ETV Bharat / bharat

ಲೋಕಸಭೆ ಚುನಾವಣೆ 2024: ಬಿಗಿ ಭದ್ರತೆಯ ನಡುವೆ ಮತ ಎಣಿಕೆಗೆ ಕ್ಷಣಗಣನೆ - Counting of votes begins

2 ತಿಂಗಳಿನಿಂದ 7 ಹಂತದಲ್ಲಿ ಲೋಕಸಭಾ ಚುನಾವಣೆಗೆ ಮತದಾನ ನಡೆದು ಇಂದು ಫಲಿತಾಂಶಕ್ಕೆ ತೆರೆ ಬೀಳಲಿದೆ. ದೇಶದಲ್ಲಿರುವ ಎಲ್ಲ ಮತ ಎಣಿಕೆ ಕೇಂದ್ರಗಳಲ್ಲಿ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.

ಬಿಗಿ ಭದ್ರತೆಯ ನಡುವೆ ಮತ ಎಣಿಕೆಗೆ ಕ್ಷಣಗಣನೆ
ಬಿಗಿ ಭದ್ರತೆಯ ನಡುವೆ ಮತ ಎಣಿಕೆಗೆ ಕ್ಷಣಗಣನೆ (ETV Bharat)
author img

By ETV Bharat Karnataka Team

Published : Jun 4, 2024, 7:17 AM IST

ನವದೆಹಲಿ: 2024ರ ಲೋಕಸಭೆ ಚುನಾವಣೆ ಅಂತಿಮ ಘಟ್ಟ ತಲುಪಿದ್ದು, ಎಲ್ಲ ಏಳು ಹಂತಗಳ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಮತ ಎಣಿಕೆ ಪ್ರಾರಂಭವಾಗಲಿದೆ. ಮೊದಲು ಅಂಚೆ ಮತಪತ್ರಗಳ ಎಣಿಕೆಯೊಂದಿಗೆ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ಮಧ್ಯಾಹ್ನದ ವೇಳೆ ಚುನಾವಣಾ ಫಲಿಂತಾಶದ ಚಿತ್ರಣ ದೊರಯಲಿದೆ. ಸಂಜೆ ವೇಳೆ ಸ್ಪಷ್ಟತೆ ಸಿಗಲಿದೆ.

ಮತ ಎಣಿಕೆ ಹಿನ್ನೆಲೆ ಪೊಲೀಸರು ಮತ್ತು ಅರಸೇನಾ ಪಡೆಗಳು ಗಸ್ತು ನಡೆಸಿದ್ದು, ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿಭದ್ರತೆ ಹೆಚ್ಚಿಸಲಾಗಿದೆ. ಭಾರತದ ಚುನಾವಣಾ ಆಯೋಗವು ನಿಯಮ ಹೊರಡಿಸಿದ್ದು, ಮತ ಎಣಿಕೆ ನಡೆಯಲಿರುವ ಕೇಂದ್ರಗಳಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಪಾಸ್ ಇಲ್ಲದೆ, ಮತಗಟ್ಟೆ ಅಥವಾ ಏಜೆಂಟರನ್ನು ಹೊರತುಪಡಿಸಿ ಯಾರಿಗೂ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಮತ ಎಣಿಕೆ ಕೇಂದ್ರದಿಂದ 100 ಮೀಟರ್‌ಗಳವರೆಗೆ ಯಾರೂ ಪಾಸ್ ಇಲ್ಲದೇ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

ಇಂದು ಬೆಳಗ್ಗೆ ಇಂದಲೇ ದೇಶದಾದ್ಯಂತ ಚುನಾವಣಾ ಫಲಿತಾಂಶ ಹಿನ್ನೆಲೆ ಕೆಲ ಅಭ್ಯರ್ಥಿಗಳು ದೇವಾಲಯಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿದರೆ, ಗೆಲುವಿನ ನಿರೀಕ್ಷೆಯಲ್ಲಿರುವವರು ಈಗಾಗಲೇ ಸಹಿ ತಿನಿಸುಗಳನ್ನು ತಯಾರಿಸಿ ಸಂಭ್ರಮಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಚಾಂದಿನಿ ಚೌಕ್‌ನ ಬಿಜೆಪಿ ಅಭ್ಯರ್ಥಿ ಪ್ರವೀಣ್ ಖಂಡೇಲ್ವಾಲ್ ದೆಹಲಿಯ ಗೌರಿ ಶಂಕರ ದೇವಸ್ಥಾನದಲ್ಲಿ ಚುನಾವಣೆ ಫಲಿತಾಂಶ ಹಿನ್ನೆಲೆ ಪ್ರಾರ್ಥನೆ ಸಲ್ಲಿಸಿದರು.

ಲೋಕಸಭೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಪ್ರಧಾನಿ ಮೋದಿ ಮತ್ತು ಬಿಜೆಪಿ ವಿಶ್ವಾಸ ವ್ಯಕ್ತಪಡಿಸಿದೆ. ಇದಕ್ಕೆ ನಾವೇನು ಕಮ್ಮಿ ಇಲ್ಲವೆಂಬಂತೆ ಇಂಡಿಯಾ ಒಕ್ಕೂಟ ಚುನಾವಣೆಯಲ್ಲಿ 295 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಗೆಲುವು ಸಾಧಿಸಲು ಸಜ್ಜಾಗಿದೆ ಎಂದು ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ.

ಈಗಾಗಲೇ ಸಮೀಕ್ಷೆಗಳು ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಆದರೂ ಸಂಜೆವರೆಗೆ ಕಾದು ನೋಡಬೇಕಾಗಿದೆ.

ಇದನ್ನೂ ಓದಿ: ಇಂದು ಲೋಕಸಭಾ ಚುನಾವಣೆಯ 'ಮಹಾ ತೀರ್ಪು': ಇಡೀ ವಿಶ್ವದ ಚಿತ್ತ ಭಾರತದತ್ತ! - Lok Sabha Election Results 2024

ETV Bharat Logo

Copyright © 2024 Ushodaya Enterprises Pvt. Ltd., All Rights Reserved.