ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್, ಕೇರಳದ ರಾಜ್ಯಪಾಲ ಆರಿಫ್ ಮೊಹಮದ್ ಖಾನ್ ಅವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.
ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹರಿಯಾಣದ ಕೈತಾಲ್‌ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಈಶಾನ್ಯ ದೆಹಲಿಯ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಅವರು ದೆಹಲಿಯ ಮತಗಟ್ಟೆಯಲ್ಲಿ ಮತ ಹಾಕಿದರು.
ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಆರನೇ ಹಂತದ ಲೋಕಸಭೆ ಚುನಾವಣೆ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಮೂರನೇ ಹಂತಕ್ಕೆ ಭುವನೇಶ್ವರ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ದೆಹಲಿಯ ಮತಗಟ್ಟೆಯಲ್ಲಿ ಲೋಕಸಭಾ ಚುನಾವಣೆಯ ಆರನೇ ಹಂತಕ್ಕೆ ಮತ ಚಲಾಯಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ದೆಹಲಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ಇದನ್ನೂ ಓದಿ: ಲೋಕಸಭೆ ಚುನಾವಣೆ: ಬೆಳಗ್ಗೆ 11 ಗಂಟೆವರೆಗೆ ಶೇಕಡಾ 25.76 ರಷ್ಟು ಮತದಾನ - VOTING TURN OUT