ರಾಂಚಿ, ಜಾರ್ಖಂಡ್: ಜೆಎಂಎಂ ನಾಯಕ ಹೇಮಂತ್ ಸೊರೆನ್ ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, ಹೇಮಂತ್ ಸೊರೆನ್ಗೆ ಪ್ರಮಾಣ ವಚನ ಬೋಧಿಸಿದರು. ರಾಂಚಿಯ ಮೊರಹಬಾದಿ ಮೈದಾನದಲ್ಲಿ ಗುರುವಾರ ಸಂಜೆ ಹೇಮಂತ್ ಸೊರೆನ್ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.
ಸಮಾರಂಭಕ್ಕೆ ಸಾಕ್ಷಿಯಾದ ಗಣ್ಯರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮತ್ತು ಇತರರು ಭಾರತ ಮೈತ್ರಿಕೂಟದ ನಾಯಕರಲ್ಲಿ ಭಾಗವಹಿಸಿದ್ದರು. 'ಪ್ರಮಾಣ ಸಮಾರಂಭ. ಭಾರತ ಒಕ್ಕೂಟದ ಮುಖಂಡರು ಉಪಸ್ಥಿತರಿದ್ದರು.
ನಾಲ್ಕನೇ ಬಾರಿ ಹೇಮಂತ ಸಿಎಂ ಆಗಿ ಪ್ರಮಾಣ: ನಾಲ್ಕನೇ ಬಾರಿಗೆ ಹೇಮಂತ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ವರೆಗೆ ಮೂರು ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಹೇಮಂತ್ ಸೊರೇನ್ ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ನಾಲ್ಕನೇ ಬಾರಿಗೆ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಈ ವರ್ಷದ ಆರಂಭದಲ್ಲಿ ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಜನವರಿ 31 ರಂದು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ್ದರು. ಆ ಬಳಿಕ ಹೇಮಂತ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೈಲು ಸೇರಿದ್ದರು.
ಜೈಲಿಗೆ ಹೋಗಿ ಬಂದು ರಾಜ್ಯದಲ್ಲಿ ಮತ್ತೆ ಪಕ್ಷ ಅಧಿಕಾರಕ್ಕೆ ತಂದ ಹೇಮಂತ್: ಐದು ತಿಂಗಳ ನಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಮತ್ತೆ ಸಿಎಂ ಪಟ್ಟ ಅಲಂಕರಿಸಿದ್ದರು. ಆ ನಂತರ ವಿಧಾನಸಭೆ ಚುನಾವಣೆಯಲ್ಲಿ ಜನರ ವಿಶ್ವಾಸ ಗಳಿಸಲು ಪತ್ನಿ ಕಲ್ಪನಾ ಸೊರೇನ್ ಜತೆಗೂಡಿ ವ್ಯಾಪಕ ಪ್ರಚಾರ ನಡೆಸಿದ್ದರು. ಪ್ರತಿಪಕ್ಷಗಳಿಂದ ಬಂಟಿ ಔರ್ ಬಬ್ಲಿ ಎಂದು ಟೀಕೆಗೆ ಒಳಗಾಗಿದ್ದ ಜೋಡಿ, ಎಲೆಕ್ಷನ್ನಲ್ಲಿ ಪಕ್ಷವನ್ನು ಗೆಲುವಿನ ದಡಕ್ಕೆ ಸೇರಿಸಿತ್ತು.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ಪಕ್ಷ ಭರ್ಜರಿ ಜಯ ಸಾಧಿಸಿದೆ. ರಾಜ್ಯದ 81 ಸ್ಥಾನಗಳ ಪೈಕಿ ಜೆಎಂಎಂ 34 ಸ್ಥಾನಗಳನ್ನು ಗೆದ್ದಿದೆ. ಭಾರತೀಯ ಜನತಾ ಪಕ್ಷ 21, ಕಾಂಗ್ರೆಸ್ 16 ಮತ್ತು ಆರ್‌ಜೆಡಿ 4 ಸ್ಥಾನಗಳನ್ನು ಗೆದ್ದಿವೆ. ಸಿಪಿಐ (ಎಂಎಲ್) ಎರಡು, ಎಜೆಎಸ್‌ಯುಪಿ, ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಜೆಎಲ್‌ಕೆಎಂ ಮತ್ತು ಜೆಡಿಯು ತಲಾ ಒಂದು ಸ್ಥಾನ ಗಳಿಸಿವೆ. ಆ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಜೆಎಂಎಂ ನೇತೃತ್ವದ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು.
ಇದನ್ನು ಓದಿ:ಕಾಶ್ಮೀರಿ ಪಂಡಿತ್ ಹೌಸಿಂಗ್ ಸೊಸೈಟಿ ಮೌಲ್ಯಮಾಪನಕ್ಕೆ ಕೇಂದ್ರ ಸರ್ಕಾರದ ಸಮಿತಿ ರಚನೆ