ETV Bharat / bharat

ಬ್ಯಾಲೆಟ್ ಪೇಪರ್ ಮತದಾನಕ್ಕೆ ಆಗ್ರಹಿಸಿ ಸಹಿ ಆಂದೋಲನ: ಮಹಾರಾಷ್ಟ್ರ ಕಾಂಗ್ರೆಸ್ ಘೋಷಣೆ - BALLOT PAPER VOTING

ಬ್ಯಾಲೆಟ್ ಪೇಪರ್ ಮತದಾನಕ್ಕೆ ಆಗ್ರಹಿಸಿ ಸಹಿ ಅಭಿಯಾನ ಆರಂಭಿಸುವುದಾಗಿ ಮಹಾರಾಷ್ಟ್ರ ಕಾಂಗ್ರೆಸ್ ಹೇಳಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್ ಪಟೋಲೆ
ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್ ಪಟೋಲೆ (IANS)
author img

By ETV Bharat Karnataka Team

Published : Nov 27, 2024, 7:46 PM IST

ಮುಂಬೈ: ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಭವಿಷ್ಯದ ಚುನಾವಣೆಗಳನ್ನು ವಿದ್ಯುನ್ಮಾನ ಮತದಾನ ಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಬೇಕೆಂದು ಒತ್ತಾಯಿಸಿ ಶೀಘ್ರದಲ್ಲೇ ಬೃಹತ್ ಸಹಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ಕಾಂಗ್ರೆಸ್ ಬುಧವಾರ ಪ್ರಕಟಿಸಿದೆ.

ಈ ಬಗ್ಗೆ ಮಾತನಾಡಿದ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಎಫ್ ಪಟೋಲೆ, ಇತ್ತೀಚೆಗೆ ಬಂದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ನಂಬುವ ಹಾಗಿಲ್ಲ ಮತ್ತು ಇದರಲ್ಲಿ ಏನೋ ಗಂಭೀರ ತಪ್ಪಾಗಿದೆ ಎಂಬ ಭಾವನೆ ಎಲ್ಲರಲ್ಲೂ ಮೂಡಿದೆ ಎಂದು ಹೇಳಿದರು.

"ಸಂವಿಧಾನವು ಎಲ್ಲ ನಾಗರಿಕರಿಗೆ ಮತದಾನದ ಹಕ್ಕನ್ನು ನೀಡಿದೆ. ಆದರೆ ಈಗ ಜನರು ತಾವು ಹಾಕಿದ ಮತಗಳು ಉದ್ದೇಶಿತ ಅಭ್ಯರ್ಥಿಗೆ ಹೋಗದೇ ಬೇರೆಯವರ ಪಾಲಾಗುತ್ತಿವೆ ಎಂದು ಅನುಮಾನ ಪಡುವಂತಾಗಿದೆ. ಜನಸಾಮಾನ್ಯರ ಭಾವನೆಗಳನ್ನು ಗೌರವಿಸಿ ನಾವು ಸಹಿ ಅಭಿಯಾನವನ್ನು ಪ್ರಾರಂಭಿಸಲಿದ್ದೇವೆ" ಎಂದು ಪಟೋಲೆ ಮಾಧ್ಯಮಗಳಿಗೆ ತಿಳಿಸಿದರು.

"ಎಲ್ಲ ಜಿಲ್ಲೆಗಳು, ನಗರಗಳು, ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಅಭಿಯಾನದ ಮೂಲಕ ಕೋಟ್ಯಂತರ ಜನರಿಂದ ಸಂಗ್ರಹಿಸಿದ ಸಹಿಗಳನ್ನು ಅಗತ್ಯ ಕ್ರಮಕ್ಕಾಗಿ ರಾಷ್ಟ್ರಪತಿ, ಭಾರತದ ಮುಖ್ಯ ನ್ಯಾಯಮೂರ್ತಿ, ಪ್ರಧಾನಿ ಮತ್ತು ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು." ಎಂದು ಅವರು ಮಾಹಿತಿ ನೀಡಿದರು.

ಮಂಗಳವಾರ, ಸಂವಿಧಾನ ದಿನಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರ ಎರಡು ಭಾರತ್ ಜೋಡೋ ಯಾತ್ರೆಗಳ ಮಾದರಿಯಲ್ಲಿ ಬ್ಯಾಲೆಟ್ ಪೇಪರ್ ಮತದಾನ ಮತ್ತು ಇವಿಎಂಗಳನ್ನು ತೆಗೆದು ಹಾಕುವಂತೆ ಒತ್ತಾಯಿಸಿ ಸಾಮೂಹಿಕ ಆಂದೋಲನ ಪ್ರಾರಂಭಿಸುವುದಾಗಿ ಘೋಷಿಸಿದ್ದನ್ನು ಪಟೋಲೆ ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

"ಎರಡೂ ಭಾರತ್ ಜೋಡೋ ಯಾತ್ರೆಗಳಿಗೆ ಮಹಾರಾಷ್ಟ್ರದಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಜಾಪ್ರಭುತ್ವವನ್ನು ಉಳಿಸುವುದು ಎಲ್ಲ ಜನರ ಜವಾಬ್ದಾರಿಯಾಗಿದೆ. ಕಾಂಗ್ರೆಸ್ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಮತ್ತು ಅಂತಹ ಸಾರ್ವಜನಿಕ ಚಳುವಳಿಗಳ ಕಾರಣದಿಂದಲೇ 150 ವರ್ಷಗಳ ಬ್ರಿಟಿಷ್ ಆಳ್ವಿಕೆ ಕೊನೆಗೊಂಡಿತು" ಎಂದು ಪಟೋಲೆ ಹೇಳಿದರು.

ಇವಿಎಂಗಳ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪಟೋಲೆ, ತೀರ್ಪು ನೀಡಿದಾಗ ಕಾನೂನು ನಿಬಂಧನೆಗಳ ಬಗ್ಗೆ ಸ್ಪಷ್ಟತೆ ಇರಬೇಕಿತ್ತು ಎಂದು ಹೇಳಿದರು. ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದ ಅವರು, ಪ್ರಜಾಪ್ರಭುತ್ವದಲ್ಲಿ ಜನರು ಸರ್ವೋಚ್ಚರು ಮತ್ತು ಕಾಂಗ್ರೆಸ್ ಇವಿಎಂಗಳ ವಿರುದ್ಧ ಸಾರ್ವಜನಿಕ ಭಾವನೆಗಳನ್ನು ಪ್ರತಿಧ್ವನಿಸುತ್ತಿದೆ ಎಂದು ಗಮನ ಸೆಳೆದರು.

ಇದನ್ನೂ ಓದಿ : ಸೌರಶಕ್ತಿ ಕೇಸಲ್ಲಿ ಲಂಚ ಯಾರಿಗೆ, ಯಾರು ನೀಡಿದ್ರು ಎಂಬುದೇ ಅಮೆರಿಕ ಹೇಳಿಲ್ಲ: ಮುಕುಲ್​ ರೋಹಟಗಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.