ಮುಂಬೈ (ಮಹಾರಾಷ್ಟ್ರ): ಕಳೆದ ಎರಡರಿಂದ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಮೇತ ಮಳೆ ಸುರಿದಿದೆ. ಘಾಟ್‌ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ ದೊಡ್ಡ ಹೋರ್ಡಿಂಗ್ ಬಿದ್ದಿದ್ದರಿಂದ 100 ಜನರು ಈ ಹೋರ್ಡಿಂಗ್‌ಗಳ ಅಡಿ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. ಈ ಅವಘಡದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ಮೃತರ ಸಂಬಂಧಿಕರಿಗೆ ಸರ್ಕಾರ ಐದು ಲಕ್ಷ ರೂಪಾಯಿ ನೆರವು ನೀಡಲಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾತನಾಡಿ, "ಈಗ 100 ಜನರು ಇದರಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಇದೆ. 51 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. 35 ರಿಂದ 40 ಜನರು ಇನ್ನೂ ಕೆಳಗೆ ಸಿಲುಕಿದ್ದಾರೆ. ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು. ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ? ಎಂಬುದನ್ನು ತನಿಖೆ ನಡೆಸಲಾಗುವುದು" ಎಂದು ಹೇಳಿದ್ದಾರೆ.
ಇನ್ನೊಂದೆಡೆ ಮುಂಬೈನ ವಡಾಲಾದಲ್ಲಿ ಬೀಸಿದ ಬಿರುಗಾಳಿಯಿಂದಾಗಿ ಪಾರ್ಕಿಂಗ್‌ನ ಭಾಗ ಕುಸಿದಿದೆ. ಈ ಪಾರ್ಕಿಂಗ್ ಸ್ಥಳವು ಕುಸಿದಾಗ, ಕೆಳಗೆ ಅನೇಕ ಕಾರುಗಳು ಇದ್ದವು. ಈ ಭಾಗದ ಪಾರ್ಕಿಂಗ್ ಕುಸಿದು ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿಯೂ ಹೊರ ಬಿದ್ದಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಮುಂಬೈನ ಸಿಯಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
''ಸಂಸದ ರಾಹುಲ್ ಶೆವಾಲೆ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಎರಡು ಪ್ರತ್ಯೇಕ ಘಟನೆಗಳು ಅತ್ಯಂತ ದುರದೃಷ್ಟಕರ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಮತ್ತು ಗಾಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ? ಎಂಬುದನ್ನು ಪರಿಶೀಲಿಸಲಾಗುವುದು'' ಎಂದು ಸಚಿವ ದೀಪಕ್ ಕೇಸರ್ಕರ್ ಸಹ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ : ಭಾರೀ ಮಳೆಗೆ ಹೈದರಾಬಾದ್‌ನಲ್ಲಿ ಗೋಡೆ ಕುಸಿತ: 7 ಮಂದಿ ಸಾವು - Wall Collapse