ETV Bharat / bharat

ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವು - ರಾಜಸ್ಥಾನ

Road Accident In Bikaner: ರಾಜಸ್ಥಾನದ ಬಿಕಾನೇರ್‌ನಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ. ಅಪಘಾತದಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಉಂಟಾಗಿತ್ತು.

ಭೀಕರ ರಸ್ತೆ ಅಪಘಾತ
ಭೀಕರ ರಸ್ತೆ ಅಪಘಾತ
author img

By ETV Bharat Karnataka Team

Published : Feb 16, 2024, 10:26 AM IST

ಬಿಕಾನೇರ್‌(ರಾಜಸ್ಥಾನ): ಬಿಕಾನೇರ್‌ ಜಿಲ್ಲೆಯ ನೋಖಾ ಪೊಲೀಸ್ ಠಾಣೆ ವ್ಯಾಪ್ತಿಯ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಮತ್ತು ಟವೇರಾ ಕಾರು ನಡುವೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟವೇರಾದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎಂದು ಪೊಲೀಸ್​ ಮೂಲಗಳು ಖಚಿತಪಡಿಸಿವೆ. ಘಟನೆ ಕುರಿತು ಮಾಹಿತಿ ಪಡೆದ ನೋಖಾ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದ ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಉಂಟಾಗಿತ್ತು.

ಲಾರಿ ಅಡಿಯಲ್ಲಿ ತೂರಿದ ಕಾರು: ವೇಗದಲ್ಲಿ ಚಲಿಸುತ್ತಿದ್ದ ಕಾರು ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿರುವ ಮಾಹಿತಿ ಇದೆ. ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರು ಎಂಬ ಮಾಹಿತಿ ಇದೆ. ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಂದು ಮಗು ಸೇರಿದೆ. ಅಪಘಾತವು ಎಷ್ಟು ಭೀಕರವಾಗಿತ್ತು ಎಂದರೆ ಟವೇರಾ ಸಂಪೂರ್ಣವಾಗಿ ಟ್ರಕ್ ಅಡಿಯಲ್ಲಿ ತೂರಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವಿನಿ ಗೌತಮ್ ತಿಳಿಸಿದ್ದಾರೆ.

ಮೃತರು ಗುಜರಾತ್‌ಗೆ ಸೇರಿದವರು: ಟವೇರಾ ಕಾರು ಗುಜರಾತ್ ರಾಜ್ಯಕ್ಕೆ ಸೇರಿದ್ದಾಗಿದ್ದು ಇಡೀ ಕುಟುಂಬ ರಾಜಸ್ಥಾನದತ್ತ ಬರುತ್ತಿತ್ತು. ಆದರೆ, ಶುಕ್ರವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು, ಕ್ರೇನ್ ಸಹಾಯದಿಂದ ಟ್ರಕ್ ಮತ್ತು ಟವೇರಾವನ್ನು ಬೇರ್ಪಡಿಸಿ ಮೃತದೇಹಗಳನ್ನು ಹೊರತೆಗೆದರು. ಅಪಘಾತದ ಸಂಭವಿಸಿದ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು. ಅಪಘಾತ ಎಷ್ಟು ತೀವ್ರವಾಗಿತ್ತು ಎಂದರೆ ಟವೇರಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಇದನ್ನೂ ಓದಿ: ಯಮುನಾ ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: ಐವರು ಸಜೀವ ದಹನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.