ಸೆರೈಕೆಲಾ(ಜಾರ್ಖಂಡ್): ಹೌರಾ-ಮುಂಬೈ ನಡುವೆ ಸಂಚರಿಸುತ್ತಿದ್ದ ಮೇಲ್ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12810) ಹಳಿ ತಪ್ಪಿರುವ ಘಟನೆ ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾವನ್ ಜಿಲ್ಲೆಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು, ರಕ್ಷಣಾ ತಂಡಗಳು ಧಾವಿಸಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯ ನಡೆಯುತ್ತಿದೆ.
#WATCH | Jharkhand: Train no 12810 Howrah-Mumbai derailed near Chakradharpur. 6 passengers sustained injuries, out of them five with minor injuries were treated on the spot. One passenger has been admitted to the hospital. No death has been reported so far. Additional… pic.twitter.com/L3iaePHpfv
— ANI (@ANI) July 30, 2024
ಚಕ್ರಧರಪುರ ವಿಭಾಗದ ಬಡಬಾಂಬೋ-ರಾಜಖಾರ್ಸಾವನ್ ರೈಲ್ವೆ ನಿಲ್ದಾಣದ ನಡುವಿನ ಪೊಟೊ ಬೇಡಾ ಗ್ರಾಮದ ಬಳಿ ಮುಂಜಾನೆ 4.30ರ ಸುಮಾರಿಗೆ ಅಪಘಾತ ಜರುಗಿದೆ. ರೈಲಿನ ನಾಲ್ಕು ಸಾಮಾನ್ಯ ಬೋಗಿಗಳನ್ನು ಹೊರತುಪಡಿಸಿ ಉಳಿದೆಲ್ಲ 18 ಬೋಗಿಗಳು ಹಳಿತಪ್ಪಿವೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಸೆರೈಕೆಲಾ-ಖಾರ್ಸಾವನ್ ಜಿಲ್ಲಾಧಿಕಾರಿ ರವಿಶಂಕರ್ ಶುಕ್ಲಾ ಸೇರಿದಂತೆ ಅನೇಕ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರೈಲ್ವೆ ಇಲಾಖೆಯಿಂದ ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಚಕ್ರಧರಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ವೇಳೆ ಬಹುತೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು. ಅಪಘಾತದ ನಂತರ ಕೆಲವರು ಭಯದಿಂದ ಬೋಗಿಯಿಂದ ಓಡಿ ಹೊರಬಂದಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಚಲಿಸುತ್ತಿದ್ದ ಗೂಡ್ಸ್ ರೈಲಿನಿಂದ ಬೇರ್ಪಟ್ಟು ಉರುಳಿ ಬಿದ್ದ 10 ಕಂಟೈನರ್‌ಗಳು: ರೈಲು ಸಂಚಾರ ಬಂದ್