ETV Bharat / bharat

ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ ಮುನ್ಸೂಚನೆ : ಕರಾವಳಿ ಪ್ರದೇಶಗಳಿಗೆ ಅಪಾಯದ ಎಚ್ಚರಿಕೆ - IMD WEATHER UPDATE

ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ಮುಂದುವರಿದ ತೀವ್ರ ವಾಯುಭಾರ ಕುಸಿತದಿಂದಾಗಿ ಮುಂದಿನ 48 ಗಂಟೆಗಳಲ್ಲಿ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಸಾಧ್ಯತೆ. ಕರ್ನಾಟಕದಲ್ಲೂ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆಗಳಿವೆ.

LOW PRESSURE IN BAY OF BENGAL
ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ: ಕರಾವಳಿ ಪ್ರದೇಶಗಳಿಗೆ ಅಪಾಯದ ಎಚ್ಚರಿಕೆ (ETV Bharat)
author img

By ETV Bharat Karnataka Team

Published : 6 hours ago

Updated : 5 hours ago

ವಿಜಯವಾಡ,ಆಂಧ್ರಪ್ರದೇಶ​; ಪಶ್ಚಿಮ ಮಧ್ಯ ಬಂಗಾಳಕೊಲ್ಲಿಯಲ್ಲಿ ತೀವ್ರ ಕಡಿಮೆ ಒತ್ತಡ ಮುಂದುವರಿದಿದೆ. ಇದರ ಪರಿಣಾಮ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಆಂಧ್ರದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ವಿಶಾಖ ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದ್ರದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಕರಾವಳಿ ಬಂದರುಗಳಲ್ಲಿ ಅಪಾಯದ ಎಚ್ಚರಿಕೆ ಸಂಖ್ಯೆ 3 ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ವಿಶಾಖ ಹವಾಮಾನ ಕೇಂದ್ರದ ಪ್ರಭಾರಿ ನಿರ್ದೇಶಕ ಕೆವೈಎಸ್ ಶ್ರೀನಿವಾಸ್ ಮಾತನಾಡಿ, ತೀವ್ರ ಕಡಿಮೆ ಒತ್ತಡವು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.

ಈ ಜಿಲ್ಲೆಗಳಲ್ಲಿ ಮಳೆ: ಮುಂದಿನ 12 ಗಂಟೆಗಳಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಕರಾವಳಿಯ ಕಡೆಗೆ ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಇದು ಉತ್ತರಾಭಿಮುಖವಾಗಿ ಆಂಧ್ರಪ್ರದೇಶ ಕರಾವಳಿಯತ್ತ ಚಲಿಸುವ ಸಾಧ್ಯತೆ ಇದೆ. ಶ್ರೀಕಾಕುಳಂ, ವಿಜಯನಗರಂ, ಅಲ್ಲೂರಿ ಮತ್ತು ವಿಶಾಖಪಟ್ಟಣಂ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಗಳಿವೆ. ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಏಲೂರು, ಕೃಷ್ಣಾ, ಎನ್‌ಟಿಆರ್‌, ಗುಂಟೂರು, ಬಾಪಟ್ಲಾ, ಪ್ರಕಾಶಂ, ನೆಲ್ಲೂರು, ಅನ್ನಮಯ್ಯ ಮತ್ತು ಚಿತ್ತೂರು ತಿರುಪತಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಶುಕ್ರವಾರ ಶ್ರೀಕಾಕುಳಂ, ವಿಜಯನಗರಂ, ಅಲ್ಲೂರಿ ಸೀತಾರಾಮರಾಜು, ವಿಶಾಖಪಟ್ಟಣಂ, ಅನಕಪಲ್ಲಿ, ಕಾಕಿನಾಡ, ಕೋನಸೀಮಾ ಮತ್ತು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸೂಚನೆಗಳಿವೆ. ಪಾರ್ವತಿಪುರಂ ಮಾನ್ಯಂ, ಅನಕಾಪಲ್ಲಿ, ಕಾಕಿನಾಡ, ಕೋನಸೀಮಾ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಬಾಪಟ್ಲಾ, ನೆಲ್ಲೂರು, ಅನ್ನಮಯ್ಯ, ಚಿತ್ತೂರು ಮತ್ತು ತಿರುಪತಿ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಕರ್ನಾಟಕದಲ್ಲೂ ಮೂರು ದಿನ ಮಳೆ ಮುನ್ಸೂಚನೆ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮುಂದಿನ ಮೂರು ದಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್‌ 22ರವರೆಗೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಕರ್ನಾಟಕದ ಬೆಂಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಕೋಲಾರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನು ಓದಿ: ರಾಜ್ಯದಲ್ಲಿ ಹೆಚ್ಚಿದ ಚಳಿ ಗಾಳಿ: ಈ ಜಿಲ್ಲೆಗಳಿಗೆ ಕೋಲ್ಡ್ ವೇವ್ ಯೆಲ್ಲೋ ಅಲರ್ಟ್ ಘೋಷಣೆ

Last Updated : 5 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.