ನವದೆಹಲಿ: ಉತ್ತರ ಪ್ರದೇಶದ ರಾಯ್ ಬರೇಲಿ ಹಾಗು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರೀ ಅಂತರದಿಂದ ವಿಜಯ ಪತಾಕೆ ಹಾರಿಸಿದ್ದಾರೆ. ರಾಯ್ಬರೇಲಿಯಲ್ಲಿ ಸುಮಾರು 4 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಹುಲ್ ಗಾಂಧಿ 6,86,044 ಮತಗಳನ್ನು ಪಡೆದರೆ, ದಿನೇಶ್ ಪ್ರತಾಪ್ ಸಿಂಗ್ 2,96,703 ಮತಗಳನ್ನು ಪಡೆದಿದ್ದಾರೆ.
ವಯನಾಡ್ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಸಿಪಿಎಂನ ಆ್ಯನಿ ರಾಜಾ ಅವರನ್ನು 3,63,422 ಮತಗಳಿಂದ ಮಣಿಸಿದ್ದಾರೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಅವರು 1,41,045 ಮತಗಳನ್ನು ಪಡೆದು 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.
ಇದನ್ನೂ ಓದಿ: ವಾರಾಣಸಿ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಹಿಂದಿಕ್ಕಿದ ಪ್ರಧಾನಿ: ಹ್ಯಾಟ್ರಿಕ್ನತ್ತ ಮೋದಿ - PM Modi leading