ಮುಂಬೈ: ಸರ್ಕಾರಿ ಗೌರವಗಳೊಂದಿಗೆ ಉದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬುಧವಾರ ಹೇಳಿದ್ದಾರೆ. ಅನಾರೋಗ್ಯದ ಹಿನ್ನೆಲೆ 86 ವರ್ಷದ ರತನ್ ಟಾಟಾ ಅವರು ಮುಂಬೈ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ರಾತ್ರಿ ನಿಧನರಾಗಿದ್ದಾರೆ.
"ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ ರತನ್ ಟಾಟಾ. 150 ವರ್ಷಗಳಷ್ಟು ಹಳೆಯ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡಿಸಿದ ಜೀವಂತ ದಂತಕಥೆಯಾಗಿದ್ದರು. ರತನ್ ಟಾಟಾ ಜಿ ಅವರ ಪಾರ್ಥಿವ ಶರೀರಕ್ಕೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆಯನ್ನು ನೀಡಲಾಗುವುದು" ಎಂದು ಎಕ್ಸ್ ಪೋಸ್ಟ್‌ನಲ್ಲಿ, ಸಿಎಂ ಶಿಂಧೆ ತಿಳಿಸಿದ್ದಾರೆ.
खो गया देश का अनमोल रत्न
— Eknath Shinde - एकनाथ शिंदे (@mieknathshinde) October 9, 2024
रतनजी टाटा नैतिकता और उद्यमशीलता के अपूर्व और आदर्श संगम थे.लगभग 150 वर्षों की उत्कृष्टता और अखंडता की परंपरा वाले टाटा ग्रुप की कमान सफलतापूर्वक संभालने वाले रतनजी टाटा एक जीवित किवदंती थे.उन्होंने समय-समय पर जिस निर्णय क्षमता और मानसिक दृढ़ता का परिचय… https://t.co/u6MdkdheCC
ರತನ್ ಟಾಟಾ ಅವರ ಪಾರ್ಥೀವ ಶರೀರವನ್ನು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4ಯ ವರೆಗೆ ದಕ್ಷಿಣ ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಅವರ ಸಂಬಂಧಿಕರು ತಿಳಿಸಿದ್ದಾರೆ. ರತನ್ ಅವರು ದೇಶದ ಹೆಮ್ಮೆ. ಮುಂದಿನ ಪೀಳಿಗೆಯ ಉದ್ಯಮಿಗಳಿಗೆ ಸದಾ ಸ್ಪೂರ್ತಿಯಾಗಿದ್ದಾರೆ. 26/11(ಮುಂಬೈ ತಾಜ್ ಹೋಟೆಲ್ ದಾಳಿ) ಭಯೋತ್ಪಾದನಾ ದಾಳಿಯ ಸಂದರ್ಭದಲ್ಲಿ ಅವರು ಪ್ರದರ್ಶಿಸಿದ ದೃಢತೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ" ಎಂದು ಮುಖ್ಯಮಂತ್ರಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ರತನ್ ಟಾಟಾರ ಪರಂಪರೆ ಉಳಿಸಲು ಸಮರ್ಪಣೆ: ಮುಂಬೈ ಟಾಟಾ ಟ್ರಸ್ಟ್‌ನ ಮುಖ್ಯ ಕಾರ್ಯನಿರ್ವಾಹಕ ಸಿದ್ಧಾರ್ಥ್ ಶರ್ಮಾ ಅವರು, "ಭಾರತದ ನಾಗರಿಕತೆಯ ಮೌಲ್ಯಗಳಲ್ಲಿ ಬೇರೂರಿರುವ ಮತ್ತು ಎಲ್ಲರ ಕಲ್ಯಾಣಕ್ಕಾಗಿ ಶ್ರಮಿಸಿರುವ ಅವರ ಪರಂಪರೆಯನ್ನು ಮುಂದಕ್ಕೆ ಸಾಗಿಸಲು ನಾವು ನಮ್ಮನ್ನು ಪುನರ್ ಸಮರ್ಪಿಸಿಕೊಳ್ಳುತ್ತೇವೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
"ಟಾಟಾ ಟ್ರಸ್ಟ್‌ಗಳು ಲಾಭೋದ್ದೇಶವಿಲ್ಲದ ಸಮೂಹವಾಗಿದೆ. ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವ ಪದ್ಮವಿಭೂಷಣವನ್ನು ಪಡೆದ ರತನ್ ಟಾಟಾ ಅವರು ಟಾಟಾ ಟ್ರಸ್ಟ್‌ನ ಅಧ್ಯಕ್ಷರಾಗಿದ್ದರು. ರತನ್ ಟಾಟಾ ಅವರ ಭೌತಿಕ ಉಪಸ್ಥಿತಿಯನ್ನು ನಾವು ಕಳೆದುಕೊಂಡಿದ್ದೇವೆ. ಆದರೆ, ಅವರು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿಎಂದಿಗೂ ಶಾಶ್ವತ" ಎಂದು ಭಾವನಾತ್ಮಕವಾಗಿ ಶರ್ಮಾ ಅವರು ಹೇಳಿದ್ದಾರೆ.
ಇದನ್ನೂ ಓದಿ: ಹಿರಿಯ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆ