ETV Bharat / bharat

ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಕಣಕ್ಕಿಳಿದ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ - K SURENDRAN VS RAHUL GANDHI

ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಕಣಕ್ಕಿಳಿದಿದ್ದಾರೆ.

Etv Bharat
Etv Bharat
author img

By PTI

Published : Mar 25, 2024, 12:48 PM IST

ತಿರುವನಂತಪುರಂ (ಕೇರಳ): ಕೇರಳದ ಉಳಿದ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಫೈನಲ್​ ಮಾಡಿದೆ. ವಯನಾಡ್​ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಕಣಕ್ಕಿಳಿಯಲಿದ್ದಾರೆ. ಶ್ರೀಶಂಕರ ಸಂಸ್ಕೃತ ವಿಶ್ವವಿದ್ಯಾಲಯದ ವಿದ್ವಾಂಸ ಮತ್ತು ಮಾಜಿ ಉಪಕುಲಪತಿ ಕೆ. ಎಸ್. ರಾಧಾಕೃಷ್ಣನ್ ಮತ್ತು ನಟ-ರಾಜಕಾರಣಿ ಜಿ. ಕೃಷ್ಣಕುಮಾರ್ ಕ್ರಮವಾಗಿ ಎರ್ನಾಕುಲಂ ಮತ್ತು ಕೊಲ್ಲಂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಭಾನುವಾರ ಪ್ರಕಟಿಸಿದೆ.

ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಟಿ. ಎನ್. ಸರಸು ಅವರು ಉತ್ತರ ಪಾಲಕ್ಕಾಡ್ ಜಿಲ್ಲೆಯ ಆಲತ್ತೂರಿನಿಂದ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತು ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಪ್ರಾಬಲ್ಯ ಹೊಂದಿರುವ ದಶಕಗಳ ಹಿಂದಿನ ದ್ವಿಧ್ರುವಿ ರಾಜಕಾರಣವನ್ನು ಮುರಿಯಲು ಬಿಜೆಪಿ ತಂತ್ರ ರೂಪಿಸಿದೆ. ಪಕ್ಷವು ಈ ಹಿಂದೆ 12 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿತ್ತು. ಅದರ ಮಿತ್ರ ಪಕ್ಷವಾದ ಬಿಡಿಜೆಎಸ್ ರಾಜ್ಯದ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಸುರೇಂದ್ರನ್ ಸ್ಪರ್ಧೆ: ಸಾಂಪ್ರದಾಯಿಕ ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡಿನಲ್ಲಿ ಸುರೇಂದ್ರನ್ ಅವರಿಗೆ ಅನಿರೀಕ್ಷಿತ ಟಿಕೆಟ್​ ನೀಡುವ ಮೂಲಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬಿಜೆಪಿ ತನ್ನ ಎದುರಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ರಣತಂತ್ರ ರೂಪಿಸಿದೆ. ಸಿಪಿಐ ಅಭ್ಯರ್ಥಿ ಅನ್ನಿ ರಾಜಾ ಕ್ಷೇತ್ರದಲ್ಲಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ವರ್ಷಗಳ ಹಿಂದೆ ಶಬರಿಮಲೆಗೆ ಯುವತಿಯರ ಪ್ರವೇಶದ ವಿರುದ್ಧ ಕೇಸರಿ ಪಕ್ಷದ ತೀವ್ರ ಆಕ್ಷೇಪ ವ್ಯಕ್ತಪಡಿಸಿದವರಲ್ಲಿ ಸುರೇಂದ್ರನ್ ಒಬ್ಬರು. 2020ರಿಂದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಭಾರತೀಯ ಜನತಾ ಯುವ ಮೋರ್ಚಾದ ವಯನಾಡ್ ಜಿಲ್ಲಾಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ ಇವರು, ಕೋಝಿಕೋಡ್ ಜಿಲ್ಲೆಯ ಉಲ್ಲೆಯೇರಿಯಿಂದ ಬಂದ ಕುನ್ನುಮ್ಮೆಲ್ ಸುರೇಂದ್ರನ್ ಅವರು 2019ರ ಲೋಕಸಭೆ ಚುನಾವಣೆಯಲ್ಲಿ ಪತ್ತನಂತಿಟ್ಟದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಅದೇ ವರ್ಷ ನಡೆದ ವಿಧಾನಸಭಾ ಉಪಚುನಾವಣೆಯಲ್ಲಿ ಕೊಣ್ಣಿಯಿಂದ ಕಣಕ್ಕಿಳಿದಿದ್ದದರು. ಆದ್ರೆ ಗೆಲವು ಸಾಧಿಸಲಿಲ್ಲ. ಕೇಂದ್ರ ಸಚಿವ ವಿ. ಮುರಳೀಧರನ್ ಅವರ ನಿಕಟವರ್ತಿ ಎಂದು ಕರೆಯಲ್ಪಡುವ ಸುರೇಂದ್ರನ್ ಅವರು 2016 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರಂ ಕ್ಷೇತ್ರದಲ್ಲಿ ಕೇವಲ 89 ಮತಗಳಿಂದ ಸೋಲು ಕಂಡಿದ್ದರು.

ಅದೃಷ್ಟ ಪರೀಕ್ಷೆಗೆ ಮುಂದಾದ ಕೆ.ಎಸ್. ರಾಧಾಕೃಷ್ಣನ್: ಪ್ರಸಿದ್ಧ ವಿದ್ವಾಂಸ, ಬರಹಗಾರ, ವಾಗ್ಮಿ ಮತ್ತು ಶಿಕ್ಷಣತಜ್ಞ ಕೆ.ಎಸ್. ರಾಧಾಕೃಷ್ಣನ್ 2019 ರಲ್ಲಿ ಬಿಜೆಪಿ ಸೇರಿದ್ದರು. ಅವರು ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸುವ ಮೊದಲು ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರದ ಅವಧಿಯಲ್ಲಿ ಕಾಲಡಿಯ ಶ್ರೀ ಶಂಕರ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಮತ್ತು ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಅಲಪ್ಪುಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

55 ವರ್ಷದ ಜಿ. ಕೃಷ್ಣಕುಮಾರ್ ಅವರು ನಟ-ರಾಜಕಾರಣಿಯಾಗಿದ್ದು, ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಕೌನ್ಸಿಲ್ ಸದಸ್ಯರಾಗಿದ್ದಾರೆ. 2021 ರಲ್ಲಿ, ಕೃಷ್ಣಕುಮಾರ್ ತಿರುವನಂತಪುರದಿಂದ ರಾಜ್ಯ ವಿಧಾನಸಭೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಎಡಪಂಥೀಯ ವಿದ್ಯಾರ್ಥಿ ಸಂಘದ ಜೊತೆಗಿನ ಮುಖಾಮುಖಿಯಲ್ಲಿ ಸುದ್ದಿಯಾಗಿದ್ದ ಸರ್ಕಾರಿ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಟಿ.ಎನ್. ಸರಸು ಅವರು, ಹಾಲಿ ಸಂಸದೆ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಹರಿದಾಸ್ ಮತ್ತು ರಾಜ್ಯ ದೇವಸ್ವಂ ಸಚಿವ ಮತ್ತು ಸಿಪಿಐ(ಎಂ) ಹಿರಿಯ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಎದುರಿಸಲು ಆಲತ್ತೂರಿನಿಂದ ಸ್ಪರ್ಧಿಸಲಿದ್ದಾರೆ. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಸಂದೇಶ್‌ಖಾಲಿ ಹಿಂಸಾಚಾರ ಸಂತ್ರಸ್ತೆಗೆ ಟಿಕೆಟ್ ನೀಡಿದ ಬಿಜೆಪಿ - Basirhat Lok Sabha Constituency

ETV Bharat Logo

Copyright © 2024 Ushodaya Enterprises Pvt. Ltd., All Rights Reserved.