ETV Bharat / bharat

ಪಟಾಕಿ ಇಳಿಸಿ ಗೋಡೌನ್‌ಗೆ ಸ್ಥಳಾಂತರಿಸುವಾಗ ಭಾರಿ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ - ಭಾರಿ ಸ್ಫೋಟ

ಪಟಾಕಿ ಗೋದಾಮುದಲ್ಲಿ ಸ್ಫೋಟ ಸಂಭವಿಸಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಈ ದುರಂತದಲ್ಲಿ ಒಬ್ಬ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ವರದಿಯಾಗಿದೆ.

Massive blast  firecrackers godown  Kerala  ಭಾರಿ ಸ್ಫೋಟ  ಪಟಾಕಿ ಗೋದಾಮು
ಪಟಾಕಿ ಇಳಿಸಿ ಗೋಡೌನ್‌ಗೆ ಸ್ಥಳಾಂತರಿಸುವಾಗ ಭಾರಿ ಸ್ಫೋಟ, ಓರ್ವ ಸಾವು, ಹಲವರಿಗೆ ಗಾಯ
author img

By PTI

Published : Feb 12, 2024, 12:42 PM IST

ಎರ್ನಾಕುಲಂ (ಕೇರಳ): ಚುರಕಾಡ್ ಪ್ರದೇಶದಲ್ಲಿ ತ್ರಿಪ್ಪುನಿತುರಾ ಪಟಾಕಿ ಸಂಗ್ರಹ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು 12 ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಪುತ್ತಿಕಾವ್ ದೇವಸ್ಥಾನದ ಉತ್ಸವಕ್ಕೆ ಸಂಬಂಧಿಸಿದಂತೆ ಪಟಾಕಿ ಸಂಗ್ರಹಿಸುತ್ತಿದ್ದ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದೆ. ಅಂಗಡಿಗೆ ಪಟಾಕಿಗಳನ್ನು ಇಳಿಸುತ್ತಿರುವಾಗ ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಯಾಗಿದೆ. ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿದ್ದಾರೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ.

ಪೊಲೀಸರು ಹೇಳಿದ್ದೇನು?: ಸ್ಫೋಟದಲ್ಲಿ ಕನಿಷ್ಠ ಆರು ಮನೆಗಳು ಮತ್ತು ಕೆಲವು ಅಂಗಡಿಗಳು ಹಾನಿಗೊಳಗಾಗಿವೆ ಮತ್ತು ಒಂದು ಕಾರು ಸೇರಿದಂತೆ ಎರಡು ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಇದೀಗ ಬೆಂಕಿಯನ್ನು ಹತೋಟಿಗೆ ತರಲಾಗಿದೆ. "ಒಬ್ಬರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ ಮತ್ತು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಾವು ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ. ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ. ಆದರೆ, ವಾಹನದಲ್ಲಿ ತಂದ ಪಟಾಕಿಗಳನ್ನು ಇಳಿಸಿ ಗೋಡೌನ್‌ಗೆ ಸ್ಥಳಾಂತರಿಸುವಾಗ ಭಾರಿ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೊಟ್ಟಾಯಂನಲ್ಲಿ ಕಸಕ್ಕೆ ಬೆಂಕಿ : ಈ ಮಧ್ಯೆ, ಕೊಟ್ಟಾಯಂನ ಇಎಸ್‌ಐ ಕ್ವಾರ್ಟರ್ಸ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಕೊಟ್ಟಾಯಂನ ವಡವತ್ತೂರು ಇಎಸ್‌ಐ ಆಸ್ಪತ್ರೆಯ ಕ್ವಾರ್ಟರ್ಸ್‌ ಹಿಂಭಾಗದ ಜಮೀನಿನಲ್ಲಿ ಹಾಗೂ ಸಮೀಪದ ರಬ್ಬರ್‌ ತೋಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿನ್ನೆ (ಫೆಬ್ರವರಿ 11) ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ಕ್ವಾರ್ಟರ್ಸ್ ಹಿಂಭಾಗದ ಕಸ ಸೇರಿದಂತೆ ಕಸಕ್ಕೆ ಮೊದಲು ಬೆಂಕಿ ಹೊತ್ತಿಕೊಂಡಿತು. ನಂತರ ಬೆಂಕಿ ಹರಡಿತು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಯಾವುದೇ ಹಾನಿ ಸಂಭವಿಸಿಲ್ಲ.

ಓದಿ: ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 50ಕ್ಕೂ ಹೆಚ್ಚು ಮನೆಗಳು ಭಸ್ಮ, ಏಳು ಜನ ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.