ಜೈಪುರ (ರಾಜಸ್ಥಾನ): ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ ಸಂಭವಿಸಿ ಐವರು ಕಾರ್ಮಿಕರು ಸಜೀವವಾಗಿ ದಹನಗೊಂಡಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ಇಂದು ನಡೆದಿದೆ. ಫ್ಯಾಕ್ಟರಿಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗಲೇ ಬಾಯ್ಲರ್ ಸ್ಫೋಟಗೊಂಡು ಈ ದುರಂತ ಜರುಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇಲ್ಲಿನ ಬಸ್ಸಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈನಾಡದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ, ಬಾಯ್ಲರ್ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದೆ. ನಂತರದಲ್ಲಿ ಕೆಮಿಕಲ್‌ಗೆ ಬೆಂಕಿ ತಗುಲಿದೆ. ಇದರ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ಅವಘಡದ ಮಾಹಿತಿ ಪಡೆದ ಎಸಿಪಿ ಮುಖೇಶ್ ಚೌಧರಿ, ಬಸ್ಸಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಅಗ್ನಿಶಾಮಕ ವಾಹನಗಳ ನೆರವಿನೊಂದಿಗೆ ಸಾಕಷ್ಟು ಹರಸಾಹಸ ಪಟ್ಟು ಬೆಂಕಿ ಹತೋಟಿಗೆ ತರಲಾಗಿದೆ. ಮತ್ತೊಂದೆಡೆ, ಐವರು ಕಾರ್ಮಿಕರ ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿದ್ದಾರೆ.
ಇದನ್ನೂ ಓದಿ: ಬಿಜಾಪುರ - ದಂತೇವಾಡ ಗಡಿಯಲ್ಲಿ ನಕ್ಸಲ್ ಕಾರ್ಯಾಚರಣೆ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಬಲಿ