ನವದೆಹಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ದಿವಂಗತ ಕರ್ಪೂರಿ ಠಾಕೂರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವಾದ 'ಭಾರತ ರತ್ನ' ಘೋಷಿಸಲಾಗಿದೆ. ಮರಣೋತ್ತರವಾಗಿ ಈ ಪ್ರಶಸ್ತಿ ಪ್ರಕಟಿಸಲಾಗಿದ್ದು, ಈ ಬಗ್ಗೆ ರಾಷ್ಟ್ರಪತಿ ಭವನವು ಪ್ರಕಟಣೆ ನೀಡಿದೆ.
-
I am delighted that the Government of India has decided to confer the Bharat Ratna on the beacon of social justice, the great Jan Nayak Karpoori Thakur Ji and that too at a time when we are marking his birth centenary. This prestigious recognition is a testament to his enduring… pic.twitter.com/9fSJrZJPSP
— Narendra Modi (@narendramodi) January 23, 2024 " class="align-text-top noRightClick twitterSection" data="
">I am delighted that the Government of India has decided to confer the Bharat Ratna on the beacon of social justice, the great Jan Nayak Karpoori Thakur Ji and that too at a time when we are marking his birth centenary. This prestigious recognition is a testament to his enduring… pic.twitter.com/9fSJrZJPSP
— Narendra Modi (@narendramodi) January 23, 2024I am delighted that the Government of India has decided to confer the Bharat Ratna on the beacon of social justice, the great Jan Nayak Karpoori Thakur Ji and that too at a time when we are marking his birth centenary. This prestigious recognition is a testament to his enduring… pic.twitter.com/9fSJrZJPSP
— Narendra Modi (@narendramodi) January 23, 2024
ಸ್ವಾತಂತ್ರ್ಯ ಹೋರಾಟಗಾರ, ಸಮಾಜವಾದಿ ನಾಯಕರಾದ ಕರ್ಪೂರಿ ಠಾಕೂರ್ ಜನ ನಾಯಕ ಎಂದೇ ಹೆಸರು ಮಾಡಿದವರು. ನಾಳೆ, ಜನವರಿ 24ರಂದು ಜನ್ಮ ಶತಮಾನೋತ್ಸವ ಆಚರಿಸಲಾಗುತ್ತದೆ. ಇದಕ್ಕೂ ಮುನ್ನವಾದ ಇಂದು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ (ಮರಣೋತ್ತರ) ಪ್ರಶಸ್ತಿ ನೀಡಲು ರಾಷ್ಟ್ರಪತಿಗಳು ಸಂತಸಗೊಂಡಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಮತ್ತೊಂದೆಡೆ, ಮಹಾನ್ ಜನನಾಯಕ ಕರ್ಪೂರಿ ಠಾಕೂರ್ ಅವರ ಜನ್ಮ ಶತಮಾನೋತ್ಸವ ಆಚರಿಸುತ್ತಿರುವ ಈ ಸಮಯದಲ್ಲಿ 'ಭಾರತ ರತ್ನ' ಪ್ರಶಸ್ತಿ ನೀಡಲು ಭಾರತ ಸರ್ಕಾರ ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಕರ್ಪೂರಿ ಠಾಕೂರ್ ಅವರನ್ನು ಸಾಮಾಜಿಕ ನ್ಯಾಯದ ದಾರಿದೀಪ ಎಂದೂ ಬಣ್ಣಿಸಿರುವ ಪ್ರಧಾನಿ ಮೋದಿ, ಈ ಪ್ರತಿಷ್ಠಿತ ಗೌರವವು ವಂಚಿತರ ಪರವಾಗಿ ಮತ್ತು ಸಮಾನತೆ ಮತ್ತು ಸಬಲೀಕರಣದ ಧೀಮಂತರಾಗಿ ಅವರ ನಿರಂತರ ಪ್ರಯತ್ನಗಳಿಗೆ ಸಾಕ್ಷಿಯಾಗಿದೆ. ದೀನದಲಿತರನ್ನು ಮೇಲಕ್ಕೆತ್ತಲು ಅವರ ಅಚಲ ಬದ್ಧತೆ ಮತ್ತು ದೂರದೃಷ್ಟಿಯ ನಾಯಕತ್ವವು ಭಾರತದ ಸಾಮಾಜಿಕ, ರಾಜಕೀಯ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ. ಈ ಪ್ರಶಸ್ತಿ ಅವರ ಗಮನಾರ್ಹ ಕೊಡುಗೆಗಳನ್ನು ಗೌರವಿಸುವುದು ಮಾತ್ರವಲ್ಲದೇ ನ್ಯಾಯಯುತ ಮತ್ತು ಸಮಾನ ಸಮಾಜವನ್ನು ನಿರ್ಮಿಸುವ ಅವರ ಧ್ಯೇಯವನ್ನು ಮುಂದುವರಿಸಲು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ.
ಕರ್ಪೂರಿ ಠಾಕೂರ್ ಅವರ ಹಿನ್ನೆಲೆ: ಕರ್ಪೂರಿ ಠಾಕೂರ್ ಅವರು 1924ರಲ್ಲಿ ಸಮಸ್ತಿಪುರ್ ಜಿಲ್ಲೆಯಲ್ಲಿ ಜನಿಸಿದ್ದರು. 1988ರಲ್ಲಿ 64ನೇ ವಯಸ್ಸಿನಲ್ಲಿ ಪಾಟ್ನಾದಲ್ಲಿ ನಿಧನ ಹೊಂದಿದ್ದರು. ಹಿಂದುಳಿದವರ ಹಕ್ಕುಗಳ ಪ್ರತಿಪಾದಕರಾಗಿದ್ದ ಕರ್ಪೂರಿ ಠಾಕೂರ್, 70ರ ದಶಕದಲ್ಲಿ ಎರಡು ಬಾರಿ ಬಿಹಾರದ ಮುಖ್ಯಮಂತ್ರಿ ಸೇವೆ ಸಲ್ಲಿಸಿದ್ದರು. ಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು ಶ್ರಮಿಸಿದ್ದರು.
ಇದಕ್ಕೂ ಮೊದಲ ಕ್ವಿಟ್ ಇಂಡಿಯಾ ಚಳವಳಿಗೆ ಸಕ್ರಿಯವಾಗಿ ಕೊಡುಗೆ ನೀಡಿದ್ದರು. ಜೈಲಿನಲ್ಲಿ ತಿಂಗಳುಗಳ ಕಾಲ ಕಳೆದಿದ್ದರು. ದೇಶದ ಸ್ವಾತಂತ್ರ್ಯ ನಂತರ 1952ರಲ್ಲಿ ತಾಜ್‌ಪುರ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಶಿಕ್ಷಣ ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದ ಅವರು ಬಿಹಾರದ ಮೊದಲ ಕಾಂಗ್ರೆಸ್ಸೇತರ ಸಮಾಜವಾದಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
ನಾಲ್ಕು ದಶಕಗಳಿಂದ ಬಿಹಾರದ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಮತ್ತು ಕೇಂದ್ರದ ಮಾಜಿ ಸಚಿವ ದಿವಂಗತ ರಾಮ್ ವಿಲಾಸ್ ಪಾಸ್ವಾನ್ ಸೇರಿದಂತೆ ಪ್ರಮುಖ ನಾಯಕರಿಗೆ ಮಾರ್ಗದರ್ಶಕರಾಗಿಯೂ ಕರ್ಪೂರಿ ಠಾಕೂರ್ ಹೆಸರು ಮಾಡಿದ್ದರು.