ನವದೆಹಲಿ: ಮಣಿಪುರದಲ್ಲಿ ಇತ್ತೀಚಿನ ಹಿಂಸಾತ್ಮಕ ಸಂಘರ್ಷಗಳು ಮತ್ತು ಮುಂದುವರಿದ ರಕ್ತಪಾತಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಮಣಿಪುರಕ್ಕೆ ಭೇಟಿ ನೀಡಿ ಆ ಪ್ರದೇಶದಲ್ಲಿ ಶಾಂತಿ ಮರುಸ್ಥಾಪಿಸಲು ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಇಲ್ಲಿನ ನದಿಯೊಂದರಲ್ಲಿ ಆರು ಜನರ ಮೃತದೇಹವನ್ನು ಹೊರತೆಗೆದ ಒಂದು ದಿನದ ಬಳಿಕ ಶನಿವಾರ, ಪ್ರತಿಭಟನಾಕಾರರು ಮೂವರು ಸಚಿವರು ಹಾಗೂ 6 ಶಾಸಕರ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಇದಾದ ಬಳಿಕ ಸರ್ಕಾರ, ರಾಜ್ಯದ 5 ಜಿಲ್ಲೆಗಳಲ್ಲಿ ಅನಿರ್ಧಿಷ್ಟಾವಧಿಗೆ ಕರ್ಫ್ಯೂ ಹೇರಿದೆ. ಕೆಲವು ಭಾಗಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಇಂಫಾಲದಲ್ಲಿ ಕೋಪೋದ್ರಿಕ್ತ ಪ್ರತಿಭಟನಾಕಾರರು, ಮೂವರು ಶಾಸಕರ ಮನೆಗಳನ್ನು ಲೂಟಿ ಮಾಡಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರ ಅಳಿಯನ ಮನೆಯೂ ಸೇರಿದೆ. ಮನೆಗಳಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಉದ್ರಿಕ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು.
The recent string of violent clashes and continuing bloodshed in Manipur is deeply disturbing.
— Rahul Gandhi (@RahulGandhi) November 16, 2024
After more than a year of division and suffering, it was the hope of every Indian that the Central and State governments would have made every effort at reconciliation and found a…
ಈ ಕುರಿತು 'ಎಕ್ಸ್' ಖಾತೆಯಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಇತ್ತೀಚಿಗೆ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳು ಮತ್ತು ಮುಂದುವರೆದ ರಕ್ತಪಾತ ಅತ್ಯಂತ ಕಳವಳಕಾರಿ" ಎಂದು ತಿಳಿಸಿದ್ದಾರೆ. "ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಸಂಕಷ್ಟದ ನಂತರ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಮತ್ತು ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂಬುದು ಪ್ರತಿಯೊಬ್ಬ ಭಾರತೀಯನ ಆಶಯ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಬೇಕು ಮತ್ತು ಶಾಂತಿ ಮರುಸ್ಥಾಪಿಸುವತ್ತ ಕೆಲಸ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.
200ಕ್ಕೂ ಹೆಚ್ಚು ಮಂದಿ ಸಾವು: ಮಣಿಪುರದಲ್ಲಿ ಮೇಥಿ ಮತ್ತು ಕುಕಿ ಸಮುದಾಯದ ಜನರ ನಡುವಿನ ಭೀಕರ ಜನಾಂಗೀಯ ಸಂಘರ್ಷ ಇಲ್ಲಿಯವರೆಗೆ 200ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದಿದೆ.
ಇದನ್ನೂ ಓದಿ: ರಾಹುಲ್ ಗಾಂಧಿ ಬಗ್ಗೆ ಪ್ರಧಾನಿ ಮೋದಿ, ಅಮಿತ್ ಶಾ ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ