ಅನಂತನಾಗ್ (ಜಮ್ಮು- ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಸೆಪ್ಟೆಂಬರ್ 18 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಇದಕ್ಕೂ ಮೊದಲು ರಾಜಕೀಯ ಪಕ್ಷಗಳು ಮತಕ್ಕಾಗಿ ಭರವಸೆಗಳ ಮಹಾಪೂರವನ್ನೇ ಹರಿಸುತ್ತಿವೆ. ಬಿಜೆಪಿ ಬಳಿಕ ಕಾಂಗ್ರೆಸ್ ಕೂಡ ಭರ್ಜರಿ ಘೋಷಣೆಗಳನ್ನು ಪ್ರಕಟಿಸಿದೆ.
आज जम्मू-कश्मीर चुनाव को लेकर कांग्रेस की गारंटी लॉन्च की गई।
— Congress (@INCIndia) September 11, 2024
जम्मू-कश्मीर की जनता से कांग्रेस का वादा है 👇
🔹 परिवार की महिला मुखिया को हर महीने 3,000 रुपए
🔹 1 लाख खाली पदों पर भर्ती
🔹 परिवार के हर सदस्य को 11 किलो चावल
🔹 25 लाख रुपए का स्वास्थ्य बीमा
🔹 स्वयं सहायता… pic.twitter.com/58NQLMEmtC
ಬುಧವಾರ ಇಲ್ಲಿ ನಡೆದ ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಶ್ಮೀರದ ಜನರಿಗೆ ಐದು ಭರವಸೆಗಳನ್ನು ಘೋಷಿಸಿದ್ದಾರೆ. ಇದರಲ್ಲಿ ಮಹಿಳಾ ಉದ್ಯಮಿಗಳಿಗೆ 5 ಲಕ್ಷ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ, ಮಹಿಳೆಗೆ ಮಾಸಿಕ 3 ಸಾವಿರ ರೂಪಾಯಿ, ಪ್ರತಿ ವ್ಯಕ್ತಿಗೆ 11 ಕೆಜಿ ಅಕ್ಕಿ ನೀಡುವುದಾಗಿ ಪ್ರಕಟಿಸಿದರು.
Kashmiri Panditon Ka Haq pic.twitter.com/H7vLJRJWAA
— Congress (@INCIndia) September 11, 2024
ಕೇಂದ್ರಾಡಳಿತ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫ್ರೆನ್ಸ್ ಮೈತ್ರಿಕೂಟ ಅಧಿಕಾರಕ್ಕೆ ಬಂದಲ್ಲಿ, ಐದು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗುವುದು. ಕರ್ನಾಟಕದ ಮಾದರಿಯಲ್ಲಿ ಕುಟುಂಬದ ಮಹಿಳೆಗೆ ಮಾಸಿಕ 3 ಸಾವಿರ ನೀಡಲಾಗುವುದು. ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ ನೀಡುವುದನ್ನು ಪುನಃಸ್ಥಾಪನೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ನೀಡಿದ್ದ ವಲಸಿಗ ಕಾಶ್ಮೀರ ಪಂಡಿತರಿಗೆ ಪುನರ್ವಸತಿ ನೀಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭರವಸೆ ನೀಡಿದರು.
OBC Ka Haq pic.twitter.com/Nsdi7050ja
— Congress (@INCIndia) September 11, 2024
ಈ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಸುಬೋಧ್ ಕಾಂತ್ ಸೇರಿದಂತೆ ಇತರ ಹಿರಿಯ ಕಾಂಗ್ರೆಸ್ ನಾಯಕರು ಇದ್ದರು.
Achi Sehat Humara Haq pic.twitter.com/pfd0hll9Ue
— Congress (@INCIndia) September 11, 2024
ಬಿಜೆಪಿ ವಿರುದ್ಧ ವಾಗ್ದಾಳಿ: ಐದು ಮಹತ್ವದ ಭರವಸೆಗಳನ್ನು ಘೋಷಣೆ ಬಳಿಕ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷರು, ಬಿಜೆಪಿ ಸರ್ಕಾರ 5 ಲಕ್ಷ ಉದ್ಯೋಗ ನೀಡುವ ಭರವಸೆ ಸುಳ್ಳು. ಈ ಹಿಂದೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಈಗ ಐದು ಲಕ್ಷ ಉದ್ಯೋಗ ನೀಡುವುದಾಗಿ ಹೇಳುತ್ತಿರುವುದು ವಿಪರ್ಯಾಸದ ಸಂಗತಿ. ಈ ಹಿಂದಿನ ವಾಗ್ದಾನದಂತೆ 10 ವರ್ಷಗಳಲ್ಲಿ 1 ಲಕ್ಷ ಜನರಿಗೆ ಉದ್ಯೋಗ ನೀಡಿಲ್ಲ. 5 ಲಕ್ಷ ಕೆಲಸ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
Mahila Samman Humara Haq pic.twitter.com/pGb69pUH8L
— Congress (@INCIndia) September 11, 2024
ಕಾಂಗ್ರೆಸ್ ಘೋಷಿಸಿದ ಪಂಚ ಗ್ಯಾರಂಟಿ
- ಮಹಿಳಾ ಉದ್ಯಮಿಗಳಿಗೆ ₹5 ಲಕ್ಷ ಬಡ್ಡಿ ರಹಿತ ಸಾಲ
- ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ಆರೋಗ್ಯ ವಿಮೆ
- ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯ
- ಕಾಶ್ಮೀರಿ ಪಂಡಿತ ವಲಸಿಗರಿಗೆ ಪುನರ್ವಸತಿ
- ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 3 ಸಾವಿರ ರೂಪಾಯಿ