ETV Bharat / bharat

ಮತ್ತೆ 70 ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ: 11 ದಿನದಲ್ಲಿ 250 ವಿಮಾನಗಳಿಗೆ 'ಹುಸಿ' ಕಾಟ - FLIGHTS RECEIVE BOMB THREATS

ಅಂತಾರಾಷ್ಟ್ರೀಯ ವಿಮಾನಗಳಿಗೆ ಹುಸಿ ಬಾಂಬ್​ ಕರೆಗಳು ಬರುವುದು ನಿಲ್ಲುತ್ತಿಲ್ಲ. ಗುರುವಾರವೂ 70ಕ್ಕೂ ಹೆಚ್ಚು ವಿಮಾನಗಳಿಗೆ ಎಚ್ಚರಿಕೆ ರವಾನಿಸಲಾಗಿದೆ.

ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ
ಸಾಂದರ್ಭಿಕ ಚಿತ್ರ (ETV Bharat)
author img

By PTI

Published : Oct 24, 2024, 8:00 PM IST

ನವದೆಹಲಿ: ವಿಮಾನಗಳಿಗೆ ಹುಸಿ ಬಾಂಬ್​ ಬೆದರಿಕೆ ಕರೆ ಸರಣಿ 11ನೇ ದಿನವೂ ಮುಂದುವರಿದಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳ 70ಕ್ಕೂ ಹೆಚ್ಚು ವಿಮಾನಗಳಿಗೆ ಗುರುವಾರವೂ ಬಾಂಬ್ ಬೆದರಿಕೆ ಬಂದಿದ್ದು, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಏರ್ ಇಂಡಿಯಾ, ವಿಸ್ತಾರಾ ಮತ್ತು ಇಂಡಿಗೋದ ತಲಾ 20 ವಿಮಾನಗಳಿಗೆ ಬೆದರಿಕೆಗಳು ಬಂದಿದ್ದರೆ, ಆಕಾಶ್​ ಏರ್‌ನ 14 ವಿಮಾನಗಳಿಗೆ ಹುಸಿ ಕರೆ ಬಂದಿವೆ ಎಂದು ಮೂಲಗಳು ತಿಳಿಸಿವೆ. ಈ ಮೂಲಕ ಕಳೆದ 11 ದಿನಗಳಲ್ಲಿ ಸುಮಾರು 250 ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನಗಳಿಗೆ ಕಿಡಿಗೇಡಿಗಳು ಕಾಟ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಆಕಾಶ್​ ಏರ್​ ವಿಮಾನಯಾನ ಸಂಸ್ಥೆಯ ವಕ್ತಾರರು, "ಅಕ್ಟೋಬರ್ 24ರಂದು ಸಂಸ್ಥೆಯ 14 ವಿಮಾನಗಳಿಗೆ ಭದ್ರತಾ ಎಚ್ಚರಿಕೆ ವಹಿಸುವ ಕರೆಗಳು ಬಂದಿವೆ. ಏರ್​ಲೈನ್ಸ್​​ನ ಕ್ಷಿಪ್ರ ಕಾರ್ಯಪಡೆ ತಂಡಗಳು ಪರಿಸ್ಥಿತಿಯ ಮೇಲೆ ನಿಗಾ ವಹಿಸಿವೆ. ಭದ್ರತೆ ಮತ್ತು ನಿಯಂತ್ರಣ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿವೆ. ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಪ್ರಯಾಣಿಕರ ಸುರಕ್ಷತೆ ಕಾಪಾಡಲಾಗಿದೆ" ಎಂದು ತಿಳಿಸಿದ್ದಾರೆ.

ಆರೋಪಿಗಳಿಗೆ ಜೈಲು, ನೋ ಫ್ಲೈ ಶಿಕ್ಷೆ: ಏರ್​​ಲೈನ್ಸ್​ಗಳಿಗೆ ನಿರಂತರವಾಗಿ ಬಾಂಬ್​ ಬೆದರಿಕೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಸಿಕ್ಕಿಬೀಳುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ಪ್ರಸ್ತಾಪಿಸಿದ್ದಾರೆ.

ಹುಸಿ ಕರೆ ಮಾಡಿ ಪೀಡಿಸುವ ಆರೋಪಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಬೇಕು ಮತ್ತು ಅಂಥವರವನ್ನು ಪೂರ್ಣಾವಧಿಗೆ ನೋ ಫ್ಲೈ ಪಟ್ಟಿಗೆ ಸೇರಿಸುವ ಕಾನೂನು ತರಲು ಕೇಂದ್ರ ಸರ್ಕಾರ ಯೋಜಿಸಿದೆ ಎಂದಿದ್ದರು.

ಹುಸಿ ಬಾಂಬ್​​ ಕರೆಯಿಂದಾಗಿ ಸಂಚಾರದಲ್ಲಿ ಅಸ್ತವ್ಯಸ್ತವಾಗುವ ಜೊತೆಗೆ, ಪ್ರಯಾಣಿಕರ ಸುರಕ್ಷತೆಯೂ ಸವಾಲಾಗುತ್ತದೆ. ಹೀಗಾಗಿ ಸರ್ಕಾರ ಆರೋಪಿಗಳ ವಿರುದ್ಧ ಕಠಿಣ ಕ್ರಮ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾಗಿ ಅವರು ತಿಳಿಸಿದ್ದರು.

ಇದನ್ನೂ ಓದಿ: ಪ್ರಿಯಾಂಕಾ ನಾಮಪತ್ರ ಸಲ್ಲಿಸುವ ವೇಳೆ ಮಲ್ಲಿಕಾರ್ಜುನ್​ ಖರ್ಗೆಗೆ ಅವಮಾನ: ಬಿಜೆಪಿ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.