ETV Bharat / bharat

ಜಾರ್ಖಂಡ್​, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​ ಪರ ಕೇಜ್ರಿವಾಲ್​ ಪ್ರಚಾರ ನಡೆಸಲ್ಲ: ಆಪ್​ - KEJRIWAL ELECTION CAMPAIGN

ಜಾರ್ಖಂಡ್, ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಅವರು ಕಾಂಗ್ರೆಸ್​ ಪರ ಪ್ರಚಾರ ಮಾಡದಿರಲು ನಿರ್ಧರಿಸಿದ್ದಾರೆ.

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ (ETV Bharat)
author img

By ETV Bharat Karnataka Team

Published : Oct 26, 2024, 10:48 PM IST

ನವದೆಹಲಿ: ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು (ಎಎಪಿ) ಸ್ಪರ್ಧೆಯಿಂದ ಹಿಂದೆ ಸರಿದಿದೆ. ಬದಲಿಗೆ I.N.D.I.A ಕೂಟಕ್ಕೆ ಬೆಂಬಲ ಘೋಷಿಸಿದೆ. ಎರಡೂ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧದ ಮತಗಳನ್ನು ಸೆಳೆಯಲು ಪ್ಲಾನ್​ ಮಾಡಿದೆ.

ಇದರ ಭಾಗವಾಗಿ, ಇಂಡಿಯಾ ಕೂಟದ ಮೈತ್ರಿ ಪಕ್ಷಗಳ ಪರವಾಗಿ ಪ್ರಚಾರ ಮಾಡಲು ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಂದಾಗಿದ್ದಾರೆ. ವಿಶೇಷವೆಂದರೆ, ಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್​ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲ್ಲ ಎಂದು ಪಕ್ಷ ತಿಳಿಸಿದೆ.

ಶಿವಸೇನೆ (ಯುಬಿಟಿ), ಎನ್​ಸಿಪಿ (ಶರದ್ ಪವಾರ್ ಬಣ) ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಭ್ಯರ್ಥಿಗಳು ಸೇರಿದಂತೆ ಎಎಪಿಯ ಎಲ್ಲಾ ಮೈತ್ರಿ ಪಾಲುದಾರ ಪಕ್ಷಗಳ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಬೆಂಬಲಿಸಲಿದೆ. ಅವರ ಪರವಾಗಿ ಪ್ರಚಾರ ಕೂಡ ನಡೆಸಲಾಗುವುದು. ಆದರೆ, ಕಾಂಗ್ರೆಸ್​​ ಅಭ್ಯರ್ಥಿಗಳ ಪರ ಕೇಜ್ರಿವಾಲ್​ ಅವರು ಪ್ರಚಾರ ಮಾಡುವುದಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕೇಜ್ರಿವಾಲ್​ ಬೆಂಬಲ ಯಾಚನೆ: ಮಹಾರಾಷ್ಟ್ರದಲ್ಲಿ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಶರದ್ ಪವಾರ್) ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಭಾಗಿಯಾಗುವಂತೆ ಅರವಿಂದ್​ ಕೇಜ್ರಿವಾಲ್​ ಅವರನ್ನು ಕೋರಿವೆ. ಹೀಗಾಗಿ ಮಾಜಿ ಸಿಎಂ ಆ ಪಕ್ಷಗಳ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಅದೇ ರೀತಿ, ಜಾರ್ಖಂಡ್‌ನಲ್ಲಿ ಜೆಎಂಎಂ ಅಭ್ಯರ್ಥಿಗಳ ಪರವೂ ಮತಬೇಟೆ ನಡೆಸಲಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪದ ಮೇಲೆ ಕೇಜ್ರಿವಾಲ್ ಅವರು ಜೈಲಿನಲ್ಲಿದ್ದಾಗ ಜಾರ್ಖಂಡ್​ ಸಿಎಂ ಹೇಮಂತ್ ಸೋರೆನ್ ಅವರೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದರು. ಈ ವೇಳೆ ಇಬ್ಬರೂ ನಾಯಕರ ಮಧ್ಯೆ ನಿಕಟ ಸಂಬಂಧ ಬೆಳೆಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ, ಎಎಪಿ ಸಂಚಾಲಕರು ಸೋರೆನ್ ಅವರ ಪತ್ನಿ ಕಲ್ಪನಾ ಅವರೊಂದಿಗೆ ಜಂಟಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಕೇಜ್ರಿವಾಲ್​ ಜೈಲಿನಲ್ಲಿದ್ದಾಗ ಪತ್ನಿ ಸುನೀತಾ ಅವರನ್ನು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಭೇಟಿಯಾಗಿ, ಧೈರ್ಯ ತುಂಬಿದ್ದರು. ಈ ಸಂಬಂಧವನ್ನು ಅವರು ಉಳಿಸಿಕೊಳ್ಳಲು ಮುಂದಾಗಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದರೂ, ಪಕ್ಷಗಳ ನಡುವೆ ಬಾಂಧವ್ಯ ವಿಸ್ತರಣೆಗೆ ಮುಂದಾಗಿದೆ. ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಎಎಪಿ ಸಿದ್ಧತೆ ನಡೆಸಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲು ಹವಣಿಸುತ್ತಿದೆ.

ಇದನ್ನೂ ಓದಿ: ರೋಡ್​ ಶೋದಲ್ಲಿ ಕೇಜ್ರಿವಾಲ್​ ಮೇಲೆ ಬಿಜೆಪಿಗರಿಂದ ಹಲ್ಲೆ- ಆಪ್​: ಆರೋಪ ಆಧಾರರಹಿತ- ಬಿಜೆಪಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.