹನುಮಾನ್ ಬೇನಿವಾಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಗಾಯಾಳುಗಳು ಶೀಘ್ರ ಚೇತರಿಸಲಿ ಎಂದು ಕೋರಿದ್ದಾರೆ.
ಇದನ್ನೂ ಓದಿ: ನಟ ಸಲ್ಮಾನ್, ಜೀಶನ್ ಸಿದ್ದಿಕಿಗೆ ಕೊಲೆ ಬೆದರಿಕೆ ಹಾಕಿದ ಯುವಕನ ಬಂಧನ