ETV Bharat / bharat

'ಕೇಜ್ರಿವಾಲ್ ಮಂಗಳವಾರ ರಾಜೀನಾಮೆ ನೀಡುವುದು ಖಚಿತ': ದೆಹಲಿ ಆರೋಗ್ಯ ಸಚಿವ ಭಾರದ್ವಾಜ್ ಸ್ಪಷ್ಟನೆ - Arvind Kejriwal Resignation

author img

By ETV Bharat Karnataka Team

Published : Sep 16, 2024, 4:08 PM IST

ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಗೆ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (IANS)

ನವದೆಹಲಿ: ಅರವಿಂದ್ ಕೇಜ್ರಿವಾಲ್ ಮಂಗಳವಾರ ರಾಜೀನಾಮೆ ನೀಡುವುದು ಖಚಿತ ಎಂದು ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಮುಖ್ಯಮಂತ್ರಿ ಕೇಜ್ರಿವಾಲ್ ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಅವರು ದೃಢಪಡಿಸಿದ್ದಾರೆ.

11.30ಕ್ಕೆ ಶಾಸಕಾಂಗ ಪಕ್ಷದ ಸಭೆ: ಮಂಗಳವಾರ ಬೆಳಗ್ಗೆ 11.30ಕ್ಕೆ ಆಪ್ ಶಾಸಕರ ಸಭೆ ನಡೆಯಲಿದೆ ಎಂದು ಎಎಪಿ​ ತಿಳಿಸಿದೆ. ಇದರಲ್ಲಿ ನೂತನ ಮುಖ್ಯಮಂತ್ರಿ ಹೆಸರು ಚರ್ಚೆಯಾಗಲಿದೆ. ಇದಾದ ನಂತರ, ಸಿಎಂ ಅರವಿಂದ್ ಕೇಜ್ರಿವಾಲ್ ನಾಳೆ ಸಂಜೆ 4.30ಕ್ಕೆ ಲೆಫ್ಟಿನೆಂಟ್​ ಜನರಲ್​ಗೆ ರಾಜೀನಾಮೆ ಸಲ್ಲಿಸಬಹುದು ಮತ್ತು ಸಿಎಂ ಆಗಿ ಶಾಸಕಾಂಗ ಪಕ್ಷದ ಹೊಸ ನಾಯಕನ ಹೆಸರನ್ನು ಪ್ರಸ್ತಾಪಿಸಬಹುದು ಎಂದು ತಿಳಿದು ಬಂದಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್, ಪ್ರಾಮಾಣಿಕ ಎಎಪಿ ನಾಯಕನಿಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಕೇಜ್ರಿವಾಲ್​ ಅವರೊಂದಿಗೆ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿಗೆ ಮುಂಬರುವ ಚುನಾವಣೆಯಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದರು.

"ಇತಿಹಾಸದಲ್ಲಿ ಮೊದಲ ಬಾರಿಗೆ, ಚುನಾಯಿತ ಮುಖ್ಯಮಂತ್ರಿಯೊಬ್ಬರು ನ್ಯಾಯಾಲಯದ ತೀರ್ಪಿನ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಮತ್ತು ಸಿಎಂ ಸ್ಥಾನವು ಅವರಿಗಾಗಿ ಕಾಯುತ್ತಿದೆ. ಆದರೂ, ಜನತಾ ನ್ಯಾಯಾಲಯದಿಂದ ತೀರ್ಪು ಬರುವವರೆಗೂ ಆ ಆಸನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ. ಜನ ತಮ್ಮನ್ನು ಪ್ರಾಮಾಣಿಕನೆಂದು ನಿರ್ಧರಿಸಿದರೆ ಮಾತ್ರ ಸಿಎಂ ಹುದ್ದೆ ವಹಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಇದು ಬಹಳ ಮಹತ್ವದ ವಿಷಯವಾಗಿದೆ." ಎಂದು ಭಾರದ್ವಾಜ್ ಹೇಳಿದರು.

ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ: ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಅದರ ನಾಯಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಂಸದ ಸಂದೀಪ್ ದೀಕ್ಷಿತ್ ಸೋಮವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಪಕ್ಷದಲ್ಲಿ ಅರವಿಂದ್ ಕೇಜ್ರಿವಾಲ್ ಅವರೊಬ್ಬರೇ ಏಕೈಕ ಮಹತ್ವದ ವ್ಯಕ್ತಿಯಾಗಿದ್ದು, ಪಕ್ಷದ ಇತರ ಸದಸ್ಯರನ್ನು ಮನೆ ಕೆಲಸದವರಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಎರಡು ದಿನಗಳ ಹಿಂದೆ ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಿಂದ ಜಾಮೀನು ಪಡೆದ ನಂತರ ಎರಡು ದಿನಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಭಾನುವಾರ ಘೋಷಿಸಿರುವುದು ಇಲ್ಲಿ ಗಮನಾರ್ಹ.

ಎಎಪಿಯೊಳಗೆ ನಿರ್ಧಾರಗಳನ್ನು ತೆಗೆದುಕೊಳ್ಳುವ ವ್ಯವಸ್ಥೆಯೇ ಹಾಳಾಗಿದೆ ಎಂದು ಶಂಕೆ ವ್ಯಕ್ತಪಡಿಸಿದ ದೀಕ್ಷಿತ್, ಆ ವ್ಯವಸ್ಥೆ ಕೇಜ್ರಿವಾಲ್ ಸುತ್ತಲೂ ಹೆಚ್ಚು ಕೇಂದ್ರೀಕೃತವಾಗಿದೆ ಎಂದು ಹೇಳಿದರು. ಪಕ್ಷದೊಳಗಿನ ರಹಸ್ಯ ಮಾಹಿತಿಗಳನ್ನು ಯಾರಿಗೂ ಹೇಳದ ಮತ್ತು ತಮ್ಮ ಕೈಗೊಂಬೆಗಳಾಗಿ ಕೆಲಸ ಮಾಡುವಂಥವರನ್ನು ಪಕ್ಷದ ಪ್ರಮುಖ ಸ್ಥಾನಗಳಿಗೆ ನೇಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

"ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರು ಎಂದು ಅವರು ಈಗಾಗಲೇ ನಿರ್ಧರಿಸಿರಬಹುದು. ಆದರೆ ಇದಾವುದೂ ಗೊತ್ತಿಲ್ಲದಂತೆ ಕೆಲ ಎಎಪಿ ನಾಯಕರು ನಟಿಸುತ್ತಿದ್ದಾರೆ" ಎಂದು ಅವರು ಹೇಳಿದರು.

ಇದನ್ನೂ ಓದಿ : ವಾಡಿಕೆಗಿಂತ ಶೇ 8ರಷ್ಟು ಅಧಿಕ ಮಳೆ, ಬಿತ್ತನೆ ಹೆಚ್ಚಳ: ಹಣದುಬ್ಬರ ಕಡಿಮೆಯಾಗುವ ನಿರೀಕ್ಷೆ - Rainfall In India

ETV Bharat Logo

Copyright © 2024 Ushodaya Enterprises Pvt. Ltd., All Rights Reserved.