ETV Bharat / bharat

ಬೆಳಗಾವಿಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯ, ಕೇಂದ್ರಾಡಳಿತ ಪ್ರದೇಶ ಮಾಡಿ: ಆದಿತ್ಯ ಠಾಕ್ರೆ - UNION TERRITORY

ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮತ್ತೆ ಖ್ಯಾತೆ ತೆಗೆದಿದೆ. ಕರ್ನಾಟಕದ ಅತಿದೊಡ್ಡ ಜಿಲ್ಲೆಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಆದಿತ್ಯ ಠಾಕ್ರೆ
ಉದ್ಧವ್​ ಠಾಕ್ರೆ ಬಣದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ (ETV Bharat)
author img

By PTI

Published : Dec 9, 2024, 6:20 PM IST

ಮುಂಬೈ(ಮಹಾರಾಷ್ಟ್ರ): ಅತೀ ಹೆಚ್ಚು ಮರಾಠಿ ಭಾಷಿಕರನ್ನು ಹೊಂದಿರುವ ಕರ್ನಾಟಕದ ಬೆಳಗಾವಿಯನ್ನು ಮಹಾರಾಷ್ಟ್ರದಲ್ಲಿ ಸೇರಿಸಬೇಕು. ಈ ಪ್ರದೇಶವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎಂದು ಉದ್ಧವ್​ ಠಾಕ್ರೆ ಬಣದ ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸೋಮವಾರ ಒತ್ತಾಯಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮರಾಠಿ ಮಾತನಾಡುವ ಜನರಿಗೆ ಅನ್ಯಾಯವಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯ ಸಂಭ್ರಮಾಚರಣೆ ನಡೆಯುತ್ತಿದೆ. ಅತ್ತ, ನೆರೆಯ ರಾಜ್ಯದ ಬೆಳಗಾವಿಯಲ್ಲಿ ನಮ್ಮವರ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ಸೋಮವಾರದಿಂದ ಆರಂಭಗೊಂಡಿದೆ. ಇದಕ್ಕೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್​) ವಿರೋಧ ವ್ಯಕ್ತಪಡಿಸುತ್ತಿದೆ. ಜೊತೆಗೆ, ಅದು ವಾರ್ಷಿಕವಾಗಿ ಆಯೋಜಿಸುವ ಮಹಾಮೇಳಾವ್​ ಸಭೆಗೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದರ ಬೆನ್ನಲ್ಲೇ ಆದಿತ್ಯ ಠಾಕ್ರೆ ಈ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಏಕನಾಥ್​ ಶಿಂಧೆ ಅವರು ಮರಾಠಿ ಭಾಷಿಕರಿಗೆ ಹೆಚ್ಚಿನ ಅನುದಾನದ ಭರವಸೆ ನೀಡಿದ್ದರು. ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ ಆ ಭರವಸೆ ಮುಟ್ಟಿದೆಯೇ ಎಂದು ಪ್ರಶ್ನಿಸಿದರು.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಲು ಕೇಂದ್ರದ ಬಿಜೆಪಿ ನೇತೃತ್ವದ ಸರಕಾರಕ್ಕೆ ಮನಸ್ಸಿದೆಯೇ?. ಎರಡು ರಾಜ್ಯಗಳ ನಡುವಿನ ವ್ಯಾಜ್ಯದ ಜಿಲ್ಲೆಯನ್ನು ತಟಸ್ಥಗೊಳಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಈಗಲೂ ಅದಕ್ಕೆ ಬದ್ಧವಾಗಿದ್ದೇವೆ ಎಂದು ಆದಿತ್ಯ ಠಾಕ್ರೆ ಹೇಳಿದರು.

ಮಹಾರಾಷ್ಟ್ರದ ವಾದವೇನು?: ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್​ ಸೇರಿದಂತೆ ಗಡಿಯಲ್ಲಿರುವ ಸುಮಾರು 814 ಗ್ರಾಮಗಳು ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಮೊದಲಿನಿಂದಲೂ ಮೊಂಡು ವಾದ ಮಾಡುತ್ತಿದೆ. ಈ ಪ್ರದೇಶಗಳಲ್ಲಿ ಮರಾಠಿ ಭಾಷಿಕರು ಹೆಚ್ಚಿದ್ದಾರೆ. ಹೀಗಾಗಿ ಅವುಗಳನ್ನು ನಮ್ಮ ಸುಪರ್ದಿಗೆ ನೀಡಿ ಎಂದು ಒತ್ತಾಯಿಸುತ್ತಲೇ ಬರುತ್ತಿದೆ.

ಉಭಯ ರಾಜ್ಯಗಳ ಮಧ್ಯೆ ದೀರ್ಘಕಾಲದಿಂದ ನಡೆಯುತ್ತಿರುವ ಗಡಿ ಸಂಘರ್ಷ, ಇದೀಗ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಗಡಿ ವ್ಯಾಜ್ಯವು ಪ್ರಸ್ತುತ ಸುಪ್ರೀಂಕೋರ್ಟ್​ ಅಂಗಳದಲ್ಲಿದೆ. ಬೆಳಗಾವಿ ಅಧಿವೇಶನವನ್ನು ವಿರೋಧಿಸಿ ಎಂಇಎ ಸದಸ್ಯರು ಬೆಳಗಾವಿ ಪ್ರವೇಶಿಸಲು ಯತ್ನಿಸಿದ್ದು, ಅವರನ್ನು ಗಡಿಯಲ್ಲೇ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಶೀತದ ಅಲೆ ತೀವ್ರ: ಗುಲ್ಮಾರ್ಗ್​ನಲ್ಲಿ -9.0°C ತಾಪಮಾನ ದಾಖಲು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.