ETV Bharat / bharat

ಜಮ್ಮುವಿನ ಕಥುವಾದಲ್ಲಿ ಭೀಕರ ಉಗ್ರ ದಾಳಿ: ಐವರು ಯೋಧರು ಹುತಾತ್ಮ, ಹಲವರಿಗೆ ಗಾಯ - MILITANTS ATTACKED - MILITANTS ATTACKED

ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ ನಡೆದಿದೆ. ಸೋಮವಾರ ಭಾರತೀಯ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ.

ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ
ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ (ETV Bharat)
author img

By ETV Bharat Karnataka Team

Published : Jul 8, 2024, 7:53 PM IST

Updated : Jul 8, 2024, 10:57 PM IST

ಜಮ್ಮು- ಕಾಶ್ಮೀರ : ಶಾಂತವಾಗಿದ್ದ ಕೇಂದ್ರಾಡಳಿತ ಪ್ರದೇಶ ಜಮ್ಮು - ಕಾಶ್ಮೀರದಲ್ಲಿ ಸರಣಿ ಉಗ್ರರ ದಾಳಿಗಳು ನಡೆಯುತ್ತಿದ್ದು, ಇಂದು (ಸೋಮವಾರ) ರಕ್ತದೋಕುಳಿ ಹರಿದಿದೆ. ಕಥುವಾ ಜಿಲ್ಲೆಯಲ್ಲಿ ಉಗ್ರರ ಗುಂಪು ಯೋಧರ ವಾಹನದ ಮೇಲೆ ಗುಂಡಿನ ಮಳೆಗರೆದಿದ್ದು, ಐವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಕಥುವಾ ಪಟ್ಟಣದಿಂದ 150 ಕಿಮೀ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದ ಬಳಿ ಮಧ್ಯಾಹ್ನ 3.30 ರ ಸುಮಾರಿಗೆ ನಿತ್ಯ ಗಸ್ತು ತಿರುಗುತ್ತಿದ್ದ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ಎಸೆದು, ಗುಂಡಿನ ದಾಳಿ ನಡೆಸಿದ್ದಾರೆ.

ಹತ್ತು ಯೋಧರಿದ್ದ ಸೇನಾ ವಾಹನದ ಮೇಲೆ ಉಗ್ರರ ಗುಂಪು ದಾಳಿ ನಡೆಸಿದೆ. ಇದರ ಪರಿಣಾಮವಾಗಿ ಐವರು ಸೈನಿಕರು ಮಾರಣಾಂತಿಕ ಗಾಯಗೊಂಡಿದ್ದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರೂ, ಭಯೋತ್ಪಾದಕರು ಹತ್ತಿರದ ಅರಣ್ಯಕ್ಕೆ ಓಡಿಹೋದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನುಸುಳಿ ಬಂದ ಮೂವರು ಉಗ್ರರು ಈ ದಾಳಿ ನಡೆಸಿದ್ದಾರೆ. ಭಾರೀ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ರಕ್ತಪಿಪಾಸುಗಳು ಸೇನಾ ವಾಹನದ ಮೇಲೆ ದಾಳಿ ನಡೆಸಿದ ಬಳಿಕ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದಾರೆ. ಉಗ್ರರ ಹುಟ್ಟಡಗಿಸಲು ಸೇನಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 10 ಯೋಧರು ಗಾಯಗೊಂಡಿದ್ದಾರೆ. ಅವರಲ್ಲಿ ನಾಲ್ವರು ಮೊದಲು ಸಾವಿಗೀಡಾದರು. ತೀವ್ರ ಗಾಯಗೊಂಡಿದ್ದ ಮತ್ತೊಬ್ಬ ಸೇನಾ ಸಿಬ್ಬಂದಿ ಆಸ್ಪತ್ರೆಯಲ್ಲಿ ಅಸುನೀಗಿದರು. ಇದರಿಂದ ಸಾವಿನ ಸಂಖ್ಯೆ ಐದಕ್ಕೆ ಏರಿದೆ.

ಕಳೆದ ನಾಲ್ಕು ವಾರಗಳಲ್ಲಿ ಕಥುವಾ ಜಿಲ್ಲೆಯಲ್ಲಿ ನಡೆದ ಎರಡನೇ ಉಗ್ರ ದಾಳಿ ಇದಾಗಿದೆ. ಜೂನ್ 12 ಮತ್ತು 13 ರಂದು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಮತ್ತು ಒಬ್ಬ ಸಿಆರ್‌ಪಿಎಫ್ ಯೋಧ ಸಾವನ್ನಪ್ಪಿದ್ದ.

ಜೂನ್ 26 ರಂದು ದೋಡಾ ಜಿಲ್ಲೆಯ ಗಂಡೋ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಹೈಬ್ರಿಡ್​ ಉಗ್ರರು ಸಾವನ್ನಪ್ಪಿದ್ದರು. ಇದಾದ 15 ದಿನಗಳೊಳಗೆ ಮತ್ತೊಂದು ಭೀಕರ ಭಯೋತ್ಪಾದಕ ದಾಳಿ ನಡೆದಿದೆ.

ರಿಯಾಸಿ ಜಿಲ್ಲೆಯ ಶಿವ ಖೋರಿ ದೇವಸ್ಥಾನದಿಂದ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಜೂನ್ 9 ರಂದು ಭಯೋತ್ಪಾದಕರು ದಾಳಿ ನಡೆಸಿ ವಾಹನದ ಚಾಲಕ ಮತ್ತು ಕಂಡಕ್ಟರ್ ಸೇರಿದಂತೆ ಒಂಬತ್ತು ಜನರನ್ನು ಕೊಂದಿದ್ದರು. ಘಟನೆಯಲ್ಲಿ 41 ಮಂದಿ ಗಾಯಗೊಂಡಿದ್ದರು. ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಆರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು.

ಇದನ್ನೂ ಓದಿ: ಕಾಶ್ಮೀರದಲ್ಲಿ ಅಧಿಕಾರಿಗಳು, ರಾಜಕೀಯ ಮುಖಂಡರು ಸೇರಿ 28 ಜನರ ಭದ್ರತೆ ಹಿಂತೆಗೆತ - security cover withdrawal

Last Updated : Jul 8, 2024, 10:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.