ETV Bharat / bharat

ಮಹಾರಾಷ್ಟ್ರದಲ್ಲಿ ಅಲ್ಪಸಂಖ್ಯಾತರಿಗೆ ಸಿಗದ ಟಿಕೆಟ್; ಕಾಂಗ್ರೆಸ್ ಪ್ರಚಾರ ಸಮಿತಿಗೆ ನಸೀಮ್ ಖಾನ್ ರಾಜೀನಾಮೆ - Naseem Khan - NASEEM KHAN

ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಒಬ್ಬರಿಗೂ ಟಿಕೆಟ್​ ನೀಡದ ಕಾರಣ ಕಾಂಗ್ರೆಸ್​ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

maharashtra-arif-naseem-khan-resigns-from-congress-campaign-panel
ಕಾಂಗ್ರೆಸ್ ಪ್ರಚಾರ ಸಮಿತಿಗೆ ನಸೀಮ್ ಖಾನ್ ರಾಜೀನಾಮೆ
author img

By ETV Bharat Karnataka Team

Published : Apr 27, 2024, 8:50 PM IST

ಮುಂಬೈ (ಮಹಾರಾಷ್ಟ್ರ): ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಮುಸ್ಲಿಂ ಸಮುದಾಯದ ಒಬ್ಬರಿಗೂ ಟಿಕೆಟ್​ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಗೆ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾನ್ ರಾಜೀನಾಮೆ ನೀಡಿದ್ದಾರೆ. ಪಕ್ಷದ ಈ ನಿರ್ಧಾರದಿಂದ ಅಲ್ಪಸಂಖ್ಯಾತ ಸಮುದಾಯಗಳ ಜನರು ಮತ್ತು ಸಂಘಟನೆಯವರು ಅಸಮಾಧಾನ ಮತ್ತು ಕೋಪಗೊಂಡಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ 48 ಲೋಕಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಯಾವೊಬ್ಬ ಅಭ್ಯರ್ಥಿಯನ್ನೂ ಕಣಕ್ಕಿಳಿಸಿಲ್ಲ. ಇದರಿಂದ ಅಲ್ಪಸಂಖ್ಯಾತ ಸಮುದಾಯಗಳ ಜನರು ಮತ್ತು ಸಂಘಟನೆಗಳಲ್ಲಿ ಸಾಕಷ್ಟು ಕೋಪ ವ್ಯಕ್ತವಾಗಿದೆ. ನನಗೂ ಸಹ ಬೇಸರವಾಗಿದೆ. ಏಕೆಂದರೆ, ಅಲ್ಪಸಂಖ್ಯಾತ ಸಮುದಾಯ, ಒಬಿಸಿ, ಮರಾಠಾ ಸಮುದಾಯ, ಎಸ್‌ಸಿ ಅಥವಾ ಎಸ್‌ಟಿ ಎಂದು ಲೆಕ್ಕಿಸದೆ ಎಲ್ಲರೂ ಜೊತೆಗೆ ಹೋಗುವುದು ಕಾಂಗ್ರೆಸ್ ಸಿದ್ಧಾಂತವಾಗಿದೆ ಎಂದು ನಸೀಮ್ ಖಾನ್ ತಿಳಿಸಿದರು.

ಅಲ್ಪಸಂಖ್ಯಾತ ಸಮುದಾಯಗಳ ಜನರು ಲೋಕಸಭೆಯಲ್ಲಿ ತಮ್ಮ ಪರವಾದ ಧ್ವನಿಯನ್ನು ನಿರೀಕ್ಷಿಸುತ್ತಾರೆ. ಆದರೆ, ಈ ಬಾರಿ ಅದು ಆಗುತ್ತಿಲ್ಲ. ಪ್ರತಿ ಸಮುದಾಯಕ್ಕೂ ಪ್ರತಿನಿಧಿಗಳನ್ನು ನೀಡುವ ಸಂಪ್ರದಾಯವಿದೆ. ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳು ಇಲ್ಲದಿರುವುದಕ್ಕೆ ಕಾರಣವೇನು?. ನಾನು ಪ್ರಚಾರಕ್ಕಾಗಿ ಜನರ ಬಳಿಗೆ ಹೋದರೆ, ಅವರು ಪ್ರಶ್ನೆಗಳನ್ನು ಕೇಳುತ್ತಾರೆ. ಇದಕ್ಕೆ ನನ್ನ ಬಳಿ ಉತ್ತರವಿಲ್ಲ. ಆದ್ದರಿಂದ ನಾನು ಮೂರನೇ, ನಾಲ್ಕು ಮತ್ತು ಐದನೇ ಹಂತದ ಚುನಾವಣೆಗೆ ಪ್ರಚಾರ ಮಾಡುವುದಿಲ್ಲ ಎಂದು ನಿರ್ಧರಿಸಿದ್ದೇನೆ ಎಂದು ಘೋಷಿಸಿದ್ದಾರೆ.

ರಾಜ್ಯದ ಹಲವು ಮುಸ್ಲಿಂ ಸಂಘಟನೆಗಳು, ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕನಿಷ್ಠ ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತದೆ ಎಂದು ನಿರೀಕ್ಷಿಸುತ್ತಿದ್ದಾರೆ. ಆದರೆ, ದುರದೃಷ್ಟವಶಾತ್ ಪಕ್ಷವು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ. ಆದ್ದರಿಂದ ಈಗ ಜನರು, ಕಾಂಗ್ರೆಸ್‌ಗೆ ಮುಸ್ಲಿಂ ಮತಗಳು ಬೇಕು, ಆದರೆ, ಅಭ್ಯರ್ಥಿಗಳು ಏಕೆ ಬೇಡ ಎಂಬುವುದಾಗಿ ಕೇಳುತ್ತಿದ್ದಾರೆ ಎಂದು ನಸೀಮ್ ಖಾನ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್​ ಚಂದ್ರ ಪವಾರ್) ಪಕ್ಷಗಳು ಸೇರಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ರಚಿಸಿಕೊಂಡಿವೆ. ಒಟ್ಟಾಗಿ ರಾಜ್ಯದ ಎಲ್ಲ 48 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದ್ದೇವೆ.

ಇದನ್ನೂ ಓದಿ: 2ನೇ ಹಂತದ ಲೋಕಸಭೆ ಚುನಾವಣೆ: 13 ರಾಜ್ಯಗಳ 88 ಕ್ಷೇತ್ರಗಳಲ್ಲಿ ಶೇ.63ರಷ್ಟು ವೋಟಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.