ETV Bharat / bharat

ಜಾರ್ಖಂಡ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೆನ್​​​ - ಚಂಪೈ ಸೊರೇನ್

ಜೆಎಂಎಂ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂಪೈ ಸೊರೇನ್

author img

By PTI

Published : Feb 2, 2024, 7:24 PM IST

ರಾಂಚಿ: ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್​​​ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಜಭವನದಲ್ಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರು ಪ್ರಮಾಣ ವಚನ ಬೋಧಿಸಿದರು. ಚಂಪೈ ಸೊರೆನ್​​​ ಅವರೊಂದಿಗೆ ಹಿರಿಯ ಕಾಂಗ್ರೆಸ್ ನಾಯಕ ಅಲಂಗೀರ್ ಆಲಂ ಮತ್ತು ಆರ್‌ಜೆಡಿ ನಾಯಕ ಸತ್ಯಾನಂದ್ ಭೋಕ್ತಾ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ದರ್ಬಾರ್ ಹಾಲ್‌ನಲ್ಲಿ ನಡೆದ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೆಎಂಎಂ ನೇತೃತ್ವದ ಮೈತ್ರಿಕೂಟದ ಹಿರಿಯ ನಾಯಕರು ಉಪಸ್ಥಿತರಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೆನ್​​​ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದ ಎರಡು ದಿನಗಳ ನಂತರ, 67 ವರ್ಷದ ಆದಿವಾಸಿ ನಾಯಕ ರಾಜ್ಯದ 12ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕೀಯ ಬಿಕ್ಕಟ್ಟಿನಿಂದ ಹೇಮಂತ್ ಸೊರೆನ್​​​​ ತಮ್ಮ ಮುಖ್ಯಮಂತ್ರಿ ಪದವಿಗೆ ದಿಢೀರ್​ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹೇಮಂತ್ ಪತ್ನಿ ಕಲ್ಪನಾ ಅವರು ರಾಜ್ಯದ ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆರು ಬಾರಿ ಶಾಸಕರಾಗಿರುವ ಮತ್ತು ಹೇಮಂತ್ ಸೊರೆನ್​​​ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಚಂಪೈ ಸೊರೆನ್​​​ ಅವರನ್ನು ಜಾರ್ಖಂಡ್ ಮುಕ್ತಿ ಮೋರ್ಚಾದ ಶಾಸಕಾಂಗ ಪಕ್ಷದ ನಾಯಕರಾಗಿ ಬುಧವಾರ ತಡರಾತ್ರಿ ಆಯ್ಕೆ ಮಾಡಲಾಗಿತ್ತು.

‌ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ ಅವರನ್ನು ಗುರುವಾರ ಭೇಟಿಯಾಗಿದ್ದ ಚಂಪೈ, ನೂತನ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಬೇಕೆಂದು ಮನವಿ ಮಾಡಿಕೊಂಡಿದ್ದರು. ಅದರಂತೆ, ರಾಜ್ಯಪಾಲರು ಪ್ರಮಾಣ ವಚನ ಸ್ವೀಕರಿಸಲು ಆಹ್ವಾನ ನೀಡಿದ್ದರು. ಹಲವರು ಶಾಸಕರು ಇಂದು ತಮ್ಮ ಹೊಸ ನಾಯಕನೊಂದಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಚಂಪೈ ಸೊರೆನ್​​​, "ಹೇಮಂತ್ ಅವರು ಪ್ರಾರಂಭಿಸಿದ ಜನ ಪರ ಮತ್ತು ಕಲ್ಯಾಣ ಯೋಜನೆಗಳನ್ನು ನಾವು ಮುಂದುವರೆಸಿಕೊಂಡು ಹೋಗುತ್ತೇವೆ. ಜಾರ್ಖಂಡ್‌ನ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ. ಆದಿವಾಸಿಗಳು ಮತ್ತು ಇತರರ ಸರ್ವತೋಮುಖ ಅಭಿವೃದ್ಧಿಗಾಗಿ ನಾವು 'ಜಲ್, ಜಂಗಲ್, ಜಮೀನ್' (ಜಲ, ಅರಣ್ಯ, ಭೂಮಿ) ಹೋರಾಟವನ್ನು ಮುಂದುವರಿಸುತ್ತೇವೆ. ನಾವು ಒಗ್ಗಟ್ಟಾಗಿ ನಿಲ್ಲುತ್ತೇವೆ. ನಮ್ಮ ಮೈತ್ರಿ ತುಂಬಾ ಪ್ರಬಲವಾಗಿದೆ. ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಪರೋಕ್ಷವಾಗಿ ಸವಾಲು ಎಸೆದಿದ್ದಾರೆ.

ಇದನ್ನೂ ಓದಿ: ಆಪರೇಷನ್​ ಭೀತಿ: ಹೈದರಾಬಾದ್​​ಗೆ ಬಂದಿಳಿದ ಜಾರ್ಖಂಡ್​ ಶಾಸಕರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.