ETV Bharat / bharat

ಜಮ್ಮು ಮತ್ತು ಕಾಶ್ಮೀರ: ಲೋಕಸಭಾ ಚುನಾವಣೆಗೆ ಭಾರೀ ಅರೆಸೇನಾ ಪಡೆಗಳ ನಿಯೋಜನೆಗೆ ಕೇಂದ್ರ ನಿರ್ಧಾರ - ಅರೆಸೇನಾ ಪಡೆ

ಲೋಕಸಭಾ ಚುನಾವಣೆ ಹಿನ್ನೆಲೆ ದೇಶಾದ್ಯಂತ 3,400 ಅರೆಸೇನಾ ಪಡೆಗಳನ್ನು ನಿಯೋಜಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.

Lok Sabha elections 2024: Massive paramilitary deployment for polls in J&K
ಜಮ್ಮು ಮತ್ತು ಕಾಶ್ಮೀರ: ಲೋಕಸಭಾ ಚುನಾವಣೆಗೆ ಭಾರೀ ಅರೆಸೇನಾ ಪಡೆಗಳ ನಿಯೋಜನೆಗೆ ಕೇಂದ್ರ ನಿರ್ಧಾರ
author img

By ETV Bharat Karnataka Team

Published : Feb 15, 2024, 3:57 PM IST

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಉದ್ವಿಗ್ನತೆ ಹಾಗೂ ಭದ್ರತಾ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ 635 ಅರೆಸೇನಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಿಸಿದೆ. 28 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಲ್ಲಿ 3,400 ಪಡೆಗಳನ್ನು ನಿಯೋಜಿಸುವ ಯೋಜನೆ ಇದಾಗಿದೆ. 3,400 ಪಡೆಗಳಲ್ಲಿ ಶೇಕಡಾ 50ಕ್ಕೂ ಹೆಚ್ಚು ಪಡೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿರುವ ಪಶ್ಚಿಮ ಬಂಗಾಳ, ಜಮ್ಮು ಕಾಶ್ಮೀರ ಹಾಗೂ ಛತ್ತೀಸ್​ಗಢ ರಾಜ್ಯಗಳಲ್ಲಿ ನಿಯೋಜಿಸಲಾಗುವುದು ಎಂದು ಕೇಂದ್ರ ಹೇಳಿದೆ.

ಅಧಿಕೃತ ಮೂಲಗಳ ಪ್ರಕಾರ, ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಚುನಾವಣಾ ಅಧಿಕಾರಿಗಳು, ಚುನಾವಣಾ ಸಂಬಂಧಿತ ಕರ್ತವ್ಯಗಳನ್ನು ನಿರ್ವಹಿಸಲು ಕೇಂದ್ರ ಸಶಸ್ತ್ರ ಪೊಲೀಸ್​ ಪಡೆಗಳನ್ನು (CAPF) ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಮತದಾನದ ದಿನ, ವಿದ್ಯುನ್ಮಾನ ಮತಯಂತ್ರಗಳ(ಇವಿಎಂ) ಸುರಕ್ಷತೆ, ಸ್ಟ್ರಾಂಗ್​ ರೂಂ ಕೇಂದ್ರಗಳ ಬಳಿ, ಮತ ಎಣಿಕೆ ಕೇಂದ್ರಗಳ ಹೆಚ್ಚಿನ ಭದ್ರತೆಗೆ ಸಿಎಪಿಎಫ್​ ಸಿಬ್ಬಂದಿಯನ್ನು ನಿಯೋಜಿಸುವಂತೆ ಚುನಾವಣಾ ಆಯೋಗಗಳು ವಿನಂತಿಸಿವೆ.

ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆ ನಡೆಯುವುದನ್ನು ಖಚಿತಪಡಿಸಿಕೊಳ್ಳಲು, ಸುಮಾರು 3,400 ಅರೆಸೇನಾ ಪಡೆಗಳನ್ನು ದೇಶಾದ್ಯಂತ ಹಂತ ಹಂತವಾಗಿ ನೀಯೋಜಸಿಲಾಗುವುದು. ಪರಿಸ್ಥಿತಿಯ ಮೌಲ್ಯಮಾಪನದ ಆಧಾರದ ಮೇಲೆ ಪಶ್ಚಿಮ ಬಂಗಾಳದಲ್ಲಿ 920, ಜಮ್ಮು ಮತ್ತು ಕಾಶ್ಮೀರದಲ್ಲಿ 635 ಮತ್ತು ಛತ್ತೀಸ್​ಗಢದಲ್ಲಿ 360 ಪಡೆಗಳನ್ನು ನಿಯೋಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಹೋಲಿಸಿದರೆ ಇದು ಅತಿ ಹೆಚ್ಚು ಸಂಖ್ಯೆಯ ನಿಯೋಜನೆಯಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ಟ್ರಾಂಗ್​ ರೂಂ ಕಾವಲು ಮತ್ತು ಮತ ಎಣಿಕೆ ಕೇಂದ್ರಗಳ ವ್ಯವಸ್ಥೆಗಾಗಿ ಕೇಂದ್ರ ಸಶಸ್ತ್ರ ಪೊಲೀಸ್​ 36 ಪಡೆಗಳನ್ನು ಉಳಿಸಿಕೊಳ್ಳಲಾಗುವುದು. ಲಕ್ಷದ್ವೀಪ, ಪುದುಚೇರಿ ಮತ್ತು ಚಂಡೀಗಢದಲ್ಲಿ ಕ್ರಮವಾಗಿ 3, 10, ಮತ್ತು 11 ಪಡೆಗಳನ್ನು ನಿಯೋಜಿಸಲಾಗುವುದು. ಇದು ಕೇಂದ್ರ ಸಶಸ್ತ್ರ ಪೊಲೀಸ್​ ಪಡೆಯ ಕನಿಷ್ಠ ನಿಯೋಜನೆಗೆ ಸಾಕ್ಷಿಯಾಗಲಿದೆ.

"ಜಮ್ಮು ಹಾಗೂ ಕಾಶ್ಮೀರದಿಂದ ಕಾನೂನು ಹಾಗೂ ಸುವ್ಯವಸ್ಥೆ ಎಡಿಜಿ ವಿಜಯ್​ ಕುಮಾರ್​ ಅವರು ರಾಜ್ಯ ಪೊಲೀಸ್​ ನೋಡಲ್​ ಅಧಿಕಾರಿಯಾಗಿರಲಿದ್ದಾರೆ. ಮುಖ್ಯ ಚುನಾವಣಾ ಅಧಿಕಾರಿ ಪಾಂಡುರಂಗ​, ಕೇಂದ್ರಾಡಳಿತ ಪ್ರದೇಶದಲ್ಲಿ ಪಡೆಗಳ ಚಲನವನ ಹಾಗೂ ಅವರ ನಿಯೋಜನೆಯ ಉಸ್ತುವಾರಿ ವಹಿಸಲಿದ್ದಾರೆ. ಹೆಚ್ಚುವರಿ ನಿರ್ದೇಶನದಲ್ಲಿ ರೈಲ್ವೇ ಮಂಡಳಿಯ ಅಧ್ಯಕ್ಷರಿಗೆ ರೈಲುಗಳಲ್ಲಿ ಸೂಕ್ತ ಸೌಲಭ್ಯಗಳೊಂದಿಗೆ ಸಾಕಷ್ಟು ಸಂಖ್ಯೆಯ ರೋಲಿಂಗ್​ ಸ್ಟಾಕ್​ಗಳನ್ನು ಖಚಿತಪಡಿಸಿಕೊಳ್ಳಲು ಸೂಚನೆ ನೀಡಲಾಗಿದೆ." ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿ, "ನಾವು ಎಲ್ಲಾ ಇಲಾಖೆಗಳೊಂದಿಗೆ ಪರಿಶೀಲನಾ ಸಭೆ ನಡೆಸುತ್ತೇವೆ. ಸಿಬ್ಬಂದಿಗೆ ವ್ಯವಸ್ಥೆ ಮಾಡುತ್ತೇವೆ." ಎಂದು ತಿಳಿಸಿದರು.

ಐದು ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರ, ಈ ಪ್ರದೇಶದ ರಾಜಕೀಯ ಚಿತ್ರಣವನ್ನು ರೂಪಿಸುವಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಲಿದೆ.

ಇದನ್ನೂ ಓದಿ: ಹೈಕೋರ್ಟ್‌ ಕಚೇರಿಗಳಿಗೆ ಹೆಚ್ಚುವರಿ ಸ್ಥಳಾವಕಾಶ: 10 ಮಹಡಿಗಳ ಕಟ್ಟಡ ನಿರ್ಮಾಣ ಪ್ರಸ್ತಾವ ಅಂತಿಮ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.