ETV Bharat / bharat

ಜಮ್ಮುಕಾಶ್ಮೀರ: ಮೂವರು ಉಗ್ರರ ಬೇಟೆಯಾಡಿದ ಭದ್ರತಾ ಪಡೆ - Terrorists Encounter

ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಎನ್​ಕೌಂಟರ್ ಮಾಡಿದೆ.

ಜಮ್ಮುಕಾಶ್ಮೀರದಲ್ಲಿ ಮೂವರು ಉಗ್ರರ ಬೇಟೆಯಾಡಿದ ಭದ್ರತಾ ಪಡೆ
ಜಮ್ಮುಕಾಶ್ಮೀರದಲ್ಲಿ ಮೂವರು ಉಗ್ರರ ಬೇಟೆಯಾಡಿದ ಭದ್ರತಾ ಪಡೆ (ಸಂಗ್ರಹ ಚಿತ್ರ)
author img

By ETV Bharat Karnataka Team

Published : Sep 14, 2024, 1:27 PM IST

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಕಿಶ್ತ್ವಾರ್​​ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಈ ಬೆನ್ನಲ್ಲೇ ಬಾರಾಮುಲ್ಲಾ ಜಿಲ್ಲೆಯ ಕೀರಿ ಪ್ರದೇಶದಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ತಡರಾತ್ರಿ ಸೇನೆಯ ರಾಷ್ಟ್ರೀಯ ರೈಫಲ್ಸ್, ಸಿಆರ್​ಪಿಎಫ್​ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾರಚಣೆಗೆ ಇಳಿದಿದ್ದರು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ಓರ್ವ ಉಗ್ರ ಹತನಾಗಿದ್ದ. ಬಳಿಕ ಕಾರ್ಯಾಚರಣೆ ಮುಂದುವರಿಸಿದಾಗ ಮತ್ತಿಬ್ಬರು ಉಗ್ರರನ್ನು ಎನ್​ಕೌಂಟರ್ ಮಾಡಲಾಗಿದೆ. ಶಾಲೆಯ ಕಟ್ಟಡದೊಳಗಿನಿಂದಲೇ ಉಗ್ರರು ಭದ್ರತಾ ಪಡೆಯತ್ತ ಗುಂಡಿನ ದಾಳಿ ಮಾಡುತ್ತಿದ್ದೆ. ಭದ್ರತಾ ಪಡೆಯ ಕಾರ್ಯಾಚರಣೆ ತೀವ್ರಗೊಂಡಿದೆ. ಸ್ಥಳದಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಿಶ್ತವಾರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಕಾರ್ಯಾಚರಣೆ ವೇಳೆ ಓರ್ವ ಜೆಸಿಓ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಈ ವೇಳೆ ಮತ್ತಿಬ್ಬರು ಯೋಧರು ಗಾಯಗೊಂಡಿದ್ದು, ಹೆಲಿಕಾಪ್ಟರ್ ಮೂಲಕ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಇಬ್ಬರು ಯೋಧರು ಹುತಾತ್ಮ - SOLDIERS MARTYRED

ಕಿಶ್ತ್ವಾರ್ ಇಬ್ಬರು ಯೋಧರ ಸಾವನ್ನು ಸೇನೆ ಕೂಡ ದೃಢಪಡಿಸಿದ ಭದ್ರತಾ ಪಡೆ, ವೀರ ಮರಣ ಹೊಂದಿದ ಯೋಧರ ತ್ಯಾಗಕ್ಕೆ ಭದ್ರತಾ ಪಡೆ ವಂದನೆ ಸಲ್ಲಿಸಿದೆ. ಜೊತೆಗೆ ಅವರ ಕುಟುಂಬಗಳಿಗೆ ಸಂತಾಪ ಸೂಚಿಸಿದೆ.

ಎರಡು ದಿನಗಳ ಹಿಂದೆಯಷ್ಟೇ ಉಧಮ್‌ಪುರ ಜಿಲ್ಲೆಯ ಬಸಂತ್‌ಗಢದಲ್ಲಿ ಭದ್ರತಾ ಕಾರ್ಯಾಚರಣೆ ನಡೆಸಿ ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿತ್ತು. ಕಣಿವೆ ರಾಜ್ಯದಲ್ಲಿ ಉಗ್ರರ ಹಾವಳಿ ಹೆಚ್ಚಾಗುತ್ತಿದೆ. ಜೊತೆಗೆ ಗಡಿ ನಿಯಂತ್ರಣ ರೇಖೆ ಮೂಲಕ ದೇಶದೊಳಗೆ ಒಳನುಸುಳಲು ಯತ್ನಿಸುತ್ತಿದ್ದಾರೆ. ಆದರೆ ಭದ್ರತಾ ಪಡೆಯು ಉಗ್ರರ ಸಂಚನ್ನು ವಿಫಲಗೊಳಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.