ETV Bharat / bharat

ಈ ಬಾರಿಯ ಬಜೆಟ್​ನಿಂದ ಯುವಕರು, ಬಡವರು, ಮಹಿಳೆಯರು, ರೈತರ ಸಬಲೀಕರಣ: ಪ್ರಧಾನಿ ಮೋದಿ

PM Modi on interim budget; 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ಮಧ್ಯಂತರ ಬಜೆಟ್ ಮೂಡಿಸಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

interim-budget-gives-the-guarantee-of-making-india-a-developed-nation-by-2047-says-pm-modi
ಈ ಬಾರಿಯ ಬಜೆಟ್​ನಿಂದ ಯುವಕರು, ಬಡವರು, ಮಹಿಳೆಯರು, ರೈತರ ಸಬಲೀಕರಣ: ಪ್ರಧಾನಿ ಮೋದಿ
author img

By ETV Bharat Karnataka Team

Published : Feb 1, 2024, 3:39 PM IST

ನವದೆಹಲಿ: ಸಂಸತ್ತಿನಲ್ಲಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ 17ನೇ ಲೋಕಸಭೆಯ ಕೊನೆಯ ಬಜೆಟ್​ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಮಧ್ಯಂತರ ಬಜೆಟ್ ಅಂತರ್ಗತ ಮತ್ತು ನಾವೀನ್ಯವಾಗಿದೆ. ಇದು ನಿರಂತರತೆಯ ವಿಶ್ವಾಸವನ್ನು ಹೊಂದಿದೆ. ಇದು ವಿಕಸಿತ ಭಾರತದ ನಾಲ್ಕು ಆಧಾರ ಸ್ತಂಭಗಳಾದ ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುತ್ತದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಈ ಬಜೆಟ್‌ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂ.ಗಳನ್ನು ನೀಡಲಾಗಿದೆ. ನಾವು ಅರ್ಥಶಾಸ್ತ್ರಜ್ಞರ ಭಾಷೆಯಲ್ಲಿ ಹೇಳುವುದಾದರೆ ಇಂದೊಂದು ರೀತಿಯಲ್ಲಿ 'ಸ್ವೀಟ್ ಸ್ಪಾಟ್'. ಇದರೊಂದಿಗೆ 21ನೇ ಶತಮಾನದ ಭಾರತದ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವುದರ ಜೊತೆಗೆ ಯುವಕರಿಗೆ ಅಸಂಖ್ಯಾತ ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಆದಾಯ ತೆರಿಗೆ ವಿನಾಯಿತಿ ಯೋಜನೆಯು ಮಧ್ಯಮ ವರ್ಗದ 1 ಕೋಟಿ ಜನರಿಗೆ ನಿರಾಳತೆ ನೀಡಲಿದೆ. ಈ ಬಾರಿಯ ಬಜೆಟ್‌ನಲ್ಲಿ ರೈತರಿಗಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಮತ್ತು ಅವರಿಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಒತ್ತು ಕೊಡಲಾಗಿದೆ. ಬಡವರಿಗೆ ಹೆಚ್ಚುವರಿ 2 ಕೋಟಿ ಮನೆಗಳ ನಿರ್ಮಾಣದ ಬಗ್ಗೆ ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ.

ಮುಂದುವರೆದು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೂ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ವಿಸ್ತರಿಸಲಾಗಿದೆ. ಅಲ್ಲದೇ, ಯುವ ಭಾರತದ ಯುವಕರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಈ ಬಜೆಟ್‌ನಲ್ಲಿ ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂಪಾಯಿ ನಿಧಿಯನ್ನು ಮೀಸಲಿಡುವ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದೆ. ಪ್ರಧಾನಿ ಮೋದಿ ನೇತೃತ್ವದ ಎರಡನೇ ಅವಧಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್​ಅನ್ನು ಇಂದು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸಿದರು. ಇದು ಅವರು ಮಂಡಿಸಿದ ಆರನೇ ಬಜೆಟ್ ಆಗಿದೆ. ಕಳೆದ 10 ವರ್ಷಗಳಲ್ಲಿ ನಮ್ಮ ಸರ್ಕಾರವು ಮಾಡಿದ ಉತ್ತಮ ಕೆಲಸದ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಮತ್ತೆ ಜನಾದೇಶದೊಂದಿಗೆ ಆರಿಸಿ ಬರಲಿದೆ ಎಂದು ಸಚಿವೆ ನಿರ್ಮಲಾ ತಮ್ಮ ಭಾಷಣದಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೇರ, ಪರೋಕ್ಷ ತೆರಿಗೆ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: ಕೇಂದ್ರ ಬಜೆಟ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.