ETV Bharat / bharat

ಬಿಜೆಪಿ ಸಿಇಸಿ ಸಭೆ ಮುಕ್ತಾಯ: ಕರ್ನಾಟಕ, ತೆಲಂಗಾಣ ಸೇರಿ 7 ರಾಜ್ಯಗಳ 90 ಅಭ್ಯರ್ಥಿಗಳ ಹೆಸರು ಅಂತಿಮ - Lok Sabha polls

ಸೋಮವಾರ ರಾತ್ರಿ ಮುಗಿದ ಬಿಜೆಪಿಯ ಸಿಇಸಿ ಸಭೆಯಲ್ಲಿ 90 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ಸಿಇಸಿ ಸಭೆ
ಬಿಜೆಪಿ ಸಿಇಸಿ ಸಭೆ
author img

By ANI

Published : Mar 12, 2024, 7:18 AM IST

ನವದೆಹಲಿ: ಲೋಕಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಸುತ್ತಿರುವ ಬಿಜೆಪಿ, ನಿನ್ನೆ (ಸೋಮವಾರ) ತಡರಾತ್ರಿಯವರೆಗೂ ನಡೆದ ಕೇಂದ್ರೀಯ ಚುನಾವಣಾ ಸಮಿತಿಯ (ಸಿಇಸಿ) ಎರಡನೇ ಸಭೆಯಲ್ಲಿ ಏಳು ರಾಜ್ಯಗಳ 90 ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಿದೆ. ಶೀಘ್ರದಲ್ಲೇ ಹೆಸರುಗಳನ್ನು ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ.

ಸಿಇಸಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಪ್ರಹ್ಲಾದ್ ಜೋಶಿ, ನಿತ್ಯಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲಗಳ ಪ್ರಕಾರ, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಬಿಹಾರ, ಹಿಮಾಚಲ ಪ್ರದೇಶ ಮತ್ತು ತೆಲಂಗಾಣ ಲೋಕಸಭೆ ಸ್ಥಾನಗಳಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದವು. ಬಿಹಾರ, ತಮಿಳುನಾಡು ಮತ್ತು ಒಡಿಶಾದಲ್ಲಿ ಮೈತ್ರಿ ಮಾತುಕತೆಗಳು ಜಾರಿಯಲ್ಲಿರುವ ಕಾರಣ, ಆ ರಾಜ್ಯಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ವಿಳಂಬವಾಗಲಿದೆ ಎಂದು ತಿಳಿಸಿವೆ.

ಮೈತ್ರಿ ಮಾತುಕತೆ: ಗುಜರಾತ್‌ನಲ್ಲಿ ಉಳಿದ 11 ರ ಪೈಕಿ 7 ಸ್ಥಾನಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಮಧ್ಯಪ್ರದೇಶದ ಉಳಿದ 5 ಸ್ಥಾನಗಳಲ್ಲಿ 4 ಸ್ಥಾನಗಳ ಬಗ್ಗೆ ಒಮ್ಮತಕ್ಕೆ ಬರಲಾಗಿದೆ. ಮಹಾರಾಷ್ಟ್ರದ 25 ಸ್ಥಾನಗಳು, ತೆಲಂಗಾಣದ 8 ಸ್ಥಾನಗಳು ಮತ್ತು ಕರ್ನಾಟಕದ 28 ಸ್ಥಾನಗಳಿಗೆ ಅಭ್ಯರ್ಥಿಗಳ ಕುರಿತು ಚರ್ಚೆ ನಡೆದಿದೆ. ಕರ್ನಾಟಕದಲ್ಲಿ ಮೈತ್ರಿ ಪಕ್ಷ ಜೆಡಿಎಸ್ 3 ಸ್ಥಾನಗಳನ್ನು ಪಡೆಯುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶದ ಎಲ್ಲಾ 4 ಸ್ಥಾನಗಳ ಚರ್ಚೆಯೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಿಹಾರದಲ್ಲಿ ಜೆಡಿಯು, ಲೋಕ ಜನಶಕ್ತಿ ಮತ್ತು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಸ್ತಾಪಿಸಲಾಗಿದೆ. ತಮಿಳುನಾಡಿನಲ್ಲಿ ಎಐಎಡಿಎಂಕೆ, ಹರಿಯಾಣದಲ್ಲಿ ಜೆಜೆಪಿ ಮತ್ತು ಒಡಿಶಾದಲ್ಲಿ ಬಿಜೆಡಿ ಇನ್ನೂ ಸೀಟು ಹಂಚಿಕೆ ಅಂತಿಮಗೊಳಿಸಿಲ್ಲ.

ಮೊದಲ ಪಟ್ಟಿ ಬಿಡುಗಡೆ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ತನ್ನ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 2 ರಂದು ಬಿಡುಗಡೆ ಮಾಡಿದೆ. ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಲಿದ್ದಾರೆ. 195 ಅಭ್ಯರ್ಥಿಗಳ ಪೈಕಿ 34 ಮಂದಿ ಕೇಂದ್ರ ಮತ್ತು ರಾಜ್ಯ ಸಚಿವರಾಗಿದ್ದರೆ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿದ್ದಾರೆ. 2019 ರಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಒಟ್ಟು 303 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕಾಂಗ್ರೆಸ್ 52 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಲೋಕಸಭೆ ಚುನಾವಣೆ ದಿನಾಂಕವನ್ನು ಶೀಘ್ರದಲ್ಲೇ ಚುನಾವಣೆ ಆಯೋಗ ಪ್ರಕಟಿಸಲಿದೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ; ವಾರಾಣಸಿಯಲ್ಲೇ ಮೋದಿ ಸ್ಪರ್ಧೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.