ETV Bharat / bharat

ರಾಜ್ಯಸಭೆಗೆ ಡಿಎಂಕೆಯಿಂದ ನಟ ಕಮಲ ಹಾಸನ್ ನಾಮನಿರ್ದೇಶನ ಸಾಧ್ಯತೆ - KAMAL HAASAN

ನಟ ಕಮಲಹಾಸನ್ ರಾಜ್ಯಸಭಾ ಸದಸ್ಯತ್ವ ಪಡೆಯುವ ಸಾಧ್ಯತೆಗಳಿವೆ.

ಕಮಲ ಹಾಸನ್
ಕಮಲ ಹಾಸನ್ (ians)
author img

By ETV Bharat Karnataka Team

Published : Feb 12, 2025, 1:02 PM IST

ಚೆನ್ನೈ, ತಮಿಳುನಾಡು: ತಮಿಳು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರನ್ನು ಡಿಎಂಕೆ ಪಕ್ಷವು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಪಿ.ಕೆ. ಶೇಖರ್ ಬಾಬು ಅವರು ಬುಧವಾರ ಕಮಲ್ ಹಾಸನ್​ರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ ಈ ಚರ್ಚೆಗೆ ಮತ್ತೆ ಬಲ ಬಂದಂತಾಗಿದೆ.

ಮಕ್ಕಳ್ ನೀಧಿ ಮೈಯಂ (ಎಂಎನ್ಎಂ) ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ಕಮಲ್ ಹಾಸನ್, 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಐಎನ್​ಡಿಐಎ ಮೈತ್ರಿಕೂಟದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು ಮತ್ತು ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ರಂಗದ ಪರವಾಗಿ ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಈ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಮೈತ್ರಿಕೂಟವು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು.

ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಡಿಎಂಕೆ ಪರವಾಗಿ ಕಮಲ್ ಹಾಸನ್ ಪ್ರಚಾರ ಮಾಡಿದ್ದಕ್ಕೆ ಪ್ರತಿಯಾಗಿ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವುದಾಗಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಭರವಸೆ ನೀಡಿದ್ದಾರೆ ಎಂದು ಡಿಎಂಕೆ ಮೂಲಗಳು ಹೇಳಿವೆ.

ಜೂನ್ 2025 ರಲ್ಲಿ ಆರು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು, ಶೇಖರ್ ಬಾಬು ಅವರು ಕಮಲ್ ಹಾಸನ್ ಅವರನ್ನು ಭೇಟಿಯಾಗಿ, ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಿಎಂ ಸ್ಟಾಲಿನ್ ಅವರ ಭರವಸೆ ನೀಡಿದರು ಎಂದು ವರದಿಯಾಗಿದೆ.

ದೃಢಪಡಿಸಿದ ಮಕ್ಕಳ್ ನೀಧಿ ಮೈಯಂ ಪಕ್ಷದ ವಕ್ತಾರ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಕ್ಕಳ್ ನೀಧಿ ಮೈಯಂ ಪಕ್ಷದ ವಕ್ತಾರ ಮತ್ತು ಖ್ಯಾತ ತಮಿಳು ಚಲನಚಿತ್ರ ನಿರ್ಮಾಪಕ ಮುರಳಿ ಅಪ್ಪಾಸ್, ಪಕ್ಷಕ್ಕೆ ರಾಜ್ಯಸಭಾ ಸದಸ್ಯತ್ವ ನೀಡುವ ಭರವಸೆ ಸಿಕ್ಕಿದೆ ಎಂಬುದನ್ನು ದೃಢಪಡಿಸಿದರು. ಆದರೆ ರಾಜ್ಯಸಭಾ ಸದಸ್ಯತ್ವವನ್ನು ಒಪ್ಪಿಕೊಳ್ಳಬೇಕೆ ಎಂಬುದನ್ನು ಸ್ವತಃ ಕಮಲಹಾಸನ್ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕಮಲ್ ಹಾಸನ್ ಫೆಬ್ರವರಿ 21, 2018 ರಂದು ಮಧುರೈನಲ್ಲಿ ಮಕ್ಕಳ್ ನೀಧಿ ಮೈಯಂ ಪಕ್ಷವನ್ನು ಸ್ಥಾಪಿಸಿದ್ದರು. ತಮ್ಮ ಪಕ್ಷವು ಪಾರದರ್ಶಕತೆ, ಆಡಳಿತದಲ್ಲಿ ಸುಧಾರಣೆ ಮತ್ತು ಪ್ರಾದೇಶಿಕ ಸಹಕಾರವನ್ನು ಪ್ರತಿಪಾದಿಸುವ ವೇದಿಕೆಯಾಗಿದೆ ಎಂದು ಅವರು ಹೇಳಿದ್ದರು. ಆರು ಅಂತರ್​ ಬಂಧಿತ ಕೈಗಳ ಚಿತ್ರವನ್ನು ಹೊಂದಿರುವ ಅದರ ಪಕ್ಷದ ಧ್ವಜವು ಭಾರತದ ದಕ್ಷಿಣ ರಾಜ್ಯಗಳ (ಐದು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶ) ನಡುವಿನ ಏಕತೆಯನ್ನು ಸಂಕೇತಿಸುತ್ತದೆ.

ಇದನ್ನೂ ಓದಿ : ಮಣಿಪುರದಲ್ಲಿ ಮುಂದುವರೆದ ರಾಜಕೀಯ ಅಸ್ಥಿರತೆ; ರಾಷ್ಟ್ರಪತಿ ಆಡಳಿತ ಹೇರುತ್ತಾ ಕೇಂದ್ರ? - MANIPUR CRISIS

ETV Bharat Logo

Copyright © 2025 Ushodaya Enterprises Pvt. Ltd., All Rights Reserved.