ETV Bharat / bharat

ಮುಂಬೈನಲ್ಲಿ ನಡೆದ ಕಲ್ಲು ತೂರಾಟ: ಮಹಾರಾಷ್ಟ್ರ ಸರ್ಕಾರದಿಂದ ಬುಲ್ಡೋಜರ್ ಕ್ರಮ

ಮುಂಬೈನಲ್ಲಿ ರಾಮಮಂದಿರದ ರ‍್ಯಾಲಿ ವೇಳೆ ಕಲ್ಲು ತೂರಾಟ ನಡೆದ ನಂತರ ಮಹಾರಾಷ್ಟ್ರ ಸರ್ಕಾರ ಬುಲ್ಡೋಜರ್ ಕ್ರಮಕ್ಕೆ ಮುಂದಾಗಿದೆ.

Maharashtra govt  bulldozer action  Ram Temple rally in Mumbai  Ram Temple  stone pelting  ಅಯೋಧ್ಯೆ ರಾಮಮಂದಿರ  ಮಹಾರಾಷ್ಟ್ರ ಸರ್ಕಾರ  ಬುಲ್ಡೋಜರ್ ಕ್ರಮ
ಮುಂಬೈ: ರಾಮಮಂದಿರದ ರ‍್ಯಾಲಿ ವೇಳೆ ಕಲ್ಲು ತೂರಾಟದ ಬಳಿಕ ಮಹಾರಾಷ್ಟ್ರ ಸರ್ಕಾರದಿಂದ ಬುಲ್ಡೋಜರ್ ಕ್ರಮ
author img

By ANI

Published : Jan 24, 2024, 11:04 AM IST

ಮುಂಬೈ(ಮಹಾರಾಷ್ಟ್ರ): ಮುಂಬೈನ ಮೀರಾ ರಸ್ತೆಯಲ್ಲಿ ನಡೆದ ಘರ್ಷಣೆ ವರದಿಯಾದ ಒಂದು ದಿನದ ನಂತರ ಬುಲ್ಡೋಜರ್‌ಗಳು ಅಲ್ಲಿದ್ದ ಅಕ್ರಮ ಕಟ್ಟಡಗಳು ಮತ್ತು ಅತಿಕ್ರಮಣಗಳನ್ನು ಮಂಗಳವಾರ ನೆಲಸಮಗೊಳಿಸಿವೆ. ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ರ‍್ಯಾಲಿ ನಡೆಯುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮಹಾರಾಷ್ಟ್ರ ಸರ್ಕಾರದ ಸೂಚನೆಯ ನಂತರ ಮುನ್ಸಿಪಲ್ ಕಾರ್ಪೊರೇಷನ್ ಪೊಲೀಸರ ಸಹಾಯದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ.

ರ‍್ಯಾಲಿ ವೇಳೆ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಹಾನಿ ಉಂಟುಮಾಡಿದ ಘಟನಾವಳಿಗಳಿಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಕೋಲಾ ಪ್ರದೇಶದ ಪಿಂಪಲೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆಯ ಸಮಯದಲ್ಲಿ ಭಗವಾನ್ ರಾಮನ ಧ್ವಜವನ್ನು ಅವಮಾನಿಸಿದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಪೊಲೀಸರು IPC ಸೆಕ್ಷನ್ 295, 504 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ಗೋವಂಡಿ ಪೊಲೀಸರು ಲಾತೂರ್ ನಿವಾಸಿ 23 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈತ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದಾನೆ. ಐಪಿಸಿ ಸೆಕ್ಷನ್ 153(ಎ) ಮತ್ತು 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಭೋಯಿವಾಡ ಪೊಲೀಸ್ ಠಾಣೆಯಲ್ಲಿ, 55 ವರ್ಷದ ವ್ಯಕ್ತಿಯನ್ನು ಸೊಸೈಟಿಯ ಗೇಟ್‌ನಿಂದ ಭಗವಾನ್ ರಾಮನ ಫೋಟೋ ಇರುವ ಧ್ವಜ ತೆಗೆದು ಹಾಕಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ ವಿರುದ್ಧ IPCಯ 153(A), 295(A), 505(2), ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿ.ಪಿ.ರಸ್ತೆ ಪ್ರದೇಶದಲ್ಲಿ ದಾಖಲಾದ ಪ್ರತ್ಯೇಕ ಘಟನೆಯಲ್ಲಿ, ಅಪರಿಚಿತ ವ್ಯಕ್ತಿಗಳು ಇಸ್ಲಾಂಪುರದಲ್ಲಿ ಬೈಕ್ ರ‍್ಯಾಲಿಯಲ್ಲಿ ಭಾಗವಹಿಸಿದವರಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಹಿಂಸಾಚಾರದ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಐಪಿಸಿಯ 506(2), 341, 298, 504, ಮತ್ತು 34ರ ಅಡಿಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ಪತ್ರ ನನಗೆ ಅಪಾರ ಬೆಂಬಲ, ಶಕ್ತಿ ನೀಡಿದೆ: ರಾಷ್ಟ್ರಪತಿ ಪತ್ರಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.