ETV Bharat / bharat

ಸಂಸತ್ತಿನ ಮುಂಗಾರು ಅಧಿವೇಶನ: ಜುಲೈ 21ರಂದು ಸರ್ವಪಕ್ಷ ಸಭೆಗೆ ಹಾಜರಾಗಲ್ಲ ಎಂದ ಟಿಎಂಸಿ - all party meet - ALL PARTY MEET

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಜುಲೈ 21 ರಂದು ಸರ್ವಪಕ್ಷ ಸಭೆ ಕರೆದಿದೆ.

ಸಂಸತ್ ಭವನ
ಸಂಸತ್ ಭವನ (IANS)
author img

By PTI

Published : Jul 16, 2024, 7:00 PM IST

ನವದೆಹಲಿ: ಮುಂದಿನ ಸೋಮವಾರದಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಮುಂಚಿತವಾಗಿ ಸರಕಾರವು ಜುಲೈ 21ರಂದು ಸರ್ವಪಕ್ಷ ಸಭೆ ಕರೆದಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಭಾನುವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸಭೆ ಕರೆದಿದ್ದಾರೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಸಭೆಗೆ ಹಾಜರಾದಲ್ಲಿ ವಿರೋಧ ಪಕ್ಷದ ನಾಯಕನಾಗಿ ಇದು ಅವರ ಮೊದಲ ಸರ್ವಪಕ್ಷ ಸಭೆ ಹಾಜರಾಗಲಿದೆ. ಜುಲೈ 21 ರಂದು ಹುತಾತ್ಮರ ದಿನಾಚರಣೆ ಆಚರಿಸುತ್ತಿರುವುದರಿಂದ ಪಕ್ಷದ ಯಾವುದೇ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ತಿಳಿಸಿದೆ. ತಮ್ಮ ಪಕ್ಷವು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯಸಭೆಯಲ್ಲಿ ಟಿಎಂಸಿಯ ಸಂಸದೀಯ ಪಕ್ಷದ ನಾಯಕ ಡೆರೆಕ್ ಒ'ಬ್ರಿಯಾನ್ ಅವರು ರಿಜಿಜು ಅವರಿಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

"1993ರಲ್ಲಿ ಪೊಲೀಸ್ ಗೋಲಿಬಾರ್​ನಲ್ಲಿ ಕೊಲ್ಲಲ್ಪಟ್ಟ ನಮ್ಮ 13 ಸಹೋದ್ಯೋಗಿಗಳ ಗೌರವಾರ್ಥವಾಗಿ ಕಳೆದ 30 ವರ್ಷಗಳಿಂದ ಬಂಗಾಳದಲ್ಲಿ ಜುಲೈ 21 ರಂದು ಹುತಾತ್ಮ ದಿನಾಚರಣೆ ಆಚರಿಸಲಾಗುತ್ತದೆ. ಹೀಗಾಗಿ ಅವತ್ತು ಪಕ್ಷದ ಯಾವುದೇ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ" ಎಂದು ಡೆರೆಕ್ ಒ'ಬ್ರಿಯಾನ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಸಿಪಿಐ (ಎಂ) ನೇತೃತ್ವದ ಎಡರಂಗ ಅಧಿಕಾರದಲ್ಲಿದ್ದಾಗ 1993 ರಲ್ಲಿ ರಾಜ್ಯ ಸಚಿವಾಲಯವಾದ ರೈಟರ್ಸ್ ಬಿಲ್ಡಿಂಗ್​ಗೆ ಮುತ್ತಿಗೆ ಹಾಕಿದಾಗ ಪೊಲೀಸರು ನಡೆಸಿದ ಗೋಲಿಬಾರ್​ನಲ್ಲಿ 13 ಕಾಂಗ್ರೆಸ್​ ಕಾರ್ಯಕರ್ತರು ಸಾವಿಗೀಡಾಗಿದ್ದರು. ಅವರ ಬಲಿದಾನದ ನೆನಪಿಗಾಗಿ ಜುಲೈ 21 ರಂದು ಹುತಾತ್ಮರ ದಿನ ಆಚರಿಸಲಾಗುತ್ತದೆ.

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 12 ರಂದು ಕೊನೆಗೊಳ್ಳಲಿದೆ. ಜುಲೈ 23ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. 18 ನೇ ಲೋಕಸಭೆ ರಚನೆಯಾದ ನಂತರದ ಮೊದಲ ಸಂಸತ್ ಅಧಿವೇಶನದಲ್ಲಿ ಪ್ರತಿಪಕ್ಷ ಐಎನ್​ಡಿಐಎ ಬಣವು ಇತ್ತೀಚಿನ ನೀಟ್ ವಿವಾದ, ಮಣಿಪುರ ಪರಿಸ್ಥಿತಿ ಮತ್ತು ಬೆಲೆ ಏರಿಕೆಯಂತಹ ವಿಷಯಗಳನ್ನು ಬಲವಾಗಿ ಪ್ರಸ್ತಾಪಿಸಿತ್ತು. ಇದರಿಂದ ಸದನವನ್ನು ಹಲವಾರು ಬಾರಿ ಮುಂದೂಡಲಾಗಿತ್ತು.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸುವಾಗ ಉಭಯ ಸದನಗಳಲ್ಲಿ ಪ್ರತಿಭಟನೆಗಳು ನಡೆದವು. ಲೋಕಸಭೆಯಲ್ಲಿ ಪ್ರಧಾನಿಯವರ ಉತ್ತರದ ಸಮಯದಲ್ಲಿ ವಿರೋಧ ಪಕ್ಷದ ಸಂಸದರು ಮಣಿಪುರದ ಬಗ್ಗೆ ಹೇಳಿಕೆ ನೀಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದ್ದವು.

ಇದನ್ನೂ ಓದಿ : ಸುಪ್ರಿಂ ಕೋರ್ಟ್​ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರದ ಅಸ್ತು - appointment of Justices

ETV Bharat Logo

Copyright © 2025 Ushodaya Enterprises Pvt. Ltd., All Rights Reserved.