ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮತ ಸೆಳೆಯಲು ಮುಂದಾಗಿರುವ 'ಮಹಾಯುತಿ' ಮೈತ್ರಿ ಪಕ್ಷಗಳಾದ ಬಿಜೆಪಿ, ಶಿವಸೇನಾ ಮತ್ತು ಎನ್ಸಿಪಿ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಲಾಭ ಪಡೆಯಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮೋದಿ ಅವರ 10 ಚುನಾವಣಾ ರ್ಯಾಲಿಗಳನ್ನು ಆಯೋಜಿಸಲಾಗಿದೆ.
ರಾಜ್ಯದಲ್ಲಿ ನವೆಂಬರ್ 7ರಿಂದ 14ರವರೆಗೆ ಒಟ್ಟು 10 ರ್ಯಾಲಿಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಕೊಂಕಣ್, ಪುಣೆ ವಿಭಾಗ, ಖಂದೇಶ್ (ಮಹಾರಾಷ್ಟ್ರ ಉತ್ತರ), ಮರಾಠವಾಡ ಮತ್ತು ವಿದರ್ಭದಲ್ಲಿ ತಲಾ ಎರಡು ಬೃಹತ್ ಚುನಾವಣಾ ಸಮಾವೇಶ ಆಯೋಜಿಸಲಾಗಿದೆ.
ಪ್ರಧಾನಿ ಮೋದಿ ಅವರ ಸಮಾವೇಶಗಳನ್ನು ಯಶಸ್ವಿಗೊಳಿಸಲು ಆರ್ಎಸ್ಎಸ್ ಸೇರಿದಂತೆ ಮಹಾಯುತಿ ಪಕ್ಷಗಳು ಈಗಾಗಲೇ ಸಿದ್ಧತೆಗಳನ್ನು ನಡೆಸುತ್ತಿವೆ.
ಈ ಹಿಂದೆ ಲೋಕಸಭಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಮೋದಿ 19 ಚುನಾವಣಾ ಸಮಾವೇಶದಲ್ಲಿ ಭಾಗಿಯಾಗಿದ್ದರು. ಬಿರು ಬೇಸಿಗೆಯ ಬಿಸಿಲನ್ನೂ ಲೆಕ್ಕಿಸದೆ ಮುಂಬೈನಲ್ಲಿ ಮೆಗಾ ರೋಡ್ಶೋದಲ್ಲಿ ನಡೆಸಿದ್ದರು. (ಐಎಎನ್ಎಸ್)
ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆ: ಎನ್ಸಿಪಿ ಎರಡನೇ ಪಟ್ಟಿಯಲ್ಲಿ ಸಿದ್ದಿಕಿ ಪುತ್ರ, ನವಾಬ್ ಮಲಿಕ್ ಪುತ್ರಿಗೆ ಟಿಕೆಟ್