ಅಲೀರಾಜ್ಪುರ(ಮಧ್ಯ ಪ್ರದೇಶ): ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಲಿರಾಜ್‌ಪುರ ಎಂಬಲ್ಲಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ, ಸೋಮವಾರ ಅಲಿರಾಜ್‌ಪುರ ಜಿಲ್ಲೆಯ ಸೋಂಡ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ರೌರಿ ಗ್ರಾಮದ ಮನೆಯೊಂದರಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳ ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಮೃತರನ್ನು ರಾಕೇಶ್, ಪತ್ನಿ ಲಲಿತಾ, ಪ್ರಕಾಶ್, ಅಕ್ಷಯ್, ಲಕ್ಷ್ಮಿ, ಎಂದು ಗುರುತಿಸಲಾಗಿದೆ. ಮೃತನ ಸಂಬಂಧಿಕರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಐವರ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸಿದ ಎಸ್ಪಿ ರಾಜೇಶ್ ವ್ಯಾಸ್, ಇಂದು ಬೆಳಗ್ಗೆ ಮೃತನ ಸಂಬಂಧಿ ಮನೆಗೆ ಬಂದಾಗ ಈ ವಿಚಾರ ಬೆಳಕಿಗೆ ಬಂತು. ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ ಕುಟುಂಬಸ್ಥರು ಕೊಲೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಳಿಕವೇ ಕೊಲೆಯೇ ಅಥವಾ ಆತ್ಮಹತ್ಯೆ ಎಂದು ತಿಳಿದು ಬರಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜಲಪಾತದಲ್ಲಿ ಕೊಚ್ಚಿಹೋದ ಮಹಿಳೆ, ನಾಲ್ವರು ಅಪ್ರಾಪ್ತ ಮಕ್ಕಳು - Five drown in waterfall