ಮಹಾ ಕುಂಭ ನಗರ(ಪ್ರಯಾಗ್‌ರಾಜ್, ಯುಪಿ): ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭಮೇಳದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಯುಮುನಾ ನದಿಯಲ್ಲಿ ಬೋಟ್ ಮೂಲಕ ತೆರಳಿದ ಅವರು, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ, ಗಂಗಾಮಾತೆಗೆ ನಮಿಸಿದರು.
ಜನವರಿ 13ರ ಪುಷ್ಯ ಪೂರ್ಣಿಮೆಯಿಂದ ಮಹಾ ಕುಂಭಮೇಳ ಆರಂಭವಾಗಿದೆ. ದೇಶ-ವಿದೇಶಗಳ ಕೋಟ್ಯಂತರ ಭಕ್ತರು ಪವಿತ್ರ ಸ್ನಾನಕ್ಕೆ ಆಗಮಿಸುತ್ತಿದ್ದಾರೆ. ಫೆ.26ರ ಮಹಾಶಿವರಾತ್ರಿಯವರೆಗೆ ಮಹಾ ಕುಂಭಮೇಳ ನಡೆಯಲಿದೆ.
2024ರ ಡಿಸೆಂಬರ್ 13ರಂದು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, 5,500 ಕೋಟಿ ರೂ ವೆಚ್ಚದ 167 ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದರು.
#WATCH | Prime Minister Narendra Modi takes a holy dip at Triveni Sangam in Prayagraj, Uttar Pradesh
— ANI (@ANI) February 5, 2025
(Source: ANI/DD)
#KumbhOfTogetherness #MahaKumbh2025 pic.twitter.com/kALv40XiAH
ಉತ್ತರ ಪ್ರದೇಶ ಸರ್ಕಾರದ ದತ್ತಾಂಶದ ಪ್ರಕಾರ, ಜನವರಿ 14ರಿಂದ ಫೆ.4ರವರೆಗೆ 382 ಮಿಲಿಯನ್ ಜನರು ಪವಿತ್ರ ಸ್ನಾನ ಮಾಡಿದ್ದಾರೆ. ಮಂಗಳವಾರ ಭೂತಾನ್ ದೊರೆ ಜಿಗ್ಮೆ ಖೇಸರ್ ನಮ್ಗ್ಯಾಲ್ ವಾಂಗ್‌ಚುಕ್ ಅವರು ಪ್ರಯಾಗ್‌ರಾಜ್‌ಗೆ ಭೇಟಿ ನೀಡಿ ಪವಿತ್ರ ಸ್ನಾನ ಮಾಡಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಜೊತೆಗಿದ್ದರು. ಇದಾದ ಬಳಿಕ ಅವರು ಲೆತೆ ಹನುಮಾನ್ ಮಂದಿರಕ್ಕೆ ಭೇಟಿಯಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಡಿಜಿಟಲ್ ಮಹಾಕುಂಭ ಎಕ್ಸಪೀರಿಯನ್ಸ್ ಕೇಂದ್ರಕ್ಕೂ ಭೇಟಿ ನೀಡಿದ್ದರು.
ಇದನ್ನೂ ಓದಿ: ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಭೂತಾನ್ ದೊರೆ