ವಯನಾಡ್: ಕೇರಳದ ವಯನಾಡಿನಲ್ಲಿ ಇಂಡಿಯಾ ಬ್ಲಾಕ್ ಪಾಲುದಾರರಾದ ಕಾಂಗ್ರೆಸ್ ಮತ್ತು ಸಿಪಿಐ ನಡುವೆ ಪೈಪೋಟಿ ಏರ್ಪಟ್ಟಿದೆ. ರಾಹುಲ್ ಗಾಂಧಿ ವಿರುದ್ಧ ಅನ್ನಿ ರಾಜ ಅವರು ಪರಸ್ಪರ ಕಣಕ್ಕಿಳಿದಿದ್ದಾರೆ. ವಯನಾಡ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಲೋಕಸಭಾ ಅಭ್ಯರ್ಥಿ ಅನ್ನಿ ರಾಜಾ ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.
CPI ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗದ ಪಾಲುದಾರ. CPI ಮತ್ತು ಕಾಂಗ್ರೆಸ್ ವಿರೋಧ ಪಕ್ಷದ ಇಂಡಿಯಾ ಬಣದಲ್ಲಿ ಪಾಲುದಾರರಾಗಿದ್ದರೆ. ಆದ್ರೆ ಎರಡು ಪಕ್ಷಗಳು ಕೇರಳದಲ್ಲಿ ತೀವ್ರ ಸ್ಪರ್ಧಿಗಳಾಗಿವೆ. ಉಭಯ ಪಕ್ಷಗಳು ತಮ್ಮ ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸಿವೆ.
ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜ ಅವರ ಪತ್ನಿ ಅನ್ನಿ ರಾಜ ಅವರು ಪಕ್ಷದ ರಾಷ್ಟ್ರೀಯ ಭಾರತೀಯ ಮಹಿಳಾ ಒಕ್ಕೂಟದಲ್ಲಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಹೊಂದಿದ್ದಾರೆ. ಮತ್ತು ಸಿಪಿಐ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಇರಿಟ್ಟಿಯಲ್ಲಿ ಜನಿಸಿದ ರಾಜ ಅವರು ಸಿಪಿಐನ ವಿದ್ಯಾರ್ಥಿ ವಿಭಾಗ, ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ ಮತ್ತು ನಂತರ ಅದರ ಯುವ ವಿಭಾಗವಾದ ಆಲ್ ಇಂಡಿಯಾ ಯೂತ್ ಫೆಡರೇಶನ್‌ಗೆ ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.
ರಾಜ ಅವರು ಸಿಪಿಐನ ಮಹಿಳಾ ವಿಭಾಗದ ಕಣ್ಣೂರು ಜಿಲ್ಲಾ ಕಾರ್ಯದರ್ಶಿಯಾಗಿ ಮತ್ತು ನಂತರ ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವರು ತಮ್ಮ ಪಕ್ಷದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದರು.
ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ಚಾಲನೆ: ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ರಾಹುಲ್ ಗಾಂಧಿ ಅವರು ಬುಧವಾರ ಕಲ್ಪೆಟ್ಟಾ ಪಟ್ಟಣದಲ್ಲಿ ರ‍್ಯಾಲಿ ನಡೆಸಿದ್ದಾರೆ. ನಂತರ ವಯನಾಡ್‌ಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜ ಹೊರತುಪಡಿಸಿ, ಕೇಂದ್ರದಲ್ಲಿ ಇಂಡಿಯಾ ಬಣದ ಪ್ರಧಾನ ಪ್ರತಿಸ್ಪರ್ಧಿಯಾಗಿರುವ ಭಾರತೀಯ ಜನತಾ ಪಕ್ಷವು ತನ್ನ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಿದೆ.
2019 ರ ಲೋಕಸಭೆ ಚುನಾವಣೆಯಲ್ಲಿ 64.7 ಶೇಕಡಾ ಮತ ಪಡೆದುಕೊಂಡಿದ್ದ ರಾಹುಲ್ ಗಾಂಧಿ ವಯನಾಡ್‌ನಿಂದ 706,367 ಮತಗಳನ್ನು ಗಳಿಸಿದ್ದರು. ಎರಡನೇ ಸ್ಥಾನದಲ್ಲಿರುವ ಸಿಪಿಐ ಅಭ್ಯರ್ಥಿ ಪಿ ಪಿ ಸುನೀರ್ 274,597 ಮತಗಳನ್ನು ಪಡೆದು ಶೇ 25.1ರಷ್ಟು ಮತಗಳನ್ನು ತಮ್ಮದಾಗಿಸಿಕೊಂಡಿದ್ದರು.
2019 ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) 20 ಸ್ಥಾನಗಳ ಪೈಕಿ, 19 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 15 ಸ್ಥಾನಗಳನ್ನು ಗೆದ್ದರೆ, ಅದರ ಮಿತ್ರಪಕ್ಷಗಳಾದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಎರಡು ಸ್ಥಾನಗಳನ್ನು ಗೆದ್ದುಕೊಂಡಿತ್ತು. ರೆವಲ್ಯೂಷನರಿ ಸೋಷಿಯಲಿಸ್ಟ್ ಪಾರ್ಟಿ ಒಂದು ಸ್ಥಾನ ಮತ್ತು ಕೇರಳ ಕಾಂಗ್ರೆಸ್ (ಎಂ) ಒಂದು ಸ್ಥಾನ ಗೆದ್ದಿತ್ತು. ಅಲಪ್ಪುಳದಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಒಂದು ಸ್ಥಾನ ಗೆದ್ದುಕೊಂಡಿತ್ತು.